Homeಮುಖಪುಟಮುಂಬೈ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಏಕಾಂಗಿ ಸ್ಪರ್ಧೆ - ಸಂಜಯ್ ರಾವತ್

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಏಕಾಂಗಿ ಸ್ಪರ್ಧೆ – ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ ವಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಿಂದ ಹೊರಬರದೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವುತ್ ಶನಿವಾರ ಸುಳಿವು ನೀಡಿದ್ದಾರೆ. ಸಂಪದ್ಭರಿತ ಬಿಎಂಸಿಯನ್ನು ಅವಿಭಜಿತ ಶಿವಸೇನೆಯು 1997 ರಿಂದ 2022 ರವರೆಗೆ ಸತತ 25 ವರ್ಷಗಳ ಕಾಲ ಆಡಳಿತ ನಡೆಸಿದೆ. ಮುಂಬೈ ಪಾಲಿಕೆ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜತ್ ರಾವತ್, “ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆಗಿಂತ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ಪಕ್ಷದ ಕಾರ್ಯಕರ್ತರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂಬುವುದು ಪಕ್ಷದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಬಿಎಂಸಿ ಚುನಾವಣೆಗೆ ಉದ್ಧವ್ ಠಾಕ್ರೆ ಮತ್ತು ಇತರ ಪಕ್ಷದ ನಾಯಕರ ನಡುವೆ (ಏಕಾಂಗಿಗೆ ಸ್ಪರ್ಧಿಸಬೇಕೆ ಎಂಬುದರ ಕುರಿತು) ಮಾತುಕತೆ ನಡೆಯುತ್ತಿದೆ. ಕಾರ್ಯಕರ್ತರು ಪಕ್ಷವು ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವಂತೆ ಬಯಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಪದ್ಭರಿತ ಬಿಎಂಸಿಯನ್ನು ಅವಿಭಜಿತ ಶಿವಸೇನೆಯು 1997 ರಿಂದ 2022 ರವರೆಗೆ ಸತತ 25 ವರ್ಷಗಳ ಕಾಲ ಆಡಳಿತ ನಡೆಸಿದೆ. ಬಿಎಂಸಿಯ ಹಿಂದಿನ ಚುನಾಯಿತ ಪ್ರತಿನಿಧಿಗಳ ಅವಧಿಯು ಮಾರ್ಚ್ 2022 ರ ಆರಂಭದಲ್ಲಿ ಕೊನೆಗೊಂಡಿದೆ. ಸುಮಾರು ಮೂರು ವರ್ಷಗಳವರೆಗೆ ಅಲ್ಲಿ ಚುನಾವಣೆಗಳು ನಡೆದಿಲ್ಲ. ಮುಂಬೈ ಪಾಲಿಕೆ

“ಬಿಜೆಪಿಯೊಂದಿಗೆ ಅವಿಭಜಿತ ಶಿವಸೇನೆ ಮೈತ್ರಿಯಲ್ಲಿದ್ದಾಗ ಕೂಡಾ ನಾವು ಬಿಎಂಸಿ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದೇವೆ.” ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈನಲ್ಲಿ ಪಕ್ಷದ ಶಕ್ತಿ ಬಲಷ್ಠವಾಗಿದೆ ಎಂದು ರಾವತ್ ಪ್ರತಿಪಾದಿಸಿದ್ದಾರೆ. “ನಮಗೆ ಮುಂಬೈನಲ್ಲಿ ಸ್ಪರ್ಧಿಸಲು ಹೆಚ್ಚಿನ ಸ್ಥಾನಗಳು ಬಂದಿದ್ದರೆ (ವಿಧಾನಸಭಾ ಚುನಾವಣೆಯ ಸಮಯದಲ್ಲಿ) ಮೈತ್ರಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಿತ್ತು” ಎಂದು ಅವರು ಹೇಳಿದ್ದಾರೆ. ಮುಂಬೈಯನ್ನು ಗೆಲ್ಲುವುದು ಅಗತ್ಯವಾಗಿದ್ದು, ಇಲ್ಲದಿದ್ದರೆ ನಗರವನ್ನು ಮಹಾರಾಷ್ಟ್ರದಿಂದ ಬೇರ್ಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ಮುಂಬೈನಲ್ಲಿ ಶಿವಸೇನೆ 24 ಸ್ಥಾನಗಳಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 10 ಸ್ಥಾನಗಳಿಗೆ ಅಭ್ಯರ್ಥಿಗಳಲ್ಲಿ ಸ್ಪರ್ಧಿಸಿ 4 ಸ್ಥಾನಗಳನ್ನು ಗೆದ್ದುಕೊಂಡಿತ್ತು ಹಾಗೂ NCP (SP) ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿ ಸ್ಥಾನಗೆಲ್ಲಲು ವಿಫಲವಾಗಿದೆ.

ಕಳೆದ ವಾರ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಡಳಿತಾರೂಢ ಮಹಾಯುತಿಯ ಭಾಗವಾಗಿ ಮುಂದಿನ ವರ್ಷ ನಡೆಯಲಿರುವ ಬಿಎಂಸಿ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸಲಿದೆ ಎಂದು ಹೇಳಿದ್ದರು. “ಬಿಎಂಸಿ ಚುನಾವಣೆಯಲ್ಲಿ ಎಲ್ಲಾ 227 ವಾರ್ಡ್‌ಗಳಲ್ಲಿ ಮಹಾಯುತಿ (ಮೈತ್ರಿಕೂಟ) ಆಗಿ ಸ್ಪರ್ಧಿಸಲಾಗುವುದು” ಎಂದು ಶಿವಸೇನೆಯ ಮುಖ್ಯಸ್ಥ ಶಿಂಧೆ ಹೇಳಿದ್ದಾರೆ. ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಮಹಾಯುತಿ ಮೈತ್ರಿಕೂಟದ ಭಾಗವಾಗಿದೆ.

ಇದನ್ನೂ ಓದಿ: ಎಂಬಿಬಿಎಸ್ ಟ್ರೈನಿಗಳಿಗೆ ಲೈಂಗಿಕ ಕಿರುಕುಳ: ವೈದ್ಯಕೀಯ ಕಾಲೇಜು ಪ್ರಾಧ್ಯಾಪಕನಿಗೆ ಮೂರು ವರ್ಷ ಜೈಲು ಶಿಕ್ಷೆ

ಎಂಬಿಬಿಎಸ್ ಟ್ರೈನಿಗಳಿಗೆ ಲೈಂಗಿಕ ಕಿರುಕುಳ: ವೈದ್ಯಕೀಯ ಕಾಲೇಜು ಪ್ರಾಧ್ಯಾಪಕನಿಗೆ ಮೂರು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...