‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರವಾಗುವುದು ಅನುಮಾನ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಶನಿವಾರ ರಾತ್ರಿ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಗುರುವಾರ ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ “ತಳ್ಳಿದ್ದಾರೆ” ಎಂದ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.
‘ಒಂದು ರಾಷ್ಟ್ರ ಒಂದು ಚುನಾವಣೆ’ (ಒಎನ್‌ಒಇ) ನಡೆಸಲು ಉದ್ದೇಶಿಸಿರುವ ಈ ಎರಡು ಮಸೂದೆಗಳು ಕಾನೂನು ಆಗಲು ಸಂವಿಧಾನದಲ್ಲಿ ತಿದ್ದುಪಡಿಯ ಅಗತ್ಯವಿರುತ್ತದೆ. ಮಸೂದೆಗಳನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು. ಆದರೆ ಲೋಕಸಭೆಯು ಶುಕ್ರವಾರ ಎರಡು ಮಸೂದೆಗಳನ್ನು ಸಂಸತ್ತಿನ ಜಂಟಿ ಸಮಿತಿಗೆ (ಜೆಪಿಸಿ) ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಸೂದೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ದಿಗ್ವಿಜಯ ಸಿಂಗ್, “ಜಂಟಿ ಸಮಿತಿಯನ್ನು ಅನ್ನು ರಚಿಸಲಾಗಿದೆ. ಆದರೆ ಅದನ್ನು ಅಂಗೀಕರಿಸಲಾಗುತ್ತದೆ ಎಂದು ನಾನು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.
ಗುರುವಾರ, ಸಂಸದರಾದ ಪ್ರತಾಪ್ ಚಂದ್ರ ಸಾರಂಗಿ ಮತ್ತು ಮುಖೇಶ್ ರಜಪೂತ್ ಗಾಯಗೊಂಡ ನಂತರ ರಾಹುಲ್ ಗಾಂಧಿ ವಿರುದ್ಧ ದೈಹಿಕ ಹಲ್ಲೆ ಮತ್ತು ಪ್ರಚೋದನೆಯ ಆರೋಪದ ಮೇಲೆ ಬಿಜೆಪಿ ದೂರಿನ ಮೇರೆಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ನಡುವೆ, ಬಿಜೆಪಿ ಸಂಸದರು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಿದ್ದು, ರಾಹುಲ್ ಗಾಂಧಿಯ ಮೇಲೆ ಕೂಡಾ ದಾಳಿ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಬಿಜೆಪಿಯ ಹೇಳಿಕೆಯನ್ನು ತಿರಸ್ಕರಿಸಿದೆ.
ಬಿಜೆಪಿ ಸಂಸದರನ್ನು ರಾಹುಲ್ ಗಾಂಧಿ ತಳ್ಳಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಿದ ದಿಗ್ವಿಜಯ್ ಸಿಂಗ್, ಇದು ಸಂಪೂರ್ಣವಾಗಿ ಸುಳ್ಳು ಎಂದು ಹೇಳಿದ್ದಾರೆ. “ಇದು ಸಂಪೂರ್ಣವಾಗಿ ತಪ್ಪು ಹೇಳಿಕೆ. ಬಿಜೆಪಿ ನಾಯಕರ ನಡುವೆ ತಳ್ಳಾಟ ನಡೆದಿದೆ. ಒಬ್ಬ ಬಿಜೆಪಿ ಸಂಸದ ಮತ್ತೊಬ್ಬನ ಮೇಲೆ ಬಿದ್ದ. ಇಬ್ಬರೂ ಗಾಯಗೊಂಡರು. ಅವರು ಬಿದ್ದಾಗ ಮುಂದೆ ರಾಹುಲ್ ಗಾಂಧಿ ನಿಂತಿದ್ದರು. ಒಂದು ವೇಳೆ ಅವರು ತಳ್ಳಿದಾಗ ಅವರು ರಾಹುಲ್ ಗಾಂಧಿ ಅವರ ಮುಂದೆ ಬೀಳಲು ಹೇಗೆ ಸಾಧ್ಯ?” ಎಂದು ಅವರು ಕೇಳಿದ್ದಾರೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ : ಸಿಎಂ ಸಿದ್ದರಾಮಯ್ಯ


