Homeಕರ್ನಾಟಕಸಿ.ಟಿ ರವಿ ಬಂಧನ | ಯಾವ ಹೆಣ್ಣು ಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು...

ಸಿ.ಟಿ ರವಿ ಬಂಧನ | ಯಾವ ಹೆಣ್ಣು ಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿ.ಟಿ ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ, ಅವರ ಬಂಧನ ಏಕೆ ಆಯ್ತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಡ್ಯದಲ್ಲಿ ಮಾತನಾಡಿದ ಅವರು, ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ. ಸಿ.ಟಿ ರವಿಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಆದರೆ ಇದೊಂದು ಗಂಭೀರ ಸ್ವರೂಪದ ಅಪರಾಧ ಎಂದರು.

ಸಿ.ಟಿ ರವಿಯವರು ತಾವು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಆದರೆ, ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ. ಕೀಳು ಪದಬಳಕೆಯನ್ನು ಕೇಳಿರುವುದಾಗಿ ಅಲ್ಲಿಯೇ ಇದ್ದ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ ಎಂದು ಹೇಳಿದರು.

ಸಿ.ಟಿ ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ. ಬೆಳಗಾವಿಯಲ್ಲಿ ಜನರ ಆಕ್ರೋಶದಿಂದ ಸಿ.ಟಿ ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ : ಕನಿಷ್ಠ 6 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ದಕ್ಷಿಣ ಗಾಝಾದ ನಾಸರ್ ಆಸ್ಪತ್ರೆಯ ಕಟ್ಟಡವೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಖಾನ್ ಯೂನಿಸ್‌ನಲ್ಲಿರುವ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ದಾಳಿ...

ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

ತಪ್ಪಾಗಿ ಬೇರೆ ಬಸ್ ಹತ್ತಿ ಇಳಿದ ಇಬ್ಬರು ಪ್ರಯಾಣಿಕರ ವಿರುದ್ಧ ಕೋಮುವಾದಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಆಧರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್ ಒಬ್ಬರನ್ನು...

ನೊಂದವರ ದನಿಯಾಗಿ, ಶೋಷಿತರ ಹೋರಾಟದ ಶಕ್ತಿಯಾಗಿ ಬೆಳೆದ ಶಿವರಾಮ ಮೋಘ: ಡಾ. ಪಿ. ನಂದಕುಮಾರ್

ಭಾರತದ ಸಾಂಸ್ಕೃತಿಕ ಚರಿತ್ರೆಯಲ್ಲಿ ಹೈದರಾಬಾದ್ ಕರ್ನಾಟಕ’ (ಕಲ್ಯಾಣ ಕರ್ನಾಟಕ) ಪ್ರದೇಶಕ್ಕೆ ವಿಶೇಷವಾದ ಸ್ಥಾನವಿದೆ. ಹಲವು ಸಾಂಸ್ಕೃತಿಕ ವಿಶೇಷತೆಯನ್ನು ಒಳಗೊಂಡಿರುವ ಈ ಪ್ರದೇಶವು ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಶ್ರೀವಿಜಯ...

ಅರ್ಜೆಂಟೀನಾದ ನೌಕಾಪಡೆ -ವಾಯುಪಡೆಯನ್ನು ‘ಭಯೋತ್ಪಾದಕ ಸಂಸ್ಥೆಗಳು’ ಎಂದು ಘೋಷಿಸಿದ ಇರಾನ್‌

ಅರ್ಜೆಂಟೀನಾದ ನೌಕಾಪಡೆ ಮತ್ತು ವಾಯುಪಡೆಯನ್ನು ಇರಾನ್ ಸರ್ಕಾರವು ಭಯೋತ್ಪಾದಕ ಸಂಸ್ಥೆಗಳು ಎಂದು ಘೋಷಿಸಿದ್ದು, ಈ ವರ್ಷದ ಆರಂಭದಲ್ಲಿ ಟೆಹ್ರಾನ್‌ನ 'ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್' (ಐಆರ್ ಜಿಸಿ) ಅನ್ನು ಕಪ್ಪುಪಟ್ಟಿಗೆ ಸೇರಿಸುವ ಬ್ಯೂನಸ್...

ಎಸ್‌ಐಆರ್ ಅವಧಿಯಲ್ಲಿ ಕೈಬಿಡಲಾದ ವ್ಯಕ್ತಿಗಳ ಗುರುತಿನ ಚೀಟಿ ಸಂಖ್ಯೆ ಮರುಸ್ಥಾಪನೆ ಕೋರಿ ಅರ್ಜಿ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಇಬ್ಬರು ಅರ್ಜಿದಾರರು, ತಮ್ಮ ಪರಿಷ್ಕೃತ ಪರಿಹಾರ ಪ್ರಕ್ರಿಯೆಯನ್ನು ಕೇವಲ ಏಳು ರಾಜ್ಯಗಳಿಗೆ ಸೀಮಿತಗೊಳಿಸುವ ಬದಲು, ಕರಡು ಪಟ್ಟಿಯಿಂದ ಕೈಬಿಡಲಾದ...

ಜಮ್ಮು ಕಾಶ್ಮೀರ : CRPF ತುಕಡಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ ; ಮೂವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನ.11) ನಡೆದ ಭಯೋತ್ಪಾದಕ ದಾಳಿಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್‌)ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ಚೆಕ್‌ಪಾಯಿಂಟ್ ಒಂದರಲ್ಲಿ ನಿಯೋಜನೆಗೊಂಡಿದ್ದ ಭದ್ರತಾ...

‘ಮಾಲಿನ್ಯ ಹೆಚ್ಚಾದರೆ ಕಡಿಮೆಯಾಗುತ್ತದೆ, ಚಿಂತೆ ಏಕೆ?’: ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಜನರ ಜೀವಕ್ಕೆ ಕಂಟಕವಾಗುತ್ತಿರುವ ಬೆನ್ನಲ್ಲೇ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ತೀವ್ರ ಚರ್ಚೆಗೆ...

‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

ಕೇರಳದ ಭ್ರಷ್ಟಾಚಾರ ನಿಗ್ರಹ ಮತ್ತು ವಿಜಿಲೆನ್ಸ್ ಬ್ಯೂರೋ (ವಿಎಸಿಬಿ) ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ. 2006ರಲ್ಲಿ ಗ್ಯಾನೇಶ್ ಕುಮಾರ್...

ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಮತದಾರರು ನಾಪತ್ತೆ : ನ.26ರಂದು ಬೃಹತ್ ಪ್ರತಿಭಟನೆ

ತಮಿಳುನಾಡಿನ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಒಟ್ಟು 74.07 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಯಂಗ್ ಸಿಟಿಝನ್ಸ್ ಕಲೆಕ್ಟಿವ್ (ಐವೈಸಿಸಿ) ಗಂಭೀರ ಆರೋಪ ಮಾಡಿದ್ದು, ಈ ಹೆಸರುಗಳ...

ವಾಯುಮಾಲಿನ್ಯದಿಂದ ಜನರ ಜೀವಕ್ಕೆ ಕುತ್ತು: ‘ಭಾರತೀಯರು ಅನಾಥರಾಗಿ ಗ್ಯಾಸ್ ಚೇಂಬರ್‌ನಲ್ಲಿ ಸಿಲುಕಿದ್ದಾರೆ’; ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಎನ್‌ಜಿಟಿಗೆ ಮನವಿ

ನವದೆಹಲಿ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಜನರು ಉಸಿರಾಡುವುದೇ ಜೀವಕ್ಕೆ ಅಪಾಯಕಾರಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಕಾರಿ ಗಾಳಿಯ ನಡುವೆ ಬದುಕುತ್ತಿರುವ ಜನರ ಆರೋಗ್ಯ ಮತ್ತು...