Homeಮುಖಪುಟಸಂಭಾಲ್ ಹಿಂಸಾಚಾರ ಪ್ರಕರಣ: ಮತ್ತೆ 7 ಆರೋಪಿಗಳನ್ನು ಬಂಧಿಸಿದ ಪೊಲೀಸರು, ಒಟ್ಟು ಸಂಖ್ಯೆ 47 ಕ್ಕೆ...

ಸಂಭಾಲ್ ಹಿಂಸಾಚಾರ ಪ್ರಕರಣ: ಮತ್ತೆ 7 ಆರೋಪಿಗಳನ್ನು ಬಂಧಿಸಿದ ಪೊಲೀಸರು, ಒಟ್ಟು ಸಂಖ್ಯೆ 47 ಕ್ಕೆ ಏರಿಕೆ

- Advertisement -
- Advertisement -

ಮಸೀದಿ ಸಮೀಕ್ಷೆ ವೇಳೆ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಇನ್ನೂ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ನವೆಂಬರ್ 24 ರ ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಲಿತೆಗೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 47 ಜನರನ್ನು ಬಂಧಿಸಲಾಗಿದೆ.

91 ಜನರನ್ನು ಗುರುತಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶ್ರೀಶ್ ಚಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಂಭಾಲ್ ಹಿಂಸಾಚಾರದಲ್ಲಿ ಮತ್ತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಇಂದು ಬಂಧಿತ ಆರೋಪಿಗಳನ್ನು ಶೋಯೆಬ್, ಸುಜಾವುದ್ದೀನ್, ರಹತ್, ಮೊಹಮ್ಮದ್ ಅಜಂ, ಅಜರುದ್ದೀನ್, ಜಾವೇದ್ ಮತ್ತು ಮುಸ್ತಫಾ ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಹೆಚ್ಚಿನ ತಂಡಗಳನ್ನು ರಚಿಸಲಾಗಿದೆ. ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 11 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ನವೆಂಬರ್ 24 ರಂದು ಜಾಮಾ ಮಸೀದಿ ಪ್ರದೇಶದ ಬಳಿ ಹಿಂಸಾತ್ಮಕ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 47 ಜನರನ್ನು ಬಂಧಿಸಲಾಗಿದೆ. 91 ಜನರನ್ನು ಇನ್ನೂ ಬಂಧಿಸಬೇಕಾಗಿದೆ. ಇಂದು ಇನ್ನೂ ಏಳು ಜನರನ್ನು ಬಂಧಿಸಲಾಗಿದೆ” ಎಂದು ಎಎಸ್‌ಪಿ ತಿಳಿಸಿದ್ದಾರೆ.

ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಂಭಾಲ್‌ನ ದೀಪಾ ಸರೈ ನಿವಾಸಿ ಮೊಹಮ್ಮದ್ ಅಕಿಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ. ಜನಸಮೂಹವು ಪೊಲೀಸ್ ತಂಡದ ಮೇಲೆ ದಾಳಿ ಮಾಡಿದಾಗ ಇನ್ಸ್‌ಪೆಕ್ಟರ್‌ನಿಂದ ಪಿಸ್ತೂಲ್ ಮ್ಯಾಗಜೀನ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಕಿತ್ತುಕೊಂಡಿದ್ದಾನೆ ಎಂಬ ಆರೋಪವಿದೆ.

ಲಕ್ನೋದ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ತಂಡವು ಉತ್ತರ ಪ್ರದೇಶದ ಸಂಭಾಲ್‌ಗೆ ತಲುಪಿದಾಗ, ನವೆಂಬರ್ 24 ರಂದು ಗಲಭೆ ಆರಂಭವಾಗಿ ನಗುಂಡಿನ ದಾಳಿಗೆ ಕಾರಣವಾಯಿತು. ಈ ಘಟನೆಯಿಂದ ನಾಲ್ಕು ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ಎಫ್‌ಎಸ್‌ಎಲ್ ತಜ್ಞರು ಇತರ ತನಿಖಾಧಿಕಾರಿಗಳೊಂದಿಗೆ ಗುಂಡಿನ ದಾಳಿಗೆ ಕಾರಣವಾದ ಸಂದರ್ಭಗಳನ್ನು ಪುನರ್ನಿರ್ಮಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕ್ರಿಶನ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿಯ ಎರಡನೇ ಸಮೀಕ್ಷೆಯ ಸಮಯದಲ್ಲಿ ಸಂಭಾಲ್‌ನಲ್ಲಿ ಹಿಂಸಾಚಾರವು ಸ್ಫೋಟಗೊಂಡಿತು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ನಾಲ್ಕು ಸಾವುನೋವುಗಳು ಸಂಭವಿಸಿದವು, 29 ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡರು.

ಇದಕ್ಕೂ ಮುನ್ನ ನವೆಂಬರ್ 19 ರಂದು, ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಅವರು ಸಲ್ಲಿಸಿದ ಅರ್ಜಿಯ ನಂತರ ಮಸೀದಿಯ ಸಮೀಕ್ಷೆಯನ್ನು ನಡೆಸಲಾಯಿತು. ಈ ಪ್ರದೇಶವು ಒಂದು ಕಾಲದಲ್ಲಿ ದೇವಾಲಯವನ್ನು ಹೊಂದಿತ್ತು ಎಂದು ಪ್ರತಿಪಾದಿಸಿದರು.

ಇದನ್ನೂ ಒದಿ; ಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ ‘ನಕಲಿ’ ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ ನಡುವೆ ಜಟಾಪಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...