Homeಮುಖಪುಟಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ...

ಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಬಳಕೆದಾರರ ಮೇಲೆ ಕಣ್ಗಾವಲಿಟ್ಟಿರುವುದಕ್ಕೆ ಸಂಬಂಧಿಸಿದಂತೆ ಯುಎಸ್‌ನ ನ್ಯಾಯಾಲಯ ನೀಡಿರುವ ತೀರ್ಪು, 2019ರಲ್ಲಿ 300 ಜನ ಭಾರತೀಯರ ವಾಟ್ಸಾಪ್ ಹ್ಯಾಕ್ ಮಾಡಿರುವುದನ್ನು ರುಜುವಾತು ಮಾಡಿದೆ. ಹಾಗಾಗಿ, ಈ ಕುರಿತು ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಪೆಗಾಸಸ್ ಸ್ಪೈವೇರ್ ಬಳಸಿಕೊಂಡು ಭಾರತದ ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು (ವಾಟ್ಸಾಪ್‌) ಹ್ಯಾಕ್ ಮಾಡಲಾಗಿದೆ ಎಂಬ ಆರೋಪ 2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು. ಸುಮಾರು 300 ಜನರ ಮೊಬೈಲ್ ಹ್ಯಾಕ್ ಮಾಡಿ ಸರ್ಕಾರ ಅವರ ಚಟುವಟಿಕೆ, ಚಲನವಲನಗಳ ಮೇಲೆ ಕಣ್ಣಿಟ್ಟಿದೆ ಎಂದು ಆರೋಪಿಸಲಾಗಿತ್ತು. ಆದರೆ, ಸರ್ಕಾರ ಅದನ್ನು ತಳ್ಳಿ ಹಾಕಿತ್ತು.

ಎಕ್ಸ್‌ ಪೋಸ್ಟ್ ಮೂಲಕ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು ” ಯುಎಸ್ ನ್ಯಾಯಾಲಯ ಪೆಗಾಸಸ್ ಕುರಿತು ತೀರ್ಪು ನೀಡಿರುವ ಹಿನ್ನೆಲೆ, 2019ರಲ್ಲಿ ಮೊಬೈಲ್ ಹ್ಯಾಕ್ ಮಾಡಿ ಕಣ್ಗಾವಲಿಟ್ಟಿದ್ದ 300 ಜನ ಭಾರತೀಯರ ಮಾಹಿತಿಯನ್ನು ಬಹಿರಂಗಪಡಿಸುವ ಸಮಯ ನರೇಂದ್ರ ಮೋದಿ ಸರ್ಕಾರಕ್ಕೆ ಬಂದಿದೆ” ಎಂದಿದ್ದಾರೆ.

“ಬಿಜೆಪಿ ಮತ್ತು ಸರ್ಕಾರದ ಸಂಸ್ಥೆಗಳು ಮೊಬೈಲ್ ಹ್ಯಾಕ್ ಮಾಡಿ ಯಾವೆಲ್ಲ ಮಾಹಿತಿಗಳನ್ನು ಪಡೆದುಕೊಂಡಿವೆ? ಅದನ್ನು ಹೇಗೆ ದುರುಪಯೋಗ ಮಾಡಿಕೊಳ್ಳಲಾಗಿದೆ? ಯಾವುದಕ್ಕೆಲ್ಲ ಬಳಸಲಾಗಿದೆ? “ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಬಿಜೆಪಿ ಸರ್ಕಾರದ ಪ್ರಮುಖರು, ಅಧಿಕಾರಿಗಳು ಮತ್ತು ಎನ್‌ಎಸ್‌ಒ ಗ್ರೂಪ್ ವಿರುದ್ಧ ಸೂಕ್ತ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬಹುದೇ? ಎಂದು ಸುರ್ಜೇವಾಲಾ ಕೇಳಿದ್ದಾರೆ.

ಯುಎಸ್ ಕೋರ್ಟ್ ಪೆಗಾಸಸ್ ಕುರಿತು ನೀಡಿರುವ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಿಸಿದೆಯಾ? ಪೆಗಾಸಸ್ ಬಳಸಿ ಹ್ಯಾಕ್ ಸಂಬಂಧ 2021-22ರಲ್ಲಿ ತಾಂತ್ರಿಕ ತಜ್ಞರ ಸಮಿತಿ ನೀಡಿದ ವರದಿಯನ್ನು ಬಹಿರಂಗಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಂದುವರಿಯುತ್ತದಾ? ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಭಾರತದ 300 ಸೇರಿದಂತೆ ಒಟ್ಟು 1,400 ವಾಟ್ಸಾಪ್ ಬಳಕೆದಾರರ ಮೇಲೆ ಪೆಗಾಸಸ್ ಬಳಸಿ ಕಣ್ಗಾವಲಿಟ್ಟ ಬಗ್ಗೆ ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಮುಂದಾಗಲಿದೆಯಾ? ಎಂದು ಸುರ್ಜೇವಾಲ ಕೇಳಿದ್ದಾರೆ.

ಇದನ್ನೂ ಓದಿ : ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...