Homeಅಂತರಾಷ್ಟ್ರೀಯಅಮೆರಿಕ | ಅದಾನಿ ವಿರುದ್ಧ ಆರೋಪ ಮಾಡಿದ್ದ ಅಟಾರ್ನಿ ರಾಜೀನಾಮೆ

ಅಮೆರಿಕ | ಅದಾನಿ ವಿರುದ್ಧ ಆರೋಪ ಮಾಡಿದ್ದ ಅಟಾರ್ನಿ ರಾಜೀನಾಮೆ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಅದಾನಿ ಅವರ ಅದಾನಿ ಗ್ರೂಪ್ ವಿರುದ್ಧ ಬಹಕೋಟಿ ವಂಚನೆಗೆ ಸಂಬಂಧಿಸಿ ಅಮೆರಿಕದಲ್ಲಿ ಮಾಡಲಾಗಿದ್ದ ದೋಷಾರೋಪಣೆಯ ಹಿಂದಿರುವ ಅಟಾರ್ನಿ ಬ್ರಿಯಾನ್ ಪೀಸ್ ಅವರು ಜನವರಿ 10ರಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕ

2021ರಲ್ಲಿ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು ಬ್ರಿಯಾನ್ ಪೀಸ್ ಅವರನ್ನು ಸರಕಾರಿ ವಕೀಲರಾಗಿ ನೇಮಕ ಮಾಡಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಕೆಲವೇ ದಿನಗಳ ಮೊದಲು ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನವೆಂಬರ್‌ನಲ್ಲಿ ಬ್ರಿಯಾನ್ ಪೀಸ್ ಅವರು ಗೌತಮ್ ಅದಾನಿ ಮತ್ತು ಇತರರ ವಿರುದ್ಧ ಸೌರ ಗುತ್ತಿಗೆ ಒಪ್ಪಂದಕ್ಕೆ ಸಂಬಂಧಿಸಿ ವಂಚನೆ ಮತ್ತು ಲಂಚದ ಆರೋಪವನ್ನು ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬ್ರಿಯಾನ್ ಪೀಸ್ ಅವರು ಗೌತಮ್ ಅದಾನಿ ವಿರುದ್ಧದ ದೋಷಾರೋಪಣೆ ಪ್ರಕರಣಗಳಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಅವರು ಆಗಸ್ಟ್‌ನಲ್ಲಿ ಜಾರ್ಜ್ ಸ್ಯಾಂಟೋಸ್ ಹಣವನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಮಾಡಿದ್ದೆ ಆರೋಪ ಸಾಬೀತಾಗಿತ್ತು. ಅಲ್ಲದೆ, ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿ 2022ರಲ್ಲಿ ಹಿಪ್ ಹಾಪ್ ತಾರೆ ಕೆಲ್ಲಿ ಅವರಿಗೆ 30 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಮಂದಿಯನ್ನು ನ್ಯೂಯಾರ್ಕ್‌ನಲ್ಲಿರುವ ಈಸ್ಟರ್ನ್ ಡಿಸ್ಟ್ರಿಕ್ಟ್‌ನ ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿಯು ಕಳೆದ ತಿಂಗಳು ದೋಷಾರೋಪಣೆ ಮಾಡಿತ್ತು. ಭಾರತದಲ್ಲಿ ಸೋಲಾರ್‌ ಯೋಜನೆ ಒಪ್ಪಂದ ಪಡೆಯಲು ಅವರು 2020 ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂಪಾಯಿಗಳನ್ನು ಲಂಚವಾಗಿ ಪಾವತಿಸಲು ಒಪ್ಪಿಕೊಂಡಿದ್ದರು ಎಂದು ಅಮೆರಿಕದ ನ್ಯಾಯಾಲಯ ಹೇಳಿದೆ.

ಈ ಒಪ್ಪಂದಗಳ ಕಾರಣಕ್ಕೆ 20 ವರ್ಷಗಳಲ್ಲಿ ಅದಾನಿ $2 ಶತಕೋಟಿ ಅಥವಾ ಸುಮಾರು 16,880 ಕೋಟಿ ರೂ.ಗಳ ಲಾಭವನ್ನು ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆರೋಪಕ್ಕೆ ಸಂಬಂಧಿಸಿದಂತೆ ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ ಸಮನ್ಸ್ ನೀಡಿದೆ. ಆದರೆ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದೆ, ಅವುಗಳನ್ನು “ಆಧಾರರಹಿತ” ಎಂದು ಕರೆದಿದೆ. ಅಮೆರಿಕ

ಇದನ್ನೂ ಓದಿ: ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...