2024ನೇ ಸಾಲಿನ ಶೈಕ್ಷಣಿಕ ವರ್ಷ ಕೊನೆಗೊಳ್ಳುತ್ತಿದ್ದರೂ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೇ ಮಂಜೂರಾಗಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ ಒಪ್ಪಿಕೊಂಡಿದೆ. ಅದಾಗ್ಯೂ, ಈ ವಿಚಾರವು ಸರ್ಕಾರದ ಗಮನಕ್ಕೆ ಬಂದಿದೆ ಸಾಮಾಜಿಕ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಶಾಸಕರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದ ಸಚಿವ ಮಹದೇವಪ್ಪ ಅವರು, “2024-25ನೇ ಸಾಲಿನಲ್ಲಿ ಮೆಟ್ರಿ ಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿಯಲ್ಲಿ ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿ ಹಾಗೂ ಪಾವತಿಯು ಪ್ರಗತಿಯಲ್ಲಿದೆ” ಎಂದು ಹೇಳಿದ್ದಾರೆ. ಶೈಕ್ಷಣಿಕ ವರ್ಷ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಮತ್ತು ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 9,12,801 ಅರ್ಜಿಗಳನ್ನು ಸ್ವೀಕರಿಸಿಸಲಾಗಿದೆ” ಎಂದು ಅವರು ಉತ್ತರಿಸಿದ್ದಾರೆ.
“ಸ್ವೀಕರಿಸಲಾದ ಅರ್ಜಿಗಳಲ್ಲಿ ಇಲ್ಲಿಯವರೆಗೆ 8,07,515 ಅರ್ಜಿಗಳಿಗೆ ಅನುಮೋದನೆ ನೀಡಿದೆ. ಈ ಪೈಕಿ 7,55,125 ವಿದ್ಯಾರ್ಥಿಗಳಿಗೆ ಒಟ್ಟಾರೆ 107.34 ಕೋಟಿ ರೂ. ವಿದ್ಯಾರ್ಥಿ ವೇತನ ಪಾವತಿಯಾಗಿದೆ. ಸ್ವೀಕರಿಸಿರುವ ಅರ್ಜಿಗಳ ಅಂಕಿ ಅಂಶಗಳ ಪ್ರಕಾರ ಇನ್ನೂ 1,05,286 ವಿದ್ಯಾರ್ಥಿಗಳ ಅರ್ಜಿಗಳನ್ನು ಅನುಮೋದಿಸಲು ಬಾಕಿ ಇದೆ” ಎಂದು ಸಚಿವರು ಹೇಳಿದ್ದಾರೆ.
“ಈ ಅರ್ಜಿಗಳಿಗೆ ಅನುಮೋದನೆ ಸಿಕ್ಕ ನಂತರವಷ್ಟೇ ವಿದ್ಯಾರ್ಥಿ ವೇತನವು ಮಂಜೂರಾಗಲಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1ರಿಂದ 8ನೇ ತರಗತಿ) ಒಟ್ಟು 4,63,347 ಅರ್ಜಿಗಳನ್ನು ಸ್ವೀಕರಿಸಿದೆ. ಈ ಪೈಕಿ 4,58,899 ಅರ್ಜಿಗಳಿಗೆ ಅನುಮೋದನೆ ನೀಡಿದೆ.”
“ಅನುಮೋದಿಸಲು 4,448 ಅರ್ಜಿಗಳು ಬಾಕಿ ಇವೆ. ಅನುಮೋದನೆ ಪಡೆದು ಕೊಂಡಿರುವ ವಿದ್ಯಾರ್ಥಿಗಳಿಗೆ 51.73 ಕೋಟಿ ರು. ಪಾವತಿಸಿದೆ. ಅದೇ ರೀತಿ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,18,161 ಅರ್ಜಿಗಳನ್ನು ಸ್ವೀಕರಿಸಿರುವ ಸರ್ಕಾರವು 2,14,732 ಅರ್ಜಿಗಳಿಗೆ ಅನುಮೋದನೆ ನೀಡಿದೆ. 29.82 ಕೋಟಿ ರು. ಪಾವತಿಸಿದೆ. 3,429 ಅರ್ಜಿಗಳಿಗೆ ಇನ್ನಷ್ಟೇ ಅನುಮೋದನೆ ಸಿಗಬೇಕಿದೆ”
“ಹಾಗೆಯೇ ಕೇಂದ್ರ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,31,293 ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ 1,33,884 ಸಂಖ್ಯೆಯ ಅರ್ಜಿಗಳನ್ನಷ್ಟೇ ಅನುಮೋದಿಸಿರುವ ಸರ್ಕಾರವು 25.79 ಕೋಟಿ ರು. ಪಾವತಿಸಿದೆ. 97,409 ಅರ್ಜಿಗಳಿಗೆ ಅನುಮೋದನೆ ನೀಡಲು ಬಾಕಿ ಇರಿಸಿಕೊಂಡಿದೆ” ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು
ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು


