ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಈ ವೇಳೆ ಅವರ ತಲೆಗೆ ಮೊಟ್ಟೆ ಎಸೆದ ಘಟನೆ ಬುಧವಾರ ನಡೆದಿದೆ. ಘಟನೆ ಈಗ ನಾಟಕೀಯ ತಿರುವು ಪಡೆದುಕೊಂಡಿದೆ.
ಲಗ್ಗೆರೆಯ ಲಕ್ಷ್ಮೀದೇವಿ ನಗರದಲ್ಲಿ ನಡೆದ ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ತಮ್ಮ ಕಾರಿನ ಕಡೆಗೆ ತೆರಳುತ್ತಿದ್ದಾಗ ಬೆಳಗ್ಗೆ 11.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲವಾದರೂ, ನಂದಿನಿ ಲೇಔಟ್ ಪೊಲೀಸರು ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಬಿಜೆಪಿ ಶಾಸಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಉಪ ಪೊಲೀಸ್ ಆಯುಕ್ತ (ಉತ್ತರ) ಸೈದುಲು ಅದಾವತ್ ಮಾತನಾಡಿ, ಶಾಸಕರು ತಮ್ಮ ಕಚೇರಿಯಿಂದ ಸುಮಾರು 50 ಮೀಟರ್ ದೂರದಲ್ಲಿದ್ದ ತಮ್ಮ ಕಾರಿನ ಬಳಿಗೆ ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಮೊಟ್ಟೆಯನ್ನು ಎಸೆದಿದ್ದಾರೆ. ಈ ಘಟನೆಯನ್ನು ಕನ್ನಡ ಟಿವಿ ಪತ್ರಕರ್ತರು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಘಟನೆ ಬಳಿಕ ಮುನಿರತ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ನಂತರ ಮುನಿರತ್ನ ಅವರ ಮೊದಲ ಪ್ರಮುಖ ಸಾರ್ವಜನಿಕ ಕಾರ್ಯಕ್ರಮ ಇದಾಗಿತ್ತು. ವಿಕಾಸ ಸೌಧದ ತನ್ನ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ಮಹಿಳೆಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದಲ್ಲಿ ಅವರನ್ನು ಮೊದಲಿಗೆ ಬಂಧಿಸಲಾಗಿತ್ತು. ಅದರ ನಂತರ ಮಾಜಿ ಬಿಬಿಎಂಪಿ ಕಾರ್ಪೊರೇಟರ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಬಂಧಿಸಲಾಯಿತು.
A group of miscreants threw eggs at #BJP MLA #Munirathna during a BJP programme of celebrating the birth anniversary of #Vajpayee in #Bengaluru.
Police have detained 3 persons in connection with the incident.
MLA #Muniratna alleges #Congress workers attacked him.
The… pic.twitter.com/0SliHapHr6
— Hate Detector 🔍 (@HateDetectors) December 25, 2024
ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಎಸ್‌ಐಟಿ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದೆ.
ನನ್ನನ್ನು ಕೊಲ್ಲಲು ಹೊರಟಿದ್ದಾರೆ: ಮುನಿರತ್ನ
ಘಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು (2024 ರ ಲೋಕಸಭೆ ಚುನಾವಣೆಯಲ್ಲಿ) ಸೋಲಿಸಿದ ಕಾರಣ ತನ್ನನ್ನು ಕೊಲ್ಲಲು “ಯೋಜನೆ ರೂಪಿಸಲಾಗಿದೆ” ಎಂದು ಆರೋಪಿಸಿದ್ದಾರೆ.
“ನನ್ನನ್ನು ಕೊಲ್ಲುವುದು ಖಚಿತ. ಮಹಿಳೆಯೊಬ್ಬರ ಕಾರಣದಿಂದ ನಾನು ಕೊಲ್ಲಲ್ಪಡುತ್ತೇನೆ. ಆ ಮಹಿಳೆ ಬೇರೆ ಯಾರೂ ಅಲ್ಲ, ದಿವಂಗತ ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ಪತ್ನಿ ಕುಸುಮಾ (ಹನುಮಂತರಾಯಪ್ಪ)” ಎಂದು ಮುನಿರತ್ನ ಹೇಳಿದ್ದಾರೆ. 2023 ರ ಆರ್‌ಆರ್ ನಗರ ವಿಧಾನಸಭಾ ಚುನಾವಣೆಯಲ್ಲಿ ಕುಸುಮಾ ಅವರು ತಮ್ಮ ವಿರುದ್ಧ ಸೋತಿದ್ದರಿಂದ “ರಾಜಕೀಯ ದ್ವೇಷ”ದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ತಿರುವು : ಪೊಲೀಸ್ ಇನ್‌ಸ್ಪೆಕ್ಟರ್ ಬಂಧನ
ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ತಿರುವು : ಪೊಲೀಸ್ ಇನ್‌ಸ್ಪೆಕ್ಟರ್ ಬಂಧನ


