Homeಮುಖಪುಟಬೆಂಗಳೂರು| ಕಾರ್ಖಾನೆ ಬಸ್‌ ಹರಿದು ಗಾರ್ಮೆಂಟ್ ಉದ್ಯೋಗಿ ಸಾವು; ಪರಿಹಾರ ಕೊಡಲ್ಲ ಎಂದ 'ಗೋಲ್ಡನ್ ಸೀಮ್ಸ್'...

ಬೆಂಗಳೂರು| ಕಾರ್ಖಾನೆ ಬಸ್‌ ಹರಿದು ಗಾರ್ಮೆಂಟ್ ಉದ್ಯೋಗಿ ಸಾವು; ಪರಿಹಾರ ಕೊಡಲ್ಲ ಎಂದ ‘ಗೋಲ್ಡನ್ ಸೀಮ್ಸ್’ ಕಂಪನಿ

- Advertisement -
- Advertisement -

ಕಾರ್ಖಾನೆ ಆವರಣದಲ್ಲಿಯೇ ಗಾರ್ಮೆಂಟ್ ಉದ್ಯೋಗಿ ಮಹಿಳೆಯ ಮೇಲೆ, ಅದೇ ಕಂಪನಿಯ ಬಸ್‌ ಹರಿದಿದೆ. ಪರಿಣಾಮ, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಕಳಿಯಲ್ಲಿ ನಡೆದಿದೆ.

ಕಾರ್ಖಾನೆಯ ನಿರ್ಲಕ್ಷ್ಯ ಮತ್ತು ಚಾಲಕನ ಅಜಾಗರೂಕತೆಯಿಂದಲೇ ದುರ್ಘಟನೆ ನಡೆದಿದೆ ಎಂದು ಗಾರ್ಮೆಂಟ್‌ ಉದ್ಯೋಗಿಗಳು ಆರೋಪಿಸಿದ್ದಾರೆ. ಆದರೆ, ಪರಿಹಾರ ನೀಡಲು ಗಾರ್ಮೆಂಟ್‌ ಆಡಳಿತ ಮಂಡಳಿ ನಿರಕಾರಿಸಿದೆ ಎಂದು ವರದಿಯಾಗಿದೆ.

ಮಾಕಳಿಯ ‘ಗೋಲ್ಡನ್ ಸೀಮ್ಸ್’ ಗಾರ್ಮೆಂಟ್‌ ಆವರಣದಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅದೇ ಕಾರ್ಖಾನೆಯ ಉದ್ಯೋಗಿ ನಳಿನ ಎಂದು ಗುರುತಿಸಲಾಗಿದೆ. ಅವರು ನಾಲ್ಕು ವರ್ಷಗಳಿಂದ ‘ಗೋಲ್ಡನ್ ಸೀಮ್ಸ್’ ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಎಂದಿನಂತೆ ನಳಿನ ಅವರು ಮಂಗಳವಾರ ಬೆಳಗ್ಗೆ ಕಾರ್ಖಾನೆಯ ಬಸ್‌ನಲ್ಲಿಯೇ ಕೆಲಸಕ್ಕಾಗಿ ಗಾರ್ಮೆಂಟ್‌ಗೆ ಬಂದಿದ್ದಾರೆ. ಕಾರ್ಖಾನೆ ಆವರಣದಲ್ಲಿ ಬಸ್‌ ಇಳಿದು, ಕಾರ್ಖಾನೆ ಒಳಗೆ ನಡೆದುಕೊಂಡು ಹೋಗುತ್ತಿದ್ದಾಗ ಚಾಲಕನ ಅಜಾಗರೂಕತೆಯಿಂದ ಬಸ್ ಆಕೆಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾರ್ಮೆಂಟ್‌ ಉದ್ಯೋಗಿಗಳು ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ, ಗಾರ್ಮೆಂಟ್‌ ಆಡಳಿತವು ಪರಿಹಾರ ನೀಡಲು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ.

ಘಟನೆ ಮತ್ತು ಗಾರ್ಮೆಂಟ್‌ಗಳ ಧೋರಣೆ ಬಗ್ಗೆ ಮಾತನಾಡಿದ ಗಾರ್ಮೆಂಟ್ ಉದ್ಯೋಗಿ ರಾಜು, “ರಾಜ್ಯದ ಗಾರ್ಮೆಂಟ್‌ಗಳಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಗಾರ್ಮೆಂಟ್‌ಗಳು ತಮ್ಮ ಲಾಭಕ್ಕೊಸ್ಕರ ಕಡಿಮೆ ವೇತನ ದುಡಿಸಿಕೊಳ್ಳಲು ಗ್ರಾಮೀಣ ಭಾಗದಿಂದ ಮಹಿಳೆಯರನ್ನು ಕರೆತರುತ್ತಾರೆ. ಕಾರ್ಮಿಕರನ್ನು ಕರೆತರಲು ಉತ್ತಮ ಸ್ಥಿತಿಯಲ್ಲಿರುವ ಬಸ್‌ಗಳನ್ನೂ ಬಳಸುವುದಿಲ್ಲ. ಕಳಪೆ ಬಸ್‌ಗಳನ್ನು ಒದಗಿಸಿ ಕಾರ್ಮಿಕರನ್ನು ಸಾವಿಗೆ ದವಡೆಗೆ ದೂಡುತ್ತಿದ್ದಾರೆ. ಆ ಬಸ್‌ಗಳನ್ನು ಚಾಲಕರು ಮದ್ಯಪಾನ ಮಾಡಿ ಚಲಾಯಿಸುತ್ತಾರೆ. ಇದರಿಂದಾಗಿ ಹಲವಾರು ಅಪಘಾತಗಳು ನಡೆದು, ಕಾರ್ಮಿಕರು ಜೀವ ಕಳೆದುಕೊಂಡಿರುವ ಉದಾಹರಣೆಗಳಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾರ್ಖಾನೆಗಳ ಬೇಜವಾಬ್ದಾರಿಯಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ. ಕಾರ್ಮಿಕರ ಸುರಕ್ಷತೆಯ ಬಗ್ಗೆ ಆಡಳಿತ ಮಂಡಳಿಗೆ ಯಾವುದೇ ಕಾಳಜಿ ಇಲ್ಲ. ಇಂತಹ ಘಟನೆಗಳಿಗೆ ಕಾರ್ಖಾನೆಗಳ ಮಾಲೀಕರೇ ನೇರ ಜಬಾಬ್ದಾರರು” ಎಂದು ಆರೋಪಿಸಿದ್ದಾರೆ.

“ಮೃತ ಕಾರ್ಮಿಕ ಮಹಿಳೆಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಕಳಪೆ ಬಸ್‌ಗಳನ್ನು ಬಿಟ್ಟು, ಸುಸ್ಥಿತಿಯಲ್ಲಿರುವ ಬಸ್‌ಗಳನ್ನು ಒದಗಿಸಬೇಕು. ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ ಕೂಡಲೇ ಮಧ್ಯಪ್ರವೇಶಿಸಿ ಗಾರ್ಮೆಂಟ್ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಹರಿಸಬೇಕು. ಸಮಸ್ಯೆಗಳನ್ನು ಪರಿಹರಿಸಬೇಕು. ಕಾರ್ಮಿಕರನ್ನು ಶೋಷಿಸುತ್ತಿರುವ ಗಾರ್ಮೆಂಟ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕರ್ನಾಟಕ ಸ್ಟೇಟ್ ಗಾರ್ಮೆಂಟ್ ಅಂಡ್ ಟೆಕ್ಸ್ಟೈಲ್ ವರ್ಕರ್ಸ್ ಯೂನಿಯನ್ ಹಾಗೂ ಯುನೈಟೆಡ್ ಯೂನಿಯನ್ ಆಫ್ ಗಾರ್ಮೆಂಟ್ ವರ್ಕರ್ಸ್ ಸಂಘಟನೆಗಳು ಆಗ್ರಹಿಸಿವೆ.

ಇದನ್ನೂ ಓದಿ; 25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದೆಹಲಿ-ಎನ್‌ಸಿಆರ್‌ ಅತ್ಯಾಚಾರ ಪ್ರಕರಣಗಳು ಪೊಲೀಸ್ ಮತ್ತು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತವೆ’ : ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ದೆಹಲಿಯ ಉದ್ಯಾನವನವೊಂದರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಚಲಿಸುತ್ತಿದ್ದ ಸ್ಲೀಪರ್ ಬಸ್‌ನೊಳಗೆ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಇತ್ತೀಚೆಗೆ ವರದಿಯಾದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್...

ಆಗ್ರಾದಲ್ಲಿ ಸಿಇಸಿ ಗ್ಯಾನೇಶ್ ಕುಮಾರ್ ನಿವಾಸದ ಮೇಲೆ ‘ಗ್ಯಾನೇಶ್ ಗದ್ದರ್, ವೋಟ್ ಚೋರ್’ ಬರಹ; ಎಸ್‌ಐಆರ್ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ಆಗ್ರಾ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ದೇಶಾದ್ಯಂತ ರಾಜಕೀಯ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಆಗ್ರಾದಲ್ಲಿರುವ ನಿವಾಸದ ಹೊರಗೆ...

‘ಇಂತಹ ಸರ್ಕಾರವನ್ನು ಬೆಂಬಲಿಸುವುದಕ್ಕೆ ವಿಷಾದವಿದೆ’: ಬಿಹಾರದ ಕಾನೂನು-ಸುವ್ಯವಸ್ಥೆ ಬಗ್ಗೆ ಚಿರಾಗ್ ಪಾಸ್ವಾನ್ ಬಹಿರಂಗ ಅಸಮಾಧಾನ

ಪಾಟ್ನಾ: ಬಿಹಾರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಎನ್‌ಡಿಎ ಮೈತ್ರಿಕೂಟದ ಪ್ರಮುಖ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರದ...

ಕೊಲ್ಕತ್ತಾದ SRFTIನಲ್ಲಿ ಆರ್‌ಎಸ್‌ಎಸ್-ಸಂಯೋಜಿತ ಸಭೆಗೆ ವಿರೋಧ: 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಭೀಕರ ಹಲ್ಲೆ ಆರೋಪ!

ಕೊಲ್ಕತ್ತಾದ ಪ್ರತಿಷ್ಠಿತ ‘ಸತ್ಯಜಿತ್ ರೇ ಫಿಲ್ಮ್ ಆಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್’ (SRFTI) ಆವರಣದಲ್ಲಿ ಭಾನುವಾರ ವಿದ್ಯಾರ್ಥಿಗಳು ಮತ್ತು ಆರ್‌ಎಸ್‌ಎಸ್‌ ಜೊತೆ ಸಂಪರ್ಕ ಹೊಂದಿರುವ ‘ಅಖಿಲ ಭಾರತೀಯ ಗ್ರಾಹಕ್ ಪಂಚಾಯತ್’ (ABGP) ಸದಸ್ಯರ ನಡುವೆ...

‘ಕರ್ನಾಟಕದಲ್ಲಿ ಕೇವಲ ಮೂರು ತಿಂಗಳಲ್ಲಿ ಎಸ್ಐಆರ್ ಸಾಧ್ಯವೇ ಇಲ್ಲ’: ಚುನಾವಣಾ ಆಯೋಗದ ವಿರುದ್ಧ ಮಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ವಾಗ್ದಾಳಿ  

ಮಂಗಳೂರು: ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಕೊಲ್ಲುವುದಕ್ಕಾಗಿ ಬಿಜೆಪಿ ಮಾಡಿರುವ ಬಹುದೊಡ್ಡ ಹುನ್ನಾರವೇ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ....

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...