Homeಕರ್ನಾಟಕ25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

- Advertisement -
- Advertisement -

25 ವರ್ಷಗಳ ಹಿಂದೆ ಕುಟುಂಬದೊಂದಿಗೆ ಸಂಪರ್ಕ ಕಳೆದುಕೊಂಡ ಕರ್ನಾಟಕದ 50 ವರ್ಷದ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ವೃದ್ಧಾಶ್ರಮದಲ್ಲಿದ್ದ ಮಹಿಳೆ ಸಾಕಮ್ಮ ಮತ್ತೆ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾರೆ. ಅಧಿಕಾರಿಗಳ ನೆರವಿನಿಂದ ಬುಧವಾರ ಅವರು ತನ್ನ ಮನೆಗೆ ಮರಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಡಣನಾಯಕನಕೆರೆ ಗ್ರಾಮದ ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಲ್ಲಿ ಸಂಬಂಧಿಕರ ಮದುವೆಗೆ ಮಕ್ಕಳೊಂದಿಗೆ ಹಾಜರಾಗಿದ್ದರು. ಮಾನಸಿಕ ಅಸ್ವಸ್ತರಾಗಿದ್ದ ಅವರು, ಆಕಸ್ಮಿಕವಾಗಿ ಚಂಡೀಗಢಕ್ಕೆ ರೈಲನ್ನು ಹತ್ತಿದರು. ನಂತರ, ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಕಷ್ಟಕರ ಸಂದರ್ಭಗಳಲ್ಲಿ ವಾಸಿಸುತ್ತಿದ್ದರು.

ಸಾಕಮ್ಮನ ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು; ಇಷ್ಟು ವರ್ಷಗಳಾದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಅಂತ್ಯ ಸಂಸ್ಕಾರವನ್ನೂ ಮಾಡಿದ್ದರು.

ಕರ್ನಾಟಕ ಮೂಲದ ಯುವ ಐಪಿಎಸ್ ಅಧಿಕಾರಿಯೊಬ್ಬರು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಮಹಿಳೆ ಕನ್ನಡದಲ್ಲಿ ಮಾತನಾಡುತ್ತಿರುವುದನ್ನು ಕಂಡು ಆಕೆಯ ಸಂಪರ್ಕವನ್ನು ಪತ್ತೆಹಚ್ಚಿದ್ದಾರೆ.

ಸಾಕಮ್ಮ ಅವರನ್ನು ಕರೆತರಲು ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ.

ಮಂಡಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಪೊಲೀಸ್ ಅಧಿಕಾರಿ ರವಿನಂದನ್ ಬಿ ಎಂ, ಸಾಕಮ್ಮ ಅವರೊಂದಿಗೆ ಮಾತನಾಡಿದ ವಿಡಿಯೋ ಪೋಸ್ಟ್ ಮಾಡಿದ್ದರು. ನಂತರ ಈ ವಿಡಿಯೋವನ್ನು ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತ ವಿಜಯ್ ಕುಮಾರ್ ಗೆ ಕಳುಹಿಸಿದ್ದಾರೆ. ವಿಜಯ್ ಕುಮಾರ್ ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಪೋಸ್ಟ್ ನೋಡಿದ ತಕ್ಷಣ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರು ಗುರುವಾರ ಮಂಡಿ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿನಂದನ್ ಅವರನ್ನು ಸಂಪರ್ಕಿಸಿದರು. ಅಂದಿನಿಂದ ಸಮಾಜ ಕಲ್ಯಾಣ ಇಲಾಖೆಯು ಸಾಕಮ್ಮನನ್ನು ಹಿಂದಿರುಗಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಮಂಡಿ ನಿರಾಶ್ರಿತರ ಕೇಂದ್ರದಲ್ಲಿರುವ ಸಾಕಮ್ಮ ಅವರನ್ನು ಕರೆತರಲು ಸಮಾಜ ಕಲ್ಯಾಣ ಇಲಾಖೆಯ ತ್ರಿಸದಸ್ಯರ ತಂಡ ತೆರಳಿತ್ತು. “ಚಂಡೀಗಢದಿಂದ ಬೆಂಗಳೂರಿಗೆ ವಿಮಾನದಲ್ಲಿ ಬರಲಿದ್ದಾರೆ. ನಂತರ, ಅವರನ್ನು ಕರೆತರುತ್ತೇವೆ” ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದರು.

ಸದ್ಯ ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯಲ್ಲಿ ವಾಸವಾಗಿರುವ ಸಾಕಮ್ಮ ಅವರ ಪುತ್ರ ಯಲ್ಲಪ್ಪ, “ನಮ್ಮ ತಾಯಿ ಚಿಕ್ಕಂದಿನಲ್ಲಿ ನಾಪತ್ತೆಯಾಗಿದ್ದರು, ಈಗ ಪತ್ತೆಯಾಗಿದ್ದಾರೆ, ನಮ್ಮ ತಾಯಿ ಮರಳಿ ಬಂದರೆ ನಮಗೆ ಸಂತೋಷವಾಗುತ್ತದೆ” ಎಂದರು.

ಸಾಕಮ್ಮ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಅವರ ಪುತ್ರ.

ಸಾಕಮ್ಮನ ಸಂಬಂಧಿಯೊಬ್ಬರು ಮಾತನಾಡಿ, “ನಮ್ಮ ಚಿಕ್ಕಮ್ಮ ನಾಪತ್ತೆಯಾಗಿ ಸುಮಾರು 20 ವರ್ಷಗಳಾಗಿವೆ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಆಕೆ ತೀರಿಕೊಂಡಿದ್ದಾಳೆಂದು ತಿಥಿ ನಡೆಸಿದ್ದೆವು. ಅಧಿಕಾರಿ, ಮೂಲತಃ ಹಾಸನ ಜಿಲ್ಲೆಯವರು, ಮಕ್ಕಳಿಗೆ ಈಗ ತಾಯಿ ಇದ್ದಾರೆ ಎಂದು ನಮಗೆ ಸಂತೋಷವಾಗಿದೆ” ಎಂದರು.

ವಿಡಿಯೋದಲ್ಲಿ ಸಾಕಮ್ಮ ತನ್ನ ಹುಟ್ಟೂರು ಹೊಸಪೇಟೆ ಸಮೀಪದ ಡಣಾನಾಯಕನಹಳ್ಳಿ ಎಂದು ಹೇಳಿದ್ದಾಳೆ. ತಾನು ರೈಲಿನಲ್ಲಿ ಮಂಡಿ ಜಿಲ್ಲೆಗೆ ಬಂದು ಕೆಲವು ವರ್ಷಗಳಿಂದ ಇಲ್ಲೇ ಇದ್ದೇನೆ ಎಂದು ಹೇಳಿದ್ದರು. ತನ್ನ ಹಳ್ಳಿಯಲ್ಲಿ ತನಗೆ ಒಬ್ಬ ಅಣ್ಣ ಮತ್ತು ತಂಗಿ ಇದ್ದಾರೆ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ; ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಆದಿವಾಸಿ, ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...