Homeಕರ್ನಾಟಕಮುಡಾ ಪ್ರಕರಣ| ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶ

ಮುಡಾ ಪ್ರಕರಣ| ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು ತಾನು ನಿರ್ಧರಿಸುವವರೆಗೆ ಲೋಕಾಯುಕ್ತ ತನಿಖೆ ನಡೆಸಬಾರದು ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಅರ್ಜಿ ವಿಚಾರಣೆ ನಡೆಸಿ, ಸಿಬಿಐ ತನಿಖೆಗೆ ಕೋರಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನವರಿ 15ಕ್ಕೆ ಮುಂದೂಡಿದರು.

ವಿಚಾರಣೆಗೆ ಹಾಜರಾಗಿದ್ದ ಸಿದ್ದರಾಮಯ್ಯ ಅವರ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಪರ ವಾದ ಮಂಡಿಸಿದ ವಕೀಲರು, “ಎರಡು ದಿನಗಳ ಹಿಂದೆಯಷ್ಟೇ ನೋಟಿಸ್​ ಜಾರಿಯಾಗಿದೆ; ಅದಕ್ಕೆ ಆಕ್ಷೇಪಣೆ ಸಿದ್ದಪಡಿಸಬೇಕಾಗಿದೆ. ಆದ್ದರಿಂದ, ಅರ್ಜಿಯ ವಿಚಾರಣೆ ಮುಂದೂಡಬೇಕು” ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಪರ ಹಾಜರಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್​, “ಆಕ್ಷೇಪಣೆ ಸಲ್ಲಿಸಲು ನಮಗೆ ಕಾಲಾವಕಾಶ ನೀಡಬೇಕು” ಎಂದರು. “ಜಾರಿ ನಿರ್ದೇಶನಾಲಯವನ್ನು(ಇ.ಡಿ) ಪ್ರತಿವಾದಿಯನ್ನಾಗಿಸಬೇಕು ಎಂದು ಎಂದು ಪೀಠ ಸೂಚನೆ ನೀಡಿತು.

“ನಮ್ಮ ಕಕ್ಷಿದಾರರಿಗೆ ಈವರೆಗೂ ನೋಟಿಸ್​ ಜಾರಿ ಮಾಡಿಲ್ಲ. ಆದರೂ, ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬಾರದೆಂದು ಆದೇಶಿಸಲಾಗಿದೆ. ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೇಳಿಯೇ ಇಲ್ಲ. ಆದರೂ ಈ ಆದೇಶ ನೀಡಲಾಗಿದೆ. ಲೋಕಾಯುಕ್ತ ತನಿಖೆಯಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ನಮ್ಮ ವಾದ ಆಲಿಸದೆಯೇ ಸ್ವಯಂಪ್ರೇರಿತವಾಗಿ ಈ ಆದೇಶ ನೀಡುವುದು ಎಷ್ಟು ಸರಿ” ಎಂದು ರವಿವರ್ಮ ಕುಮಾರ್​ ನ್ಯಾಯಾಲಯದ ಗಮನಕ್ಕೆ ತಂದರು.

“ಅರ್ಜಿ ಸಲ್ಲಿಕೆಯಾಗಿ 35 ದಿನಗಳಾಗಿವೆ. ಆದರೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿರಲಿಲ್ಲ. ಹೀಗಾಗಿ ಹ್ಯಾಂಡ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಪ್ರತಿವಾದಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಯಾವುದೇ ಮಧ್ಯಂತರ ತಡೆ ನೀಡಿಲ್ಲ. ಸೆಷನ್ಸ್ ಕೋರ್ಟ್​ಗೆ ಡಿ.24ಕ್ಕೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಬೇಕಿದೆ. ಅಂತಿಮ ವರದಿ ಸಲ್ಲಿಸಿದರೆ ಅರ್ಜಿ ವಿಚಾರಣೆಗೆ ತೊಂದರೆಯಾಗುತ್ತದೆ. ಹೀಗಾಗಿ, ಅಂತಿಮ ವರದಿ ಸಲ್ಲಿಸಲು ನೀಡಿರುವ ಗಡುವು ವಿಸ್ತರಿಸಲಾಗುತ್ತಿದೆ” ಎಂದು ನ್ಯಾಯಪೀಠ ತಿಳಿಸಿತು.

“ಈ ಹಿಂದೆ ಜನವರಿ 28ರವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಸಲ್ಲಿಕೆಗೆ ಕಾಲಾವಕಾಶ ನೀಡುತ್ತಿದ್ದೇನೆ” ಎಂದು ತಿಳಿಸಿದ ನ್ಯಾಯಾಧಿಶರು, ವಿಚಾರಣೆಯನ್ನು ಮುಂದೂಡಿದರು.

ಇದನ್ನೂ ಓದಿ; ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಸಿಟಿ ರವಿಗೆ ಮಂತ್ರಿ ಲಕ್ಷ್ಮಿ ಹೆಬ್ಬಾಲ್ಕರ್ ಅವರ ಬೆಂಬಲಿಗರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...