Homeಮುಖಪುಟಅಸ್ಸಾಂ | ಬಾಲ್ಯವಿವಾಹ ಪ್ರಕರಣದಲ್ಲಿ ಒಂದೇ ದಿನ 416 ಮಂದಿಯ ಬಂಧನ

ಅಸ್ಸಾಂ | ಬಾಲ್ಯವಿವಾಹ ಪ್ರಕರಣದಲ್ಲಿ ಒಂದೇ ದಿನ 416 ಮಂದಿಯ ಬಂಧನ

- Advertisement -
- Advertisement -

ಶನಿವಾರ ರಾತ್ರಿ ರಾಜ್ಯಾದ್ಯಂತ ನಡೆದ ದಾಳಿಯಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳ 416 ಜನರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ. ಒಟ್ಟು 335 ಪ್ರಕರಣಗಳು ದಾಖಲಾಗಿದ್ದು, ಬಂಧಿತರನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಸ್ಸಾಂ

“ಈ ಸಾಮಾಜಿಕ ಅನಿಷ್ಟವನ್ನು ಕೊನೆಗೊಳಿಸಲು ನಾವು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತೇವೆ” ಎಂದು ಮುಖ್ಯಮಂತ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಆಪಾದಿತ ಬಾಲ್ಯವಿವಾಹಗಳ ವಿರುದ್ಧ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಪ್ರಾರಂಭಿಸಿದ ಮೂರನೇ ಕ್ರಮ ಇದಾಗಿದೆ. ಅಸ್ಸಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೆಪ್ಟೆಂಬರ್ 11, 2023 ರಂದು, ಮೊದಲ ಸುತ್ತಿನ ದಾಳಿಯಲ್ಲಿ ಆ ವರ್ಷದ ಫೆಬ್ರವರಿಯಿಂದ 3,907 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರವು ವಿಧಾನಸಭೆಗೆ ತಿಳಿಸಿತ್ತು. ಇವರಲ್ಲಿ 3,319 ಮಂದಿಯನ್ನು ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರ ಅಡಿಯಲ್ಲಿ ಬಂಧಿಸಲಾಗಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ 1,000 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು.

ಜನವರಿ 2023 ರಲ್ಲಿ, ಅಸ್ಸಾಂ ಸರ್ಕಾರವು ಬಾಲ್ಯ ವಿವಾಹಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸುತ್ತಿದೆ ಮತ್ತು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಮತ್ತು 14 ರಿಂದ 18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ಬಂಧಿಸುತ್ತೇವೆ ಎಂದು ಶರ್ಮಾ ಘೋಷಿಸಿದ್ದರು.

ಫೆಬ್ರವರಿಯಲ್ಲಿ, 4,004 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದು, ಅಧಿಕಾರಿಗಳ ಮುಖ್ಯ ಗುರಿ ಬಾಲ್ಯ ವಿವಾಹಗಳನ್ನು ಪ್ರೋತ್ಸಾಹಿಸುವ “ಮುಲ್ಲಾಗಳು, ಕಾಜಿಗಳು ಮತ್ತು ಪೂಜಾರಿಗಳು” ಎಂದು ಹೇಳಿದ್ದಾರೆ. ಇದತ ತರುವಾಯ, ಗುವಾಹಟಿ ಹೈಕೋರ್ಟ್ ಪೊಲೀಸರ ಕ್ರಮವು ರಾಜ್ಯದಲ್ಲಿ ವಿನಾಶವನ್ನು ಉಂಟುಮಾಡುತ್ತಿದೆ ಎಂದು ಹೇಳಿದೆ. ಬಾಲ್ಯವಿವಾಹದ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ನ್ಯಾಯಾಲಯವು ಈ ಹೇಳಿಕೆ ನೀಡಿದ್ದು, ಪೋಕ್ಸೊ ಕಾಯ್ದೆಯಡಿ ಆರೋಪಗಳನ್ನು ಸಮರ್ಥಿಸಲಾಗುವುದಿಲ್ಲ ಎಂದು ಹೇಳಿದೆ.

ಆಗಸ್ಟ್‌ನಲ್ಲಿ, ರಾಜ್ಯ ಅಸೆಂಬ್ಲಿಯು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ಕಡ್ಡಾಯ ನೋಂದಣಿ ಮಸೂದೆಯನ್ನು ಅಂಗೀಕರಿಸಿತು. ಈ ಕಾಯ್ದೆಯು ಮುಸ್ಲಿಮರ ವಿವಾಹಗಳನ್ನು ಸರ್ಕಾರದಲ್ಲಿ ನೋಂದಾಯಿಸುವುದನ್ನು ಕಡ್ಡಾಯಗೊಳಿಸುತ್ತದೆ. ಈ ಮಸೂದೆಯು ಬ್ರಿಟಿಷರ ಕಾಲದ ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿ ಕಾಯಿದೆ, 1935 ಅನ್ನು ಬದಲಿಸಿ ಜಾರಿಗೆ ತರಲಾಗಿದ್ದು, ಕಾಯಿದೆ ಬದಲಾಗುವವರೆಗೆ ಬ್ರಿಟೀಷ್ ಕಾನೂನು ಜಾರಿಯಲ್ಲಿತ್ತು.

ಬಾಲ್ಯವಿವಾಹದ ವಿರುದ್ಧದ ಹೋರಾಟದಲ್ಲಿ ಮಸೂದೆಯ ಅಂಗೀಕಾರವು “ಐತಿಹಾಸಿಕ ದಿನ” ಎಂದು ಗುರುತಿಸಲಾಗಿದೆ ಎಂದು ಶರ್ಮಾ ಆ ಸಮಯದಲ್ಲಿ ಹೇಳಿದ್ದರು. “ಇದು ಹದಿಹರೆಯದ ಗರ್ಭಧಾರಣೆಯ ವಿರುದ್ಧ ಕಟ್ಟುನಿಟ್ಟಾದ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ನಮ್ಮ ಹುಡುಗಿಯರ ಒಟ್ಟಾರೆ ಬೆಳವಣಿಗೆಯನ್ನು ಸುಧಾರಿಸುತ್ತದೆ” ಎಂದು ಶರ್ಮಾ ಹೇಳಿದ್ದರು. ಇದೇ ವೇಳೆ ಅವರು, ಬಹುಪತ್ನಿತ್ವವನ್ನು ನಿಷೇಧಿಸುವುದು ತಮ್ಮ ಮುಂದಿನ ಗುರಿ ಎಂದು ಹೇಳಿದ್ದರು.

ಇದನ್ನೂ ಓದಿ: ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...