Homeಮುಖಪುಟ'ನಿರಂತರ ಹಾರುವ ಪ್ರಧಾನಿ' | ಮೋದಿ ವಿರುದ್ಧ ಕಾಂಗ್ರೆಸ್ ಆಕ್ರೋಶ

‘ನಿರಂತರ ಹಾರುವ ಪ್ರಧಾನಿ’ | ಮೋದಿ ವಿರುದ್ಧ ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಅಲ್ಲಿನ ಜನರು ಕಾಯುತ್ತಿರುವಾಗ, “ನಿರಂತರ ಹಾರುವ ಪ್ರಧಾನಿ” ಕುವೈತ್‌ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ರಕ್ಷಣಾ ಮತ್ತು ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಾಂಧವ್ಯವನ್ನು ಹೆಚ್ಚಿಸಲು ಮೋದಿ ಶನಿವಾರ ಕುವೈತ್‌ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಿದ್ದಾರೆ. ನಿರಂತರ ಹಾರುವ ಪ್ರಧಾನಿ

ಪ್ರಧಾನಿ ಮೋದಿಯ ಪ್ರವಾಸದ ಬಗ್ಗೆ ಎಕ್ಸ್‌ನಲ್ಲಿ ‘ಪ್ರಾಸಬದ್ಧ’ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್, “ಮಿಸ್ಟರ್ ಮೋದಿ ಭೇಟಿಯನ್ನು ನಿರಾಕರಿಸುತ್ತಾ ಇದ್ದು, ಅದು ಅವರ ಹಣೆಬರಹ ಆಗಿ ಹೋಗಿದೆ. ಮಣಿಪುರದ ಜನರು ಇನ್ನೂ ಕಾಯುತ್ತಲೆ ಇದ್ದು, ಆದರೆ ನಿರಂತರ ಹಾರಾಡುತ್ತಿರುವ ಪ್ರಧಾನಿ ಕುವೈಟ್‌ಗೆ ತೆರಳಿದ್ದಾರೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರಕ್ಕೆ ಭೇಟಿ ನೀಡುವಂತೆ ಕಾಂಗ್ರೆಸ್ ಪದೇ ಪದೇ ಮೋದಿಯವರನ್ನು ಒತ್ತಾಯಿಸುತ್ತಿದೆ. ಅವರ ಭೇಟಿಯು ಗಲಭೆ ಪೀಡಿತ ರಾಜ್ಯದಲ್ಲಿ ಶಾಂತಿ ಮತ್ತು ಸಹಜತೆಯನ್ನು ಪುನಃಸ್ಥಾಪಿಸಲು ಸಹಾಯವಾಗುತ್ತದೆ ಎಂದು ಪಕ್ಷವು ಒತ್ತಿಹೇಳುತ್ತಿದೆ.

2023ರ ಮೇ 3ರಂದು ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಬುಡಕಟ್ಟು ಜನಾಂದ ನಡುವೆ ಜನಾಂಗೀಯ ಹಿಂಸಾಚಾರಗಳು ಭುಗಿಲೆದ್ದಿತ್ತು. ನವೆಂಬರ್ 2024 ರ ಅಂತ್ಯದ ವೇಳೆಗೆ ಹಿಂಸಾಚಾರದಲ್ಲಿ 258 ಜನರು ಮೃತಪಟ್ಟಿದ್ದಾರೆ. ಹಿಂಸಾಚಾರದಿಂದ 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ. ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸುವುದರೊಂದಿಗೆ ಪರಿಸ್ಥಿತಿಯು ಉಲ್ಬಣಗೊಳ್ಳುತ್ತಲೆ ಇದೆ.

ಇತ್ತಿಚೆಗಷ್ಟೆ, ಮಣಿಪುರದ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಸಂಪೂರ್ಣ ಅಥವಾ ಭಾಗಶಃ ಸುಟ್ಟು ಭಸ್ಮವಾಗಿರುವ ವಸತಿಗಳು ಮತ್ತು ಆಸ್ತಿಗಳ ವಿವರಗಳನ್ನು ಮುಚ್ಚಿದ ಕವರ್‌ನಲ್ಲಿ ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜೊತೆಗೆ, ಅಪರಾಧಿಗಳು ಮತ್ತು ಅತಿಕ್ರಮಣದಾರರ ವಿರುದ್ಧ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಹೇಳುವಂತೆ ಕೂಡಾ ನೀಡುವಂತೆ ಅದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನವರಿ 20 ನಂತರದ ಅರ್ಜಿಯ ವಿಚಾರಣೆಗೆ ನಿಗದಿಪಡಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್, ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮತ್ತು ಅವರಿಗೆ ಪರಿಹಾರವನ್ನು ಮೇಲ್ವಿಚಾರಣೆ ಮಾಡಲು ಮೂವರು ಮಾಜಿ ಮಹಿಳಾ ಹೈಕೋರ್ಟ್ ನ್ಯಾಯಾಧೀಶರ ಸಮಿತಿಯನ್ನು ಸ್ಥಾಪಿಸಲು ಆದೇಶಿಸಿತ್ತು. ಜೊತೆಗೆ ಅಪರಾಧ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥ ದತ್ತಾತ್ರೇ ಪಡಸಾಲ್ಗಿಕರ್ ಅವರನ್ನು ಕೇಳಿತ್ತು.

ಇದನ್ನೂ ಓದಿ: ಮಣಿಪುರ: ಕಕ್ಚಿಂಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಮಣಿಪುರ: ಕಕ್ಚಿಂಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...