Homeಮುಖಪುಟಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

- Advertisement -
- Advertisement -

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಶುಕ್ರವಾರ (ಡಿ.20) ರಂದು ನೀಡಿದ ತೀರ್ಪಿನಲ್ಲಿ, ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಫಿಲ್ಲಿಸ್ ಹ್ಯಾಮಿಲ್ಟನ್ ಅವರು, ಎನ್‌ಎಸ್‌ಒ ಗ್ರೂಪ್ ವಂಚನೆ ಹಾಗೂ ದುರ್ಬಳಕೆ ತಡೆ ಕಾಯ್ದೆ ಮತ್ತು ಕ್ಯಾಲಿಫೋರ್ನಿಯಾ ಕಂಪ್ಯೂಟರ್ ಡೇಟಾ ಪ್ರವೇಶ ಮತ್ತು ವಂಚನೆ ತಡೆ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಹೇಳಿದ್ದಾರೆ. ಎನ್‌ಎಸ್‌ಒ ವಾಟ್ಸಾಪ್‌ನ ಸೇವಾ ನಿಯಮಗಳನ್ನೂ ಉಲ್ಲಂಘಿಸಿದೆ ಎಂದು ನ್ಯಾಯಾಧೀಶ ಹ್ಯಾಮಿಲ್ಟನ್ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ, ನ್ಯಾಯಾಧೀಶ ಹ್ಯಾಮಿಲ್ಟನ್ ಅವರು ಇಸ್ರೇಲಿ ಸಂಸ್ಥೆಗೆ ಪೆಗಾಸಸ್ ಮತ್ತು ಅದರ ಇತರ ಸ್ಪೈವೇರ್ ಉತ್ಪನ್ನಗಳ ಕೋಡ್ ಅನ್ನು ಕಾನೂನು ಪ್ರಕ್ರಿಯೆಯ ಭಾಗವಾಗಿ ವಾಟ್ಸಾಪ್‌ಗೆ ಹಸ್ತಾಂತರಿಸುವಂತೆ ಆದೇಶಿಸಿದ್ದರು.

ಇಸ್ರೇಲಿ ಸಂಸ್ಥೆಯು ಅನಧಿಕೃತ ಕಣ್ಗಾವಲಿಗೆ ಅವಕಾಶ ನೀಡುವ ಗೂಢಚಾರ ಸಾಫ್ಟ್ವೇರ್ ಅನ್ನು ಸ್ಥಾಪಿಸಲು ವಾಟ್ಸಾಪ್‌ನ ದೋಷವನ್ನು ಬಳಸಿಕೊಂಡಿದೆ ಎಂದು ಆರೋಪಿಸಿ ಮೆಟಾ ಮೊಕದ್ದಮೆ ಹೂಡಿತ್ತು.

ತನ್ನ ಮೇಲಿನ ಆರೋಪಗಳ ಕುರಿತು ಎನ್‌ಎಸ್‌ಒ ಗ್ರೂಪ್ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯಿಟರ್ಸ್ ಸಂಸ್ಥೆ ವರದಿ ಮಾಡಿದೆ. ನ್ಯಾಯಾಲಯದ ತೀರ್ಪಿನ ಕುರಿತು ವಾಟ್ಸಾಪ್ ಮುಖ್ಯಸ್ಥ ಕ್ಯಾಥ್ಕಾರ್ಟ್ ಮಾತನಾಡಿದ್ದು, “ಈ ತೀರ್ಪು ಗೌಪ್ಯತೆಯ ಗೆಲುವು” ಎಂದು ಹೇಳಿದ್ದಾರೆ.

“ಸ್ಪೈವೇರ್ ಕಂಪನಿಗಳು ವಿನಾಯಿತಿ ಪಡೆಯಲು ಅಥವಾ ಅವರ ಕಾನೂನುಬಾಹಿರ ಕ್ರಮಗಳಿಗೆ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಕ್ರಮ ಬೇಹುಗಾರಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಕಣ್ಗಾವಲು ಕಂಪನಿಗಳು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಕ್ಯಾಥ್ಕಾರ್ಟ್ ತಿಳಿಸಿದ್ದಾರೆ.

ಪೆಗಾಸಸ್ ಎಂಬ ಸ್ಪೈವೇರ್ ಅನ್ನು ಅಭಿವೃದ್ಧಿ ಪಡಿಸಿರುವ ಎನ್ಎಸ್ಒ ಅದನ್ನು ಭಾರತ ಸರ್ಕಾರ ಸೇರಿದಂತೆ ವಿಶ್ವದ ವಿವಿಧ ಸರ್ಕಾರಗಳಿಗೆ ಮಾರಾಟ ಮಾಡಿದೆ ಎಂಬ ಆರೋಪ ಸಂಸ್ಥೆಯ ಮೇಲಿದೆ.
ಪೆಗಾಸಸ್ ವೈರಸ್ ಅನ್ನು ಭಾರತದ ರಾಜಕಾರಣಿಗಳು ಮತ್ತು ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಲು ಬಳಸಲಾಗಿದೆ ಎಂಬ ಆರೋಪ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು.

ಇದನ್ನೂ ಓದಿ : ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...