Homeಮುಖಪುಟಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ನಿಧನ

ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ನಿಧನ

- Advertisement -
- Advertisement -

ಭಾರತದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ (92) ಅವರು ಇಂದು (ಡಿ.26) ನಿಧನರಾದರು.

ವಯೋಸಹಜ ಕಾಯಿಲೆಯಿಂದ ಮನಮೋಹನ್ ಸಿಂಗ್ ಮರಣ ಹೊಂದಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ಅನಾರೋಗ್ಯಗಳಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರು, ಇಂದು ತಮ್ಮ ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದು, ತಕ್ಷಣ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಉಳಿಸಿಕೊಳ್ಳುವ ಪ್ರಯತ್ನ ವಿಫಲವಾಯಿತು ಎಂದು ವರದಿಗಳು ಹೇಳಿವೆ.

ಹೆಸರಾಂತ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿ ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ದೇಶದ ಮಹತ್ವದ ಆರ್ಥಿಕ ಸುಧಾರಣೆಗಳ ರುವಾರಿಯಾಗಿದ್ದರು.

ಯಪಿಎ-1 ಮತ್ತು ಯುಪಿಎ-2 ಸರ್ಕಾರಗಳ ಮೂಲಕ ಒಂದು ದಶಕ ದೇಶದ ಚುಕ್ಕಾಣಿ ಹಿಡಿದಿದ್ದ ಮನಮೋಹನ್ ಸಿಂಗ್, ತಮ್ಮ ಅಧಿಕಾರವದಿಯಲ್ಲಿ ನರೇಗಾ, ಆರ್‌ಟಿಇ, ಆರ್‌ಟಿಐ, ಆಹಾರ ಭದ್ರತೆ ಕಾನೂನು ಸೇರಿದಂತೆ ಮಹತ್ವದ ಜನಪರ ಯೋಜನೆ ಮತ್ತು ಕಾನೂನುಗಳನ್ನು ದೇಶದ ಜನತೆಗೆ ನೀಡಿದ್ದರು.

ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದ ಮನಮೋಹನ್ ಸಿಂಗ್ ಅವರು, 1998ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಾಗಿ ನಿಭಾಯಿಸಿದ್ದರು.

ಡಾ. ಸಿಂಗ್ ಅವರು ಮೇ 22, 2004 ರಂದು ಮೊದಲ ಬಾರಿಗೆ ಭಾರತ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿದ್ದರು.

ಸಿಂಗ್ ಅವರ ರಾಜಕೀಯ ಜೀವನವು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅವರು ಜೂನ್‌ನಲ್ಲಿ ಪಿವಿ ನರಸಿಂಹ ರಾವ್ ಸರ್ಕಾರದ ಅಡಿಯಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡಿದ್ದರು. ಆ ಬಳಿಕ ಭಾರತದ ಆರ್ಥಿಕತೆಯಲ್ಲಿ ಬಹಳಷ್ಟು ಪರಿವರ್ತನೆಗಳನ್ನು ತಂದಿದ್ದರು. ಭಾರತವನ್ನು ಖಾಸಗೀಕರಣ, ಉದಾರೀಕರಣ ಮತ್ತು ಜಾಗತೀಕರಣದತ್ತ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅಸಾಧಾರಣ ಶೈಕ್ಷಣಿಕ ಹಿನ್ನೆಲೆಯೊಂದಿಗೆ, ಸಿಂಗ್ ಬಿಎ ಮತ್ತು ಎಂಎ ಎರಡರಲ್ಲೂ ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಅಗ್ರಸ್ಥಾನ ಪಡೆದವರು. ಪ್ರತಿಷ್ಠಿತ ಕೇಂಬ್ರಿಡ್ಜ್‌ ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಅಧ್ಯಯನ ನಡೆಸಿದ ಸಿಂಗ್, ಮತ್ತೊಂದು ಹೆಸರಾಂತ ಜಾಗತಿಕ ಶಿಕ್ಷಣ ಕೇಂದ್ರ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ ಪಡೆದಿದ್ದರು.

ಇದನ್ನೂ ಓದಿ : ‘ಸ್ಥಳೀಯ ನಾಯಕತ್ವ ಬೆಳೆಸುವುದರ ಜೊತೆಗೆ ಯುವ ಜನರಿಗೆ ಅವಕಾಶ..’; ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಖರ್ಗೆ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...