ಸಂಸತ್ತಿನಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯವು ಸಮನ್ಸ್ ನೀಡಿದೆ.ಪ್ಯಾಲೆಸ್ತೀನ್ ಪರ ಘೋಷಣೆ ಕೂಗುವ ಮೂಲಕ ಲೋಕಸಭೆ ಸಂಸದರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರುದಾರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ
ಜೂನ್ ತಿಂಗಳಲ್ಲಿ ಸಂಸತ್ತಿನ ಕೆಳಮನೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಓವೈಸಿ ಅವರು, ಪ್ಯಾಲೆಸ್ತೀನ್ ಪರ ಘೋಷಣೆ ಕೂಗುವ ಮೂಲಕ ಸಾಂವಿಧಾನಿಕ ಮತ್ತು ಕಾನೂನು ನಂಬಿಕೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿ ಸಲ್ಲಿಸಿದ ವಕೀಲ ವೀರೇಂದ್ರ ಗುಪ್ತಾ ಆರೋಪಿಸಿದ್ದಾರೆ. ಅವರು ಜುಲೈನಲ್ಲಿ ಸಂಸದ/ಶಾಸಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಂಸದ/ಶಾಸಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾದ ನಂತರ ಗುಪ್ತಾ ಅವರು ಬರೇಲಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದರು. ಓವೈಸಿ ಕೂಗಿದ ಘೋಷಣೆಯಿಂದ ತನಗೆ ನೋವಾಗಿದೆ ಎಂದು ವಕೀಲರು ಹೇಳಿದ್ದಾರೆ. ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಧೀಶರು ಜನವರಿ 7 ರಂದು ಓವೈಸಿ ಅವರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಓವೈಸಿ ಅವರು 2004 ರಿಂದ ಹೈದರಾಬಾದ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಜೂನ್ 25 ರಂದು 18 ನೇ ಲೋಕಸಭೆಯಲ್ಲಿ ಹೈದರಾಬಾದ್ ಸಂಸದರಾಗಿ ಓವೈಸಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಮುತ್ತಿಗೆ ಹಾಕಲ್ಪಟ್ಟ ಪ್ಯಾಲೆಸ್ತೀನ್ ಪ್ರದೇಶದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಯುದ್ಧದ ವಿರುದ್ಧ “ಜೈ ಪ್ಯಾಲೆಸ್ತೀನ್” ಎಂದು ಹೇಳುವ ಮೂಲಕ ಓವೈಸಿ ಅವರು ತಮ್ಮ ಪ್ರಮಾಣವಚನವನ್ನು ಮುಕ್ತಾಯಗೊಳಿಸಿದ್ದರು.
ಇದರ ನಂತರ ಜೂನ್ 27 ರಂದು, ಅಪರಿಚಿತ ದುಷ್ಕರ್ಮಿಗಳು ಓವೈಸಿ ಅವರ ದೆಹಲಿಯ ಮನೆಗೆ ಧ್ವಂಸಗೊಳಿಸಿದ್ದರು ಮತ್ತು ಪ್ರವೇಶ ದ್ವಾರದಲ್ಲಿ ಮತ್ತು ಮನೆಯ ಗೋಡೆಯ ಮೇಲೆ ಇಸ್ರೇಲ್ ಪರ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಪೋಸ್ಟರ್‌ಗಳಲ್ಲಿ “ನಾನು ಇಸ್ರೇಲ್ ಪರ” ಮತ್ತು “ಒವೈಸಿಯನ್ನು ಅಮಾನತುಗೊಳಿಸಿ” ಎಂಬ ಘೋಷಣೆಗಳನ್ನು ಬರೆಯಲಾಗಿತ್ತು.
ಇದನ್ನೂ ಓದಿ: ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!
ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!


