Homeಕರ್ನಾಟಕಪೊಲೀಸರ ಮುಂದೆಯೆ ವ್ಯಾಪಾರಿಯ ಮೇಲೆ ದಾಳಿಗೆ ಯತ್ನ - ಬಿಜೆಪಿಯ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್

ಪೊಲೀಸರ ಮುಂದೆಯೆ ವ್ಯಾಪಾರಿಯ ಮೇಲೆ ದಾಳಿಗೆ ಯತ್ನ – ಬಿಜೆಪಿಯ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್

- Advertisement -
- Advertisement -

ಪೊಲೀಸರ ಮುಂದೆಯೆ ಬಿಜೆಪಿ ದುಷ್ಕರ್ಮಿಗಳು ಅಂಗಡಿ ಬಂದ್‌ ಮಾಡುವಂತೆ ವ್ಯಾಪಾರಿಯೊಬ್ಬರಿಗೆ ಬಲವಂತವಾಗಿ ಒತ್ತಾಯಿಸಿ, ಅವರಿಗೆ ನಿಂದಿಸಿ ದಾಳಿಗೆ ಯತ್ನಿಸಿದ ಘಟನೆ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಶನಿವಾರ ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.

ಸಚಿವರಾದ ಲಕ್ಷ್ಮಿ ಹಬ್ಬಾಳ್ಕರ್ ಅವರನ್ನು ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಕಾರಣಕ್ಕೆ ಪೊಲೀಸರು ರವಿ ಅವರನ್ನು ಬಂಧಿಸಿದ್ದರು. ಇದನ್ನು ವಿರೋಧಿಸಿ ನಗರದಲ್ಲಿ ಗುಂಪುಕಟ್ಟಿಕೊಂಡು ಬಿಜೆಪಿ ಕಾರ್ಯಕರ್ತರು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದ್ದರು. ಈ ವೇಳೆ ವ್ಯಾಪಾರಿಯೊಬ್ಬರು ಅದನ್ನು ನಿರಾಕರಿಸಿ, ಅಂಗಡಿ ಬಂದ್‌ ಮಾಡುವುದಿಲ್ಲ, ವರ್ಷದಲ್ಲಿ ಎರಡು ತಿಂಗಳು ಬರಿ ಅಂಗಡಿ ಬಂದ್ ಮಾಡುವುದೆ ಆಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು,”ಅಂಗಡಿ ಬಂದ್‌ ಮಾಡುವುದಿಲ್ಲ, ವರ್ಷದಲ್ಲಿ ಎರಡು ತಿಂಗಳು ಬರಿ ಅಂಗಡಿ ಬಂದ್ ಮಾಡುವುದೆ ಆಗುತ್ತದೆ. ನನಗೆ ದಿನಕ್ಕೆ 10-15 ಸಾವಿರ ವರೆಗೆ ಖರ್ಚಿದೆ. ಆ ಖರ್ಚನ್ನು ನೀವು ಕೊಡಿ, ಆಗ ನಾನು ಅಂಗಡಿ ಬಂದ್ ಮಾಡುತ್ತೇನೆ.” ಎಂದು ವ್ಯಾಪಾರಿ ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ. ಜೊತೆಗೆ ಈ ಹಿಂದೆ ಬಿಜೆಪಿ ಸರ್ಕಾರದ ಸಮಯದಲ್ಲಿ ಕಳಪೆ ಕಾಮಗಾರಿಯಿಂದ ಅಂಗಡಿಗೆ ನೀರು ತುಂಬಿ 30 ಲಕ್ಷ ನಷ್ಟವಾಗಿದ್ದ ವಿಚಾರವನ್ನು ಅವರು ಹೇಳಿದ್ದು, ಈ ನಷ್ಟವನ್ನು ಕೊಡಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ವೇಳೆ ಬಿಜೆಪಿ ಕಾರ್ಯಕರ್ತರು, ಮಧ್ಯಾಹ್ನ ತನಕ ಬಂದ್ ಮಾಡಿ, ನಂತರ ಓಪನ್ ಮಾಡಿ ಎಂದು ಕೇಳಿಕೊಂಡಿದ್ದರು. ಅದಕ್ಕೂ ವ್ಯಾಪಾರಿ ನಿರಾಕರಿಸಿ, ನಾನು ಅಂಗಡಿ ಬಂದ್ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ, ”ನೀವು ಹಿಂದೂ ದೇಶದಲ್ಲಿ ಇಲ್ಲ, ನೀವು ಹಿಂದೂ ಅಲ್ಲ” ಎಂದು ಹೇಳಿದ್ದಾರೆ.

ಈ ವೇಳೆ ವ್ಯಾಪಾರಿ, ”ನಾನು ದೇವಸ್ಥಾನ ಕಟ್ಟಿಸಿದ್ದೇನೆ, ಬನ್ನಿ ನಾನು ತೋರಿಸುತ್ತೇನೆ. ದೇವರಮ್ಮ ಬೆಟ್ಟದಲ್ಲಿ ದೇವಸ್ಥಾನ ಕಟ್ಟಿಸಿದ ನನ್ನನ್ನು ಹಿಂದೂ ಅಲ್ಲ ಎಂದು ಹೇಳಲು ನೀವು ಯಾರು?” ಎಂದು ಹೇಳಿದ್ದಾರೆ. ಈ ವೇಳೆ ಇತರ ಬಿಜೆಪಿ ಕಾರ್ಯಕರ್ತರು ಪೊಲೀಸರ ಮುಂದೆಯೆ ಅವರ ಮೇಲೆ ದಾಳಿಗೆ ಮುಂದಾಗಿದ್ದು, ಪೊಲೀಸರು ಅವರನ್ಜು ಅಲ್ಲಿಂದ ತೆರಳುವಂತೆ ವಿನಂತಿಸುವುದು ವಿಡಿಯೊದಲ್ಲಿ ದಾಖಲಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಮ್‌ ಜೊತೆಗೆ ಮಾತನಾಡಿದ ಚಿಕ್ಕಮಗಳೂರು ಡಿವೈಎಸ್‌ಪಿ, ಅರೋಪಿಗಳ ವಿರುದ್ಧ ಬಲವಂತವಾಗಿ ಬಂದ್ ಮಾಡಿಸುತ್ತಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯ ಪಿಎಸ್‌ಐ ಶಂಭುಲಿಂಗೇಗೌಡ ಮಾತನಾಡಿ,”ಘಟನೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ಆಗಿದೆ. ತನಿಖೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದರು. ಈ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಸಚಿವರ ಅಭಿಮಾನಿಗಳು ಸುವರ್ಣಸೌಧದ ಮೊಗಸಾಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದರು.

ಬಿಜೆಪಿಯ ಸಿ.ಟಿ. ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದು, ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ ಎಂದು ವರದಿಯಾಗಿತ್ತು. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ. ಈ ನಡುವೆ ಸಿಟಿ ರವಿ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ಅವರನ್ನು ಬಂಧಿಸಿದ್ದರು.

ಇದನ್ನೂ ಓದಿ: ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...