Homeಕರ್ನಾಟಕಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಆದಿವಾಸಿ, ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಆದಿವಾಸಿ, ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

- Advertisement -
- Advertisement -

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದನ್ನು ವಿರೋಧಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟ, ಜೈ ಭೀಮ್ ಮಿಷನ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ ಮಂಚ್ ಜಂಟಿಯಾಗಿ ಪ್ರತಿಭಟನೆಯನ್ನು ಆಯೋಜಿಸುತ್ತಿವೆ. ಕಾಂಗ್ರೆಸ್ ಮತ್ತು ಬಿಎಸ್ಪಿ ಪ್ರತ್ಯೇಕ ರಾಷ್ಟ್ರವ್ಯಾಪಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಘೋಷಿಸಿವೆ.

ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ಕುರಿತು ರಾಜ್ಯಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ  ಶಾ ಅವರು ಅಂಬೇಡ್ಕರ್ ಕುರಿತು ನೀಡಿರುವ  ಹೇಳಿಕೆಯನ್ನು ವಿರೋಧಿಸಿ ಎಡಪಕ್ಷಗಳಾದ ಸಿಪಿಐ(ಎಂ), ಸಿಪಿಐ, ಆರ್‌ಎಸ್‌ಪಿ, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಮತ್ತು ಸಿಪಿಐ(ಎಂಎಲ್)ಎಲ್ ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಆಯೋಜಿಸುತ್ತಿವೆ.

ಅಂಬೇಡ್ಕರ್‌, ಅಂಬೇಡ್ಕರ್‌, ಅಂಬೇಡ್ಕರ್‌, ಅಂಬೇಡ್ಕರ್‌, ಅಂಬೇಡ್ಕರ್‌, ಅಂಬೇಡ್ಕರ್‌ ಎಂದು ಹೇಳುವುದು ಈಗ ಫ್ಯಾಷನ್‌ ಆಗಿಬಿಟ್ಟಿದೆ. ಇಷ್ಟು ಸಾರಿ ಭಗವಂತನ ನಾಮಸ್ಮರಣೆ ಮಾಡಿದ್ದರೆ ಏಳು ಜನ್ಮಕ್ಕೂ ಸ್ವರ್ಗಪ್ರಾಪ್ತಿಯಾಗುತ್ತಿತ್ತು ಎಂದು ಶಾ ಡಿಸೆಂಬರ್‌ 17ರಂದು ಶಾ ಹೇಳಿದ್ದರು. ಈ ಹೇಳಿಕೆ ಸಂಸತ್ತಿನಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಯಿತು.

ಡಿಸೆಂಬರ್ 28ರಂದು ಅಶೋಕ್ ಭಾರ್ತಿ ನೇತೃತ್ವದ ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟ, ರಾಜ್ ಪಾಲ್ ಗೌತಮ್ ನೇತೃತ್ವದ ಜೈ ಭೀಮ್ ಮಿಷನ್ ಮತ್ತು ಜಿಗ್ನೇಶ್ ಮೇವಾನಿ ನೇತೃತ್ವದ ರಾಷ್ಟ್ರೀಯ ದಲಿತ ಅಧಿಕಾರ ಮಂಚ್‌ನ ಪ್ರತಿಭಟನೆಯು ಶಾ ವಿರುದ್ಧದ ಪ್ರತಿಭಟನೆಯಲ್ಲಿ ವಿವಿಧ ಎಸ್‌ಸಿ ಮತ್ತು ಎಸ್‌ಟಿ ಸಂಘಟನೆಗಳನ್ನು ಸಜ್ಜುಗೊಳಿಸುವ ಸಾಧ್ಯತೆಯಿದೆ.

ಅಂಬೇಡ್ಕರ್ ಅವರ ಮೇಲಿನ “ಅಗೌರವ ಮತ್ತು ಅವಹೇಳನಕಾರಿ” ಕಾಮೆಂಟ್‌ಗಳ ಪರಿಣಾಮವಾಗಿ, ದೇಶಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗಳು ನಡೆಯುತ್ತಿವೆ. ಆದಾಗ್ಯೂ, ಅಮಿತ್ ಶಾ ಅಥವಾ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಮತ್ತು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿಲ್ಲ. ಹಾಗಾಗಿ ನಮ್ಮ ಪ್ರತಿಭಟನೆಯನ್ನು ಮುಂದುವರೆಸುವ ಭಾಗವಾಗಿ ಡಿಸೆಂಬರ್ 30 ರಂದು ಶಾ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಪ್ರತಿಭಟನಾ ದಿನವನ್ನು ಆಯೋಜಿಸಲು ನಿರ್ಧರಿಸಿದ್ದೇವೆ ಎಂದು ಎಡಪಕ್ಷಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

ದೇಶದಾದ್ಯಂತ ಅಂಬೇಡ್ಕರ್ ಅವರ ದೊಡ್ಡ ಭಾವಚಿತ್ರಗಳನ್ನು ಹಿಡಿದು ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಿಗೆ ಮೆರವಣಿಗೆ ನಡೆಸಲಿದೆ. ಪಕ್ಷದ ಮುಖಂಡರು ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ ಮತ್ತು ಶಾ ಅವರನ್ನು ಗೃಹ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್‌ನ ಪ್ರತಿಭಟನೆಗಳ ಬಗ್ಗೆ ವಾಗ್ದಾಳಿ ನಡೆಸುತ್ತಿರುವ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಶಾ ಅವರ ಹೇಳಿಕೆಯು ಅಂಬೇಡ್ಕರ್ ಅವರ ಅನುಯಾಯಿಗಳಿಗೆ ತೀವ್ರ ನೋವುಂಟು ಮಾಡಿದೆ ಮತ್ತು ಗೃಹ ಸಚಿವರು ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಅಂಬೇಡ್ಕರ್ ಅನುಯಾಯಿಗಳ ಹಿತಾಸಕ್ತಿ ಕಾಪಾಡಲು ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ಬದ್ಧವಾಗಿಲ್ಲ ಎಂಬುದನ್ನು ಇತ್ತೀಚಿನ ಘಟನೆಗಳು ಸಾಬೀತುಪಡಿಸುತ್ತವೆ. ಅವರ ನೀತಿಗಳು ಮತ್ತು ತತ್ವಗಳು ಪ್ರಾಮಾಣಿಕತೆಯನ್ನು ಹೊಂದಿಲ್ಲ ಎಂದು ಮಾಯಾವತಿ ಅವರು ವಾಗ್ದಾಳಿ ನಡೆಸುತ್ತಿದ್ದಾರೆ.

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...