Homeಕರ್ನಾಟಕಸಿ.ಟಿ ರವಿ ಪ್ರಕರಣ ಸಿಐಡಿ ಹೆಗಲಿಗೆ : ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಸಿ.ಟಿ ರವಿ ಪ್ರಕರಣ ಸಿಐಡಿ ಹೆಗಲಿಗೆ : ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

- Advertisement -
- Advertisement -

ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಿ.ಟಿ ರವಿ ಅಶ್ಲೀಲ ಪದ ಬಳಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ (ಡಿ.24) ಹುಬ್ಬಳ್ಳಿಯಲ್ಲಿ ಮಾತನಾಡಿದ ಪರಮೇಶ್ವರ್ ಅವರು, “ಸಿ.ಟಿ ರವಿ ತಾನು ಅವಾಚ್ಯ ಪದ ಬಳಕೆ ಮಾಡಿಲ್ಲ ಎಂದು ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಇತರ ಕೆಲ ಪರಿಷತ್ ಸದಸ್ಯರು ಅವಾಚ್ಯ ಪದ ಬಳಸಿರುವುದು ನಿಜ ಎಂದಿದ್ದಾರೆ. ಹಾಗಾಗಿ, ಇವೆಲ್ಲದರ ಕುರಿತು ತನಿಖೆ ನಡೆಯಲಿದೆ. ಸಿಐಡಿ ಸತ್ಯಾಸತ್ಯತೆ ಪರಿಶೀಲಿಸಿ ವರದಿ ನೀಡಲಿದೆ ಎಂದು ಹೇಳಿದ್ದಾರೆ.

ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, “ಪೊಲೀಸರು ತಮ್ಮ ಕೆಲಸ ಮಾಡಿದ್ದಾರೆ. ಸಭಾಪತಿ ಅವರ ಕೆಲಸ ಮಾಡಿದ್ದಾರೆ. ಪೊಲೀಸ್ ಇಲಾಖೆಗೆ ತನ್ನದೇ ಆದ ಜವಬ್ದಾರಿಗಳಿರುತ್ತದೆ. ಏನೇ ಕ್ರಮ ಕೈಗೊಳ್ಳಬೇಕಿದ್ದರೂ ಮುಖ್ಯಮಂತ್ರಿ ಅಥವಾ ಗೃಹ ಸಚಿವರು ಆದೇಶ ನೀಡಬೇಕು. ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ನ್ಯಾಯಾಂಗ ತನಿಖೆ ಬಿಜೆಪಿ ಮನವಿ:

ಇತ್ತ ಸಿ.ಟಿ ವಿರುದ್ದದ ಆರೋಪದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದರೆ, ಅತ್ತ ಬಿಜೆಪಿ ನಿಯೋಗ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್ ಅವರನ್ನು ಭೇಟಿಯಾಗಿ ಪ್ರಕರಣದ ನ್ಯಾಯಾಂಗ ತನಿಖೆಗೆ ಕೋರಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿಯ ಇತರ ಹಿರಿಯ ನಾಯಕರ ನೇತೃತ್ವದ ನಿಯೋಗ ನಿನ್ನೆ (ಡಿ.24) ಸಂಜೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ನ್ಯಾಯಾಂಗ ತನಿಖೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು PC : thenewsminute.com

ರಾಜ್ಯಪಾಲ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, “ಸಿ.ಟಿ ರವಿ ಅವರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ಕುರಿತು ರಾಜ್ಯಪಾಲರಿಗೆ ವಿವರಿಸಿದ್ದೇವೆ. ಅವರ ವಿರುದ್ದದ ಆರೋಪ ಮತ್ತು ನಂತರ ನಡೆದ ಬೆಳವಣಿಗೆಗಳ ಕುರಿತು ನ್ಯಾಯಾಂಗ ತನಿಖೆಗೆ ಆಗಹಿಸಿದ್ದೇವೆ” ಎಂದು ಹೇಳಿದ್ದಾರೆ.

ಅಂಬೇಡ್ಕರ್‌ಗೆ ಅವಮಾನ| ಅಮಿತ್‌ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...