ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳಷ್ಟು ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ” ಎಂದು ಹೇಳಿದರು.
ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸುವಂತೆ ರೈತರು ಬೇಡಿಕೆ ಇಟ್ಟಿದ್ದಾರೆ. ತೊಗರಿ ಬೆಳೆಯ ಸ್ಥಿತಿ ಗತಿ ಕುರಿತು ವರದಿ ಕೇಳಿದ್ದೇವೆ. ಆ ವರದಿ ಬಂದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಕಲ್ಯಾಣ ಕರ್ನಾಟಕ ಆರೋಗ್ಯ ವ್ಯವಸ್ಥೆಯಲ್ಲಿ ಜಯದೇವ ಆಸ್ಪತ್ರೆ ಮಹತ್ವದ್ದು. ಮಲ್ಲಿಕಾರ್ಜುನ ಖರ್ಗೆ ಹೋರಾಟದ ಫಲವಾಗಿ 371(ಜೆ) ಜಾರಿಯಾಗಿದೆ. 371 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಉದ್ಘಾಟಿಸಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ : ‘ಮನುವಾದಿ ಅಮಿತ್ ಶಾ ರಾಜೀನಾಮೆ ಕೊಡೋವರೆಗೂ ಹೋರಾಟ ನಿಲ್ಲಿಸಲ್ಲ..’; ದಸಂಸ ನಾಯಕ ಡಿ.ಜಿ.ಸಾಗರ್ ಎಚ್ಚರಿಕೆ


