ಹಲವಾರು ದ್ವೇಷ ಭಾಷಣ ಪ್ರಕರಣದ ಆರೋಪಿ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಬೆಂಬಲಿಗರು ದಾಖಲಿಸಿದ್ದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಶುಕ್ರವಾರ ಅಲಹಾಬಾದ್ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ನಳಿನ್ ಶ್ರೀವಾಸ್ತವ ಅವರ ನ್ಯಾಯಪೀಠವು ಈ ಆದೇಶ ನೀಡಿದೆ.
ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಜುಬೈರ್ ಸಲ್ಲಿಸಿದ ಮನವಿಗೆ ವಿವರವಾದ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಆದಿತ್ಯನಾಥ್ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. 2025ರ ಜನವರಿ 6ರವರೆಗೆ ಜುಬೈರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಪೀಠವು ಹೇಳಿದೆ. ಆಲ್ಟ್ ನ್ಯೂಸ್
ನರಸಿಂಗಾನಂದ್ ಮಾಡಿರುವ ದ್ವೇಷ ಭಾಷಣದ ವಿಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಜುಬೇರ್ ಉತ್ತೇಜಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಅಕ್ಟೋಬರ್ 7 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಅರ್ಚಕರಾಗಿರುವ ನರಸಿಂಗಾನಂದ್ ಅವರು ಸೆಪ್ಟೆಂಬರ್ 29 ರಂದು ಧರ್ಮೋಪದೇಶದ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ದೇಶದ ಹಲವಾರು ನಗರಗಳಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.
ಅಕ್ಟೋಬರ್ 3 ರಂದು, ಜುಬೈರ್ ಅವರು ಎಕ್ಸ್‌ನಲ್ಲಿ ಅವರ ಭಾಷಣದ ವೀಡಿಯೊವನ್ನು ಹಂಚಿಕೊಂಡು, ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ನರಸಿಂಗಾನಂದ್ ಅವರು ಈ ಹಿಂದೆ ಕೂಡಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದನ್ನು ಉಲ್ಲೇಖಿಸಿದ್ದ ಜುಬೇರ್ ವಿರುದ್ಧ ನರಸಿಂಗಾನಂದ ಬೆಂಬಲಿಗರು ಎಫ್‌ಐಆರ್ ದಾಖಲಿಸಿದ್ದರು.
ಜುಬೇರ್ ವಿರುದ್ಧ ಎಫ್‌ಐಆರ್ ದಾಖಲಾದ ನಂತರ, ಅವರು ಬಂಧನದಿಂದ ರಕ್ಷಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕಳೆದ ಬುಧವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 ರ ಅಡಿಯಲ್ಲಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಅಪರಾಧಕ್ಕಾಗಿ ಜುಬೇರ್ ವಿರುದ್ಧದ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿತ್ತು. ಬಳಿಕ ಶುಕ್ರವಾರ (ಡಿಸೆಂಬರ್ 20) ಹೆಚ್ಚಿನ ವಿಚಾರಣೆಗೆ ಪಟ್ಟಿ ಮಾಡಿತ್ತು.
ಶುಕ್ರವಾರ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ನಳಿನ್ ಶ್ರೀವಾಸ್ತವ ಅವರ ನ್ಯಾಯಪೀಠವು, ಆಲ್ಟ್ ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ಶುಕ್ರವಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ
ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ


