Homeಚಳವಳಿರೈತ ಮುಖಂಡ ದಲ್ಲೆವಾಲ್ ಉಪವಾಸ ಸತ್ಯಾಗ್ರಹ 30ನೇ ದಿನಕ್ಕೆ; ಪಂಜಾಬ್ ಸರ್ಕಾರದಿಂದ ಬೆಂಬಲ

ರೈತ ಮುಖಂಡ ದಲ್ಲೆವಾಲ್ ಉಪವಾಸ ಸತ್ಯಾಗ್ರಹ 30ನೇ ದಿನಕ್ಕೆ; ಪಂಜಾಬ್ ಸರ್ಕಾರದಿಂದ ಬೆಂಬಲ

- Advertisement -
- Advertisement -

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನಡೆಸುತ್ತಿರುವ ಆಮರಣಾಂತ ಉಪವಾಸದ ಗಂಭೀರತೆಗೆ ಪಂಜಾಬ್‌ನ ಎಎಪಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಅವರ 30 ದಿನಗಳ ಉಪವಾಸವನ್ನು ಕೈಬಿಡುವಂತೆ ವಿನಂತಿಸಿದೆ. ಪಂಜಾನ್‌ ಎಎಪಿ ಅಧ್ಯಕ್ಷ ಸಚಿವ ಸಮನ್ ಅರೋರಾ ನೇತೃತ್ವದ ರಾಜ್ಯದ ಸಚಿವ ಸಂಪುಟದ ನಿಯೋಗವು, ಅವರ ಬೇಡಿಕೆಗಳು ನಿಜವಾದವು ಎಂದು ತಿಳಿಸಿದ್ದು, ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಮತ್ತು ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರವನ್ನು ದೂಷಿಸಿದೆ. ರೈತ ಮುಖಂಡ

ಬುಧವಾರ ಸಂಜೆ ಖಾನೌರಿ ಗಡಿಗೆ ಭೇಟಿ ನೀಡಿದ ಪಕ್ಷದ ನಾಯಕರು, ಸಮಸ್ಯೆಗಳನ್ನು ಪರಿಹರಿಸಲು ಸರ್ವಪಕ್ಷ ಸಭೆಯನ್ನು ಕರೆಯಲು ಎಎಪಿ ಸರ್ಕಾರ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಅದೇ ವೇಳೆ ಕೇಂದ್ರದ ಅಂಗಳಕ್ಕೆ ಚೆಂಡನ್ನು ಎಸೆದಿರುವ ಅವರು, ಪ್ರಸ್ತುತ ರೈತರ ಪ್ರತಿಭಟನಾ ವಿಷಯ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದಲ್ಲೆವಾಲ್‌ ಅವರು ನಡೆಸುತ್ತಿರುವ ಉಪವಾಸ 30 ನೇ ದಿನಕ್ಕೆ ಕಾಲಿಟ್ಟಿದ್ದು, ರೈತರ ಮುಷ್ಕರವು ಫೆಬ್ರವರಿ 13 ರಿಂದ ಹರಿಯಾಣ ಪೊಲೀಸರೊಂದಿಗೆ ನಡೆದ ಘರ್ಷಣೆಯೊಂದಿಗೆ ಪ್ರಾರಂಭವಾಗಿತ್ತು. ಈ ವೇಳೆ 500 ಕ್ಕೂ ಹೆಚ್ಚು ರೈತರಿಗೆ ಗಾಯಗಳಾಗಿದ್ದು 34 ಜನರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ದಲ್ಲೆವಾಲ್‌ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರ ಕೀಟೋನ್ ಮಟ್ಟಗಳು ಸಾಮಾನ್ಯಕ್ಕಿಂತ 25 ಪಟ್ಟು ಹೆಚ್ಚಾಗಿದೆ ಎಂದು ಎಎಪಿ ನಿಯೋಗಕ್ಕೆ ತಿಳಿಸಿದ್ದಾರೆ. ಅವರು ಸುಮಾರು 15 ಕೆಜಿ ತೂಕವನ್ನು ಕಳೆದುಕೊಂಡಿದ್ದು, ಹಠಾತ್ ಹೃದಯ ಸ್ತಂಭನ ಅಥವಾ ಬಹು ಅಂಗಾಂಗ ವೈಫಲ್ಯದ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ.

ಅವರ ಹದಗೆಟ್ಟ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಎಎಪಿ ನಾಯಕರು, “ದಲ್ಲೆವಾಲ್ ಈ ಚಳವಳಿಯ ಪ್ರೇರಕ ಶಕ್ತಿ. ಅವರ ಹೋರಾಟ ಸರಿಯಿದ್ದು, ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಆದಾಗ್ಯೂ, ಅವರು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಲು ಬಯಸಿದರೆ ಕನಿಷ್ಠ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ನಾವು ಅವರನ್ನು ಒತ್ತಾಯಿಸಿದ್ದೇವೆ” ಎಂದು ಸಚಿವ ಅರೋರಾ ಹೇಳಿದ್ದಾರೆ.

ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಟೀಕಿಸಿದ ಅವರು, “ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ನೀಡಿದ ಭರವಸೆಗಳನ್ನ ಈಡೇರಿಸದೆ ರೈತರನ್ನು ಇಂತಹ ಸ್ಥಿತಿಗೆ ತಳ್ಳುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...