Homeಮುಖಪುಟಪುಣೆ : ಅತ್ಯಾಚಾರಕ್ಕೆ ವಿಫಲಯತ್ನ, ಅಪ್ರಾಪ್ತ ಸಹೋದರಿಯರ ಹತ್ಯೆ

ಪುಣೆ : ಅತ್ಯಾಚಾರಕ್ಕೆ ವಿಫಲಯತ್ನ, ಅಪ್ರಾಪ್ತ ಸಹೋದರಿಯರ ಹತ್ಯೆ

- Advertisement -
- Advertisement -

ಅತ್ಯಾಚಾರಕ್ಕೆ ವಿಫಲಯತ್ನ ನಡೆಸಿ, ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯ ರಾಜ್‌ಗುರು ನಗರದಲ್ಲಿ ನಡೆದಿದೆ.

8 ಮತ್ತು 9 ವರ್ಷದ ಇಬ್ಬರು ಸಹೋದರಿಯರು ಬುಧವಾರ (ಡಿ.25) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಪೋಷಕರು ಹುಡುಕಾಡಿದಾಗ, ಅವರು ವಾಸವಿದ್ದ ಕಟ್ಟಡದ ಮೊದಲನೇ ಮಹಡಿಯಲ್ಲಿ ತಂಗಿದ್ದ ಅಡುಗೆಯವನ ಮನೆಯ ಡ್ರಮ್‌ನಲ್ಲಿ ಶವಗಳು ಪತ್ತೆಯಾಗಿವೆ.

ಘಟನೆ ನಡೆದ ರಾಜ್‌ಗುರು ನಗರದಿಂದ ಸುಮಾರು 45 ಕಿ.ಮೀ ದೂರದ ಲಾಡ್ಜ್‌ವೊಂದರಲ್ಲಿ ಗುರುವಾರ (ಡಿ.26) ಬೆಳಿಗ್ಗೆ 54 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಹತ್ಯೆ ಬಳಿಕ ಆರೋಪಿ ತನ್ನ ಊರು ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಲು ಮುಂದಾಗಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ (ಪುಣೆ ಗ್ರಾಮಾಂತರ) ರಮೇಶ್ ಚೋಪಾಡೆ ತಿಳಿಸಿದ್ದಾರೆ.

ಬಾಲಕಿಯರನ್ನು ಡ್ರಮ್‌ ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವುದನ್ನು ಮತ್ತು ಅದಕ್ಕೂ ಮುನ್ನ ಒಬ್ಬಳು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ವಿಫಲ ಯತ್ನ ನಡೆಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ರಮೇಶ್ ಚೋಪಾಡೆ ಹೇಳಿದ್ದಾರೆ.

ಬಂಧಿತನ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 103 (ಕೊಲೆ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಮತ್ತು ಸೆಕ್ಷನ್ 4, 6, 8, 10 ಮತ್ತು 12 (ಲೈಂಗಿಕ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳ ಪ್ರಕರಣದ ಸೆಕ್ಷನ್‌ಗಳು) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊಲೆಯಾದ ಬಾಲಕಿಯರ ತಂದೆ ಕನ್ಸರ್ವೆನ್ಸಿ ಸಿಬ್ಬಂದಿ ಮತ್ತು ತಾಯಿ ದಿನಗೂಲಿ ನೌಕರರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅವರ ಮನೆಯಿದ್ದ ಕಟ್ಟಡದ ಮೊದಲ ಮಹಡಿಯಲ್ಲಿ ಆರೋಪಿ ಮತ್ತು ಆತನ ಸಹೋದ್ಯೋಗಿಗಳು ಇದ್ದರು. ರಜೆ ಪಡೆದು ಎಲ್ಲರೂ ಊರು ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ಕಾರಣ, ಕೃತ್ಯ ನಡೆಯುವಾಗ ಆರೋಪಿ ಮನೆಯಲ್ಲಿ ಒಬ್ಬನೇ ಇದ್ದ. ಬಾಲಕಿಯರ ತಂದೆ-ತಾಯಿ ಕೂಡ ಕೆಲಸಕ್ಕೆ ಹೋಗಿದ್ದರು ಎಂದು ವರದಿಗಳು ಹೇಳಿವೆ.

ಆರೋಪಿ ಹಲವು ವರ್ಷಗಳಿಂದ ಕಟ್ಟಡದಲ್ಲಿ ವಾಸವಿದ್ದ ಕಾರಣ ಬಾಲಕಿಯರ ಕುಟುಂಬಕ್ಕೆ ಚೆನ್ನಾಗಿ ಪರಿಚಯವಿದ್ದ. ಬಾಲಕಿಯರಿಗೂ ಕೂಡ ಪರಿಚಿತನಾಗಿದ್ದ. ಪೋಷಕರು ಇಲ್ಲದ ಸಮಯದಲ್ಲಿ ಬಾಲಕಿಯರು ಮೊದಲನೆಯ ಮಹಡಿಯ ಆರೋಪಿಯ ಮನೆ ಬಳಿ ಆಟವಾಡುತ್ತಿದ್ದರು.

ಬುಧವಾರ ಯಾರೂ ಇಲ್ಲದಾಗ ಲಡ್ಡು ಕೊಡುವುದಾಗಿ ಹೇಳಿ ಬಾಲಕಿಯರನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಇಬ್ಬರು ಒಳ ಹೋದಾಗ, ಒಬ್ಬಾಕೆಯನ್ನು ಕರೆದುಕೊಂಡು ಸ್ನಾನ ಗೃಹದೊಳಗೆ ಹೋಗಿ ಬಾಗಿಲು ಹಾಕಿದ್ದಾನೆ. ಅದನ್ನು ನೋಡಿದ ಆಕೆಯ ಸಹೋದರಿ ಕಿರುಚಾಡಿದ್ದಾಳೆ. ಆಗ ಹೊರಗಡೆ ಬಂದ ಆರೋಪಿ ಪಕ್ಕದಲ್ಲೇ ಇದ್ದ ಪೈಪ್‌ನಿಂದ ಆಕೆಯ ತಲೆಗೆ ಹೊಡೆದಿದ್ದಾನೆ. ಬಳಿಕ ನೀರಿನ ಡ್ರಮ್‌ಗೆ ಮುಳುಗಿಸಿದ್ದಾನೆ. ಆಕೆಯ ಜೀವ ಹೋದ ಬಳಿಕ, ಮತ್ತೊಬ್ಬಳನ್ನು ಸ್ನಾನಗೃಹದಿಂದ ಹೊರಗಡೆ ಕರೆ ತಂದಿದ್ದಾನೆ. ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಆಕೆಯೂ ಕೂಗಿಕೊಂಡಿದ್ದಾಳೆ. ಇದರಿಂದ ಹೆದರಿದ ಆರೋಪಿ ಸಹೋದರಿಯನ್ನು ಮುಳುಗಿಸಿದ್ದ ಅದೇ ಡ್ರಮ್‌ಗೆ ಈಕೆಯನ್ನೂ ಮುಳಗಿಸಿ ಕೊಲೆ ಮಾಡಿದ್ದಾನೆ. ಬಳಿಕ ಮನೆಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಚೋಪಾಡೆ ವಿವರಿಸಿದ್ದಾರೆ.

ಬಾಲಕಿಯರ ಪೋಷಕರು ಮನೆಗೆ ಬಂದಾಗ, ಇಬ್ಬರೂ ನಾಪತ್ತೆಯಾಗಿದ್ದರು. ಸುತ್ತಮುತ್ತ ಹುಡುಕಿದರೂ ಕಾಣದಿದ್ದಾಗ, ಪೋಷಕರು ಸ್ಥಳೀಯ ಖೇಡ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರಂಭದಲ್ಲಿ ಅಪಹರಣ ಪ್ರಕರಣ ದಾಖಲಿಸಿಕೊಂಡು ಬಾಲಕಿಯರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಶೋಧ ಕಾರ್ಯಾಚರಣೆಯ ಭಾಗವಾಗಿ ಪೊಲೀಸ್ ತಂಡವು ಮೊದಲ ಮಹಡಿಯಲ್ಲಿರುವ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿದೆ. ಈ ವೇಳೆ ಆರೋಪಿಯ ಮನೆಯಲ್ಲಿ ಬಾಲಕಿಯರ ಶವಗಳು ಪತ್ತೆಯಾಗಿವೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ರಮೇಶ್ ಚೋಪಾಡೆ ತಿಳಿಸಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕವಾಗಿ ಚಾಟಿಯಿಂದ ದಂಡಿಸಿಕೊಂಡ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ: ಕಾರಣ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...