ಸಕ್ಕರೆ ನಾಡು ಮಂಡ್ಯದಲ್ಲಿ ಇಂದು, ನಾಳೆ ಮತ್ತು ನಾಳಿದ್ದು ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು.
ಇಂದು ಬೆಳಿಗ್ಗೆ 6.30ಕ್ಕೆ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರ ಉಪಸ್ಥಿತಿಯಲ್ಲಿ ಕೃಷಿ ಇಲಾಖೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎನ್.ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ನೆವೇರಿಸಿದರು.

ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ಅವರು ನಾಡ ಧ್ವಜಾರೋಹಣ ಮಾಡಿದರು.
ಈ ವೇಳೆ ಶಾಸಕ ರಮೇಶ್ ಬಂಡಿ ಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಶೇಷ ರಥದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ
ಧ್ವಜಾರೋಹಣದ ಬಳಿಕ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು. ಚನ್ನಬಸಪ್ಪ ಅವರನ್ನು “ಅರಮನೆ ದರ್ಬಾರ್ ಸಿಂಹಾಸನ” ಒಳಗೊಂಡ ವಿಶೇಷ ರಥದಲ್ಲಿ ಪೊಲೀಸ್ ಬ್ಯಾಂಡ್ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಅಕ್ಷರ ಜಾತ್ರೆಗೆ ಕ್ಷಣ ಗಣನೆ ಆರಂಭವಾಗಿದೆ!
ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರಿಗೂ ಅಕ್ಕರೆಯ ಸ್ವಾಗತ.
ಬನ್ನಿ, ಈ ನಾಡು ನುಡಿಯ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ.#87ನೇಅಖಿಲಭಾರತಕನ್ನಡಸಾಹಿತ್ಯಸಮ್ಮೇಳನ #ಕನ್ನಡಸಾಹಿತ್ಯಸಮ್ಮೇಳನ #ಸಾಹಿತ್ಯಸಮ್ಮೇಳನ… pic.twitter.com/gnWs3ufl9G
— N Chaluvarayaswamy (@NCheluvarayaS) December 19, 2024
ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಉದ್ಘಾಟನೆ
ಬೆಳಿಗ್ಗೆ 10.30ಕ್ಕೆ ಪ್ರಧಾನ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಪ್ರಮುಖ ಸಾಹಿತಿಗಳು ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ವಿವಿಧ ಗೋಷ್ಠಿಗಳಿಗೆ ಚಾಲನೆ ಸಿಗಲಿದೆ.
ಇದನ್ನೂ ಓದಿ : ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪ್ರತಿದೂರು : ಇಂದು ಬಿಜೆಪಿ-ಕಾಂಗ್ರೆಸ್ ಪ್ರತಿಭಟನೆ


