Homeಮುಖಪುಟ55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಡಿ.21) ನಡೆದ 55ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ಸಭೆಯಲ್ಲಿ ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ನಿರ್ಧಾರವನ್ನು ಮುಂದೂಡಲಾಗಿದೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳ ಉಪಸ್ಥಿತಿಯಲ್ಲಿ ರಾಜಸ್ಥಾನದಲ್ಲಿ ನಡೆದ ಸಭೆಯಲ್ಲಿ ವಿಮಾ ಕಂತಿನ ಮೇಲಿನ ತೆರಿಗೆ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಹೆಚ್ಚಿನ ಚರ್ಚೆ ಹಾಗೂ ಪರಾಮರ್ಶೆ ನಡೆಸುವ ಅಗತ್ಯವಿದೆ ಎಂದು ಮಂಡಳಿ ಹೇಳಿದೆ.

ಸ್ವಿಗ್ಗಿ ಮತ್ತು ಝೊಮ್ಯಾಟೋದ ಆಹಾರ ವಿತರಣೆ ಮೇಲೆ ಪ್ರಸ್ತುತ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದನ್ನು ಶೇ.5ಕ್ಕೆ ಇಳಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಸದ್ಯಕ್ಕೆ ಇದನ್ನೂ ಮುಂದೂಡಲಾಗಿದೆ.

ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಅಥವಾ ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಕುರಿತ ಸಭೆಯ ಕಾರ್ಯಸೂಚಿಯಲ್ಲಿನ (ಸಭೆಯ ಅಜೆಂಡಾದ) ಮತ್ತೊಂದು ಮಹತ್ವದ ಅಂಶವನ್ನು ಮಂಡಳಿಯು ತಿರಸ್ಕರಿಸಿದೆ. ಪ್ರಸ್ತುತ, ಎಟಿಎಫ್ ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆಗೆ (ವ್ಯಾಟ್) ಒಳಪಟ್ಟಿದೆ. ಇದು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಹೆಚ್ಚಿನ ವೆಚ್ಚಗಳು ಅಂತಿಮವಾಗಿ ಟಿಕೆಟ್ ದರಗಳ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಕೋರಲಾಗಿದೆ.

ರಾಜ್ಯಗಳ ಸಹಕಾರ ಬೇಕಿದೆ : ನಿರ್ಮಲಾ ಸೀತಾರಾಮನ್

ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ರಾಜ್ಯಗಳು ಒಪ್ಪಲು ಸಿದ್ದವಿಲ್ಲ. ಕೇಂದ್ರ ಸರ್ಕಾರವೊಂದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇವಿ ಮಾರಾಟ ತೆರಿಗೆ ಪರಿಷ್ಕರಣೆ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಎಲೆಕ್ಟ್ರಾನಿಕ್ ವಾಹನಗಳ (ಇವಿ) ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ. ವಿದ್ಯುತ್ ಚಾಲಿತ ಹೊಸ ಕಾರುಗಳಿಗೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲು ನಿರ್ಧರಿಸಲಾಗಿದೆ. ಆದರೆ, ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಅದರ ಮಾಲೀಕ ನೇರವಾಗಿ ಮಾರಾಟ ಮಾಡಿದರೆ ಜಿಎಸ್‌ಟಿ ಅನ್ವಯಿಸುವುದಿಲ್ಲ. ಯಾವುದಾದರು ಕಂಪನಿಯು ಸೆಕೆಂಡ್ ಹ್ಯಾಂಡ್ ಇವಿ ಮಾರಿದರೆ ಅಥವಾ ಮಾರಾಟಗಾರರು ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಮಾರ್ಪಡಿಸಿ ಮಾರಿದರೆ ಶೇ.18ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ.

55ನೇ ಜಿಎಸ್‌ಟಿ ಸಭೆಯ ಇತರ ನಿರ್ಣಯಗಳು :

  • ಅಂತಿಮ ಬಳಕೆಯ ಹೊರತಾಗಿಯೂ, ಬಲವರ್ಧಿತ ಅಕ್ಕಿ ಕಾಳುಗಳ ಜಿಎಸ್‌ಟಿ ದರವನ್ನು ಶೇ. 18ರಿಂದ ರಿಂದ ಶೇ.5ಕ್ಕೆ ಇಳಿಸಲಾಗಿದೆ. ಆಹಾರ ಪದಾರ್ಥವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ತಂದಿರುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ.
  • ಸರ್ಕಾರದ ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್‌) ಉಚಿತ ವಿತರಣೆಗಾಗಿ ಉದ್ದೇಶಿಸಲಾದ ಆಹಾರ ತಯಾರಿಕೆಯ ಮೇಲಿನ ರಿಯಾಯಿತಿಯ ಶೇ. 5 ಜಿಎಸ್‌ಟಿ ವಿನಾಯಿತಿ ಇರುತ್ತದೆ.
  • ಉಪ್ಪು ಮತ್ತು ಮಸಾಲೆಗಳೊಂದಿಗೆ ಅನ್ಪ್ಯಾಕ್ ಮಾಡಲಾದ ಪಾಪ್‌ಕಾರ್ನ್ ಶೇ. 5 ಜಿಎಸ್‌ಟಿಗೆ ಒಳಪಡಲಿದೆ. ಆದರೆ, ಪ್ರಿ-ಪ್ಯಾಕ್ ಮಾಡಿದ ಪಾಪ್‌ಕಾರ್ನ್‌ಗೆ ಶೇ.12 ಮತ್ತು ಕ್ಯಾರಮೆಲ್ ಲೇಪಿತ ಪಾಪ್‌ಕಾರ್ನ್‌ಗೆ ಶೇ. 18 ಜಿಎಸ್‌ಟಿ ಅನ್ವಯವಾಗಲಿದೆ.
  • ಸಾಲದ ಷರತ್ತುಗಳನ್ನು ಅನುಸರಿಸಲು ವಿಫಲವಾದಾಗ ಸಾಲಗಾರರಿಂದ ಬ್ಯಾಂಕ್‌ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (NBFC) ವಿಧಿಸುವ ಮತ್ತು ಸಂಗ್ರಹಿಸುವ ದಂಡದ ಶುಲ್ಕಗಳ ಮೇಲೆ ಯಾವುದೇ ಜಿಎಸ್‌ಟಿ ಇರುವುದಿಲ್ಲ.
  • ವಹಿವಾಟುಗಳಲ್ಲಿ 2,000 ರೂ.ಗಿಂತ ಕಡಿಮೆ ಮೊತ್ತವನ್ನು ಪ್ರಕ್ರಿಯೆಗೊಳಿಸುವ ಪಾವತಿ ಸಂಗ್ರಾಹಕರು ಜಿಎಸ್‌ಟಿ ವಿನಾಯಿತಿಗೆ ಅರ್ಹರಾಗಿರುತ್ತಾರೆ. ಆದರೆ, ಪಾವತಿ ಗೇಟ್‌ವೇಗಳು ಮತ್ತು ಫಿನ್‌ಟೆಕ್ ಸೇವೆಗಳನ್ನು ಇದರಲ್ಲಿ ಒಳಗೊಂಡಿಲ್ಲ.
  • ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...