Homeಕರ್ನಾಟಕಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂ-ಬಿ) ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಡೀನ್ ಡಾ.ದಿನೇಶ್ ಕುಮಾರ್ ಮತ್ತು ಇತರ ಆರು ಪ್ರಾಧ್ಯಾಪಕರ ವಿರುದ್ಧ ಜಾತಿ ಆಧಾರಿತ ದೌರ್ಜನ್ಯದ ಆರೋಪದ ಮೇಲೆ ಡಿಸೆಂಬರ್ 20ರಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಲಿತ ವಿದ್ವಾಂಸರಾದ ಐಐಎಂ-ಬಿಯ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರ ಮೇಲೆ ಜಾತಿ ಆಧಾರಿತ ದೌರ್ಜನ್ಯ ನಡೆದಿರುವುದನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ)  ದೃಢಪಡಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಐಐಎಂ-ಬಿಯ ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಹಿರಿಯ ಅಧ್ಯಾಪಕ ಹಾಗೂ ಡೀನ್ ಡಾ.ದಿನೇಶ್ ಕುಮಾರ್, ಪ್ರಾಧ್ಯಾಪಕರಾದ ಸೈನೇಶ್ ಜಿ, ಶ್ರೀನಿವಾಸ್ ಪ್ರಕಾ, ಚೇತನ್ ಸುಬ್ರಮಣಿಯನ್, ಆಶಿಶ್ ಮಿಶ್ರಾ, ಶ್ರೀಲತಾ ಜೋನಲಗೇಡು ಮತ್ತು ರಾಹುಲ್ ದೆ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಅವಮಾನಿಸುವುದು ಅಥವಾ ಬೆದರಿಸುವುದು) ಮತ್ತು 3(1)(ಎಸ್‌) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಜಾತಿ ಹೆಸರಿನಿಂದ ನಿಂದಿಸುವುದು) ಅಡಿಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ದಲಿತ ವಿದ್ವಾಂಸರಾದ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರು ಐಐಎಂ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ಕುರಿತು
2024ರ ಜನವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಹಲವು ಆರೋಪಗಳನ್ನು ಮಾಡಿದ್ದರು.

ಸಾಂಸ್ಥಿಕ ಚಟುವಟಿಕೆಗಳಿಂದ ಹೊರಗಿಡುವುದು, ಸಂಪನ್ಮೂಲಗಳನ್ನು ಪಡೆಯಲು ತಡೆ ಒಡ್ಡುವುದು ಸೇರಿದಂತೆ ಐಐಎಂಬಿಯಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳ ಕುರಿತು ಪ್ರೊಫೆಸರ್ ಗೋಪಾಲ್ ದಾಸ್ ಅವರು ತನ್ನ ಪತ್ರದಲ್ಲಿ ರಾಷ್ಟ್ರಪತಿಗೆ ವಿವರಿಸಿದ್ದರು. ಬಳಿಕ ರಾಷ್ಟ್ರಪತಿ ಕಚೇರಿಯ ನಿರ್ದೇಶನದ ಮೇರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಮಾರ್ಚ್‌ನಲ್ಲಿ ಜಾತಿ ದೌರ್ಜನ್ಯದ ಕುರಿತು ತನಿಖೆ ಕೈಗೊಂಡಿತ್ತು.

ಮೇ ತಿಂಗಳಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರಿಗೆ ದೂರು ಸಲ್ಲಿಸಿದ್ದ ಗೋಪಾಲ್ ದಾಸ್ ಅವರು, ಡಿಸಿಆರ್‌ಇ ತನಿಖೆ ಪ್ರಾರಂಭಿಸಿದ ನಂತರ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅರುಣ್ ಚಕ್ರವರ್ತಿ ನೇತೃತ್ವದ ಡಿಸಿಆರ್‌ಇ ತನಿಖೆಯು ನವೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಗೋಪಾಲ್ ದಾಸ್ ಅವರ ಮೇಲಿನ ಜಾತಿ ಆಧಾರಿತ ದೌರ್ಜನ್ಯ ಮತ್ತು ಅವರನ್ನು ಕೆಲಸದ ಸ್ಥಳದಿಂದ ಹೊರಗಿಡಲು ಪ್ರಯತ್ನಿಸಿದರ ಕುರಿತು ಮಹತ್ವದ ಸಾಕ್ಷ್ಯವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂಸ್ಥೆಯೊಳಗೆ ಹರಿದಾಡಿದ ಸಾಮೂಹಿಕ ಈ-ಮೇಲ್‌ನಲ್ಲಿ ನಿರ್ದೇಶಕ ರಿಷಿಕೇಶ್ ಕೃಷ್ಣನ್ ಅವರು ಗೋಪಾಲ್ ದಾಸ್ ಅವರ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿ ಆರೋಪಿಸಿತ್ತು. ರಿಷಿಕೇಶ್ ಮತ್ತು ಡೀನ್ ದಿನೇಶ್ ಕುಮಾರ್ ಅವರು ವೃತ್ತಿಪರ ಚಟುವಟಿಕೆಗಳಲ್ಲಿ ಗೋಪಾಲ್ ದಾಸ್ ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸಿದ್ದಾರೆ ಎಂದು ವರದಿ ಹೇಳಿತ್ತು.

ಅಲ್ಲದೆ, ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಕುಂದುಕೊರತೆಗಳನ್ನು ಪರಿಹರಿಸಲು ಸಾಂಸ್ಥಿಕ ಕಾರ್ಯವಿಧಾನವನ್ನು ಸ್ಥಾಪಿಸುವ ಶಾಸನಬದ್ಧ ಜವಾಬ್ದಾರಿಗಳನ್ನು ಅನುಸರಿಸಲು ಐಐಎಂ-ಬಿ ವಿಫಲವಾಗಿದೆ ಎಂದು ವರದಿಯು ಎತ್ತಿ ತೋರಿಸಿತ್ತು.

ವರದಿ ಆಧರಿಸಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಡಿಸೆಂಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಐಐಎಂ-ಬಿ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಎಫ್‌ಐಆರ್ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಐಐಎಂ-ಬಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಪ್ರಮುಖ ಹೃದ್ರೋಗ ತಜ್ಞ ಡಾ ದೇವಿ ಪ್ರಸಾದ್ ಶೆಟ್ಟಿ ವಿರುದ್ದವೂ ಎಫ್‌ಐಆರ್ ದಾಖಲಾಗಿತ್ತು. ಆದರೆ, ಅವರ ವಿರುದ್ದ ಎಫ್‌ಐಆರ್ ಪ್ರಕ್ರಿಯೆಗೆ ಹೈಕೋರ್ಟ್ ಶುಕ್ರವಾರ (ಡಿ.20) ತಡೆ ನೀಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : IIMBಯಲ್ಲಿ ದಲಿತ ಪ್ರಾಧ್ಯಾಪಕನ ವಿರುದ್ಧ ಜಾತಿ ದೌರ್ಜನ್ಯ – ದೃಢಪಡಿಸಿದ ಡಿಸಿಆರ್‌ಇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...