Homeಮುಖಪುಟಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ದೇಶ ವಿರೋಧಿ” ಎಂದು ಕರೆದ ಕಾಂಗ್ರೆಸ್‌ನ ದೆಹಲಿ ನಾಯಕ ಅಜಯ್ ಮಾಕನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಅನ್ನು ವಿಪಕ್ಷಗಳ ಮೈತ್ರಿಯಾದ ಇಂಡಿಯಾ ಒಕ್ಕೂಟದಿಂದ ತೆಗೆದುಹಾಕಲು ಪ್ರಯತ್ನಿಸುವುದಾಗಿ ಆಮ್ ಆದ್ಮಿ ಪಕ್ಷ ಗುರುವಾರ ಹೇಳಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಕಾಂಗ್ರೆಸ್ ನಾಯಕತ್ವವು ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಫೆಬ್ರವರಿಯಲ್ಲಿ ಅಥವಾ ಅದಕ್ಕೂ ಮೊದಲು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಅತಿಶಿ ಆರೋಪಿಸಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಅವರು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿನ್ನೆ, ಕಾಂಗ್ರೆಸ್‌ನ ಹಿರಿಯ ನಾಯಕ ಅಜಯ್ ಮಾಕನ್ ಅವರು [ಎಎಪಿ ಅಧ್ಯಕ್ಷ] ಅರವಿಂದ್ ಕೇಜ್ರಿವಾಲ್ ದೇಶ ವಿರೋಧಿ ಎಂದು ಹೇಳಿದ್ದಾರೆ. ಅವರು ಯಾವುದಾದರೂ ಬಿಜೆಪಿ ನಾಯಕರ ವಿರುದ್ಧ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆಯೇ ಎಂದು ನಾನು ಕಾಂಗ್ರೆಸ್ ಪಕ್ಷವನ್ನು ಕೇಳಲು ಬಯಸುತ್ತೇನೆ. ಇಲ್ಲ ಅಲ್ಲವೆ? ಅಂತಹ ಕಾಂಗ್ರೆಸ್ ಅರವಿಂದ್ ಕೇಜ್ರಿವಾಲ್ ಅವರನ್ನು ದೇಶ ವಿರೋಧಿ ಎಂದು ಆರೋಪಿಸುತ್ತಿದೆ” ಎಂದು ಮುಖ್ಯಮಂತ್ರಿ ಆತಿಶಿ ಆರೋಪಿಸಿದ್ದಾರೆ.

ಎಎಪಿ ಪಕ್ಷವು ಕಲ್ಯಾಣ ಯೋಜನೆಗಳ ಭರವಸೆಯೊಂದಿಗೆ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಆಡಳಿತರೂಢ ಎಎಪಿ ಮತ್ತು ಕೇಜ್ರಿವಾಲ್ ವಿರುದ್ಧ ಬುಧವಾರ ಎಫ್‌ಐಆರ್‌ ದಾಖಲಿಸಿತ್ತು. ಇದನ್ನು ಕಾಂಗ್ರೆಸ್ ಯಾಕೆ ಮಾಡಿದೆ ಎಂದು ಅತಿಶಿ ಕೇಳಿದ್ದಾರೆ. “ಕಾಂಗ್ರೆಸ್ ಇದುವರೆಗೆ ಯಾವುದೇ ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಿದೆಯೇ? ಬಿಜೆಪಿಯೊಂದಿಗೆ ಯಾವುದೇ ಒಪ್ಪಂದ ಮಾಡಿಲ್ಲ ಎಂದಾದರೆ ಕಾಂಗ್ರೆಸ್ ಮಾಕೆನ್ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಆಮ್ ಆದ್ಮಿ ಪಕ್ಷವು “ದೇಶವಿರೋಧಿ” ಎಂದಾದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಏಕೆ ಸ್ಪರ್ಧಿಸಿದ್ದೀರಿ ಎಂದು ಅತಿಶಿ ಕಾಂಗ್ರೆಸ್‌ಗೆ ಪ್ರಶ್ನಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ, ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯಂತಹ ವಿಷಯಗಳ ಬಗ್ಗೆ ಆಮ್ ಆದ್ಮಿ ಪಕ್ಷದ ಸಾರ್ವಜನಿಕ ನಿಲುವಿನ ಹಿನ್ನೆಲೆಯಲ್ಲಿ ಮಾಕೆನ್ ಅವರು ಕೇಜ್ರಿವಾಲ್ ಅವರನ್ನು “ದೇಶವಿರೋಧಿ” ಎಂದು ಬುಧವಾರ ಕರೆದಿದ್ದಾರೆ ಎಂದು ವರದಿಯಾಗಿತ್ತು. ಸಾರ್ವತ್ರಿಕ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ “ತಪ್ಪು” ಮಾಡಿದೆ ಎಂದು ಮಾಕನ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

2013ರಲ್ಲಿ ಎಎಪಿಗೆ ನಾವು ನೀಡಿದ ಬೆಂಬಲವೆ ಇಂದಿನ ದೆಹಲಿ ಮತ್ತು ಕಾಂಗ್ರೆಸ್‌ನ ದುಸ್ಥಿತಿಗೆ ಕಾರಣ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದರು. “ಬಹುಶಃ ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅದೇ ತಪ್ಪು ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಾಗಿ ಸ್ಪರ್ಧಿಸಿದ್ದರೂ, ಎಲ್ಲಾ ಏಳು ಸ್ಥಾನಗಳಲ್ಲಿ ಸೋತಿದ್ದವು. ಅಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿತ್ತು.

ಇದನ್ನೂ ಓದಿ: ‘ಸ್ಥಳೀಯ ನಾಯಕತ್ವ ಬೆಳೆಸುವುದರ ಜೊತೆಗೆ ಯುವ ಜನರಿಗೆ ಅವಕಾಶ..’; ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಖರ್ಗೆ ಹೇಳಿಕೆ

‘ಸ್ಥಳೀಯ ನಾಯಕತ್ವ ಬೆಳೆಸುವುದರ ಜೊತೆಗೆ ಯುವ ಜನರಿಗೆ ಅವಕಾಶ..’; ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಖರ್ಗೆ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....