ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಟಾಲಿವುಡ್ ಉದ್ಯಮದ ನಿರ್ದೇಶಕರು, ನಿರ್ಮಾಪಕರು ಮತ್ತು ನಟರ ನಡುವೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ತೆಲಂಗಾಣ ರಾಜ್ಯ ಪೊಲೀಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದಲ್ಲಿ ಸಭೆ ನಡೆಯಿತು.
ಸಂಧ್ಯಾ ಥಿಯೇಟರ್ ಕಾಲ್ತುಳಿತದ ಗದ್ದಲದ ನಡುವೆ, ಟಾಲಿವುಡ್ ನಟರಿಗೆ ಮುಖ್ಯಮಂತ್ರಿ ರೆಡ್ಡಿ ಕಠಿಣ ಸಂದೇಶವನ್ನು ಕಳುಹಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯೊಂದಿಗೆ ಯಾವುದೇ ರಾಜಿ ಇಲ್ಲ. ಬೆನಿಫಿಟ್ ಶೋಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ರೇವಂತ್ ರೆಡ್ಡಿ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಆದರೆ, ಮೊದಲ ದಿನದ ಶೋ ಮತ್ತು ಬೆನಿಫಿಟ್ ಶೋಗಳಿಂದ ಚಿತ್ರಕ್ಕೆ ಹೆಚ್ಚಿನ ಲಾಭ ಸಿಗುತ್ತದೆ ಎನ್ನುತ್ತಾರೆ ಚಿತ್ರರಂಗದ ಹಿರಿಯರು. ಚಂದ್ರಬಾಬು ನಾಯ್ಡು ಅವರ ಕಾಲದಲ್ಲಿ ಆಯೋಜಿಸಿದ್ದ ರೀತಿಯಲ್ಲಿಯೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಬೇಕು ಎಂದು ಅವರು ಒತ್ತಿ ಹೇಳಿದರು. ಬೌನ್ಸರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ರೆಡ್ಡಿ ಹೇಳಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸುವುದು ನಟರ ಜವಾಬ್ದಾರಿ. ಚಿತ್ರರಂಗವು ಡ್ರಗ್ಸ್ ವಿರುದ್ಧ ಅಭಿಯಾನ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಲಿವುಡ್‌ನ ಪ್ರಭಾವಿ ವ್ಯಕ್ತಿಗಳ ನಿಯೋಗವನ್ನು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ (ಎಫ್‌ಡಿಸಿ) ಅಧ್ಯಕ್ಷ ದಿಲ್ ರಾಜು ನೇತೃತ್ವ ವಹಿಸಿದ್ದರು. ನಾಗಾರ್ಜುನ, ವರುಣ್ ತೇಜ್, ಸಾಯಿ ಧರಮ್ ತೇಜ್, ಕಲ್ಯಾಣ್ ರಾಮ್, ಶಿವ ಬಾಲಾಜಿ, ಅಡವಿ ಶೇಷ್, ನಿತಿನ್ ಮತ್ತು ವೆಂಕಟೇಶ್ ಮುಂತಾದ ನಟರು ಭಾಗವಹಿಸಿದ್ದರು.
ಕೊರಟಾಲ ಶಿವ, ಅನಿಲ್ ರವಿಪುಡಿ, ಕೆ ರಾಘವೇಂದ್ರ ರಾವ್, ಪ್ರಶಾಂತ್ ವರ್ಮ, ಸಾಯಿ ರಾಜೇಶ್ ಸೇರಿದಂತೆ ನಿರ್ದೇಶಕರು ಮತ್ತು ನಿರ್ಮಾಪಕರಾದ ಸುರೇಶ್ ಬಾಬು, ಕೆಎಲ್ ನಾರಾಯಣ, ದಾಮೋಧರ್, ಅಲ್ಲು ಅರವಿಂದ್, ಬಿವಿಎಸ್ಎನ್ ಪ್ರಸಾದ್, ಚಿನ್ನಾಬಾಬು ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
సినీ పరిశ్రమకు చెందిన ప్రముఖులతో భేటీ కావడం జరిగింది.
సినీ పరిశ్రమ అభివృద్ధికి…
సమస్యల పరిష్కారానికి…
ప్రజా ప్రభుత్వ సహకారం ఉంటుందని
భరోసా ఇవ్వడం జరిగింది.ఈ భేటీలో…డిప్యూటీ సీఎం శ్రీ మల్లు భట్టి విక్రమార్క, సినిమాటోగ్రఫీ శాఖ మంత్రి…శ్రీ కోమటిరెడ్డి వెంకట్… pic.twitter.com/K8pmJkpykX
— Revanth Reddy (@revanth_anumula) December 26, 2024
ಏನಿದು ಪ್ರಕರಣ?
ಡಿಸೆಂಬರ್ 4 ರಂದು, ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2: ದಿ ರೂಲ್‌ನ ಪ್ರಥಮ ಪ್ರದರ್ಶನಕ್ಕೆ ಹಾಜರಾಗಿದ್ದಾಗ, ನಟನನ್ನು ನೋಡಲು ಭಾರಿ ಜನಸಮೂಹ ನೆರೆದಿತ್ತು. ಅವರು ತಮ್ಮ ಕಾರಿನ ಸನ್‌ರೂಫ್‌ನಿಂದ ಅಭಿಮಾನಿಗಳಿಗೆ ಕೈ ಬೀಸಿದಾಗ ಗೊಂದಲವುಂಟಾಯಿತು. ಇದರಿಂದ ರೇವತಿ ಎಂಬ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದು, ಆಕೆಯ ಮಗ ಗಂಭಿರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನೆಯ ನಂತರ, ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಯಿತು. ₹50,000 ಬಾಂಡ್ ಅನ್ನು ಒದಗಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಮಂಗಳವಾರ, ನಟ ಅಲ್ಲು ಅರ್ಜುನ್ ಅವರ ಚಿತ್ರ ಪುಷ್ಪ 2 ನ ಪ್ರಥಮ ಪ್ರದರ್ಶನದ ಸಂದರ್ಭದಲ್ಲಿ ನಡೆದ ದುರಂತ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದರು.
ಈ ಘಟನೆ ರಾಜಕೀಯ ವಿವಾದಕ್ಕೂ ಕಾರಣವಾಗಿತ್ತು. ದುರಂತಕ್ಕೆ ಅಲ್ಲು ಅರ್ಜುನ್ ಕಾರಣ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಸೆಂಬ್ಲಿಯಲ್ಲಿ ಹೇಳಿಕೆ ನೀಡಿದ್ದು, ಸುರಕ್ಷತೆಯ ದೃಷ್ಟಿಯಿಂದ ಸಂಧ್ಯಾ ಥಿಯೇಟರ್‌ನಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ; ಕೇರಳ ರಾಜ್ಯಪಾಲರ ವರ್ಗಾವಣೆ; ಆರಿಫ್ ಮೊಹಮ್ಮದ್ ಖಾನ್ ನಡೆಯನ್ನು ಅಸಂವಿಧಾನಿಕ ಎಂದು ಟೀಕಿಸಿದ ಸಿಪಿಐ(ಎಂ)


