Homeಮುಖಪುಟಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ; ನಾಗರಿಕರು, ಭದ್ರತಾ ಸಿಬ್ಬಂದಿಗೆ ಗಾಯ

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ; ನಾಗರಿಕರು, ಭದ್ರತಾ ಸಿಬ್ಬಂದಿಗೆ ಗಾಯ

- Advertisement -
- Advertisement -

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ಮತ್ತೆ ಹೊಸದಾಗಿ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯ ಸನಾಸಾಬಿ ಮತ್ತು ಥಮ್ನಾಪೋಕ್ಪಿ ಗ್ರಾಮಗಳಲ್ಲಿ ಶಸ್ತ್ರಸಜ್ಜಿತ ದಾಳಿಕೋರರೊಂದಿಗಿನ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಹಲವಾರು ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯನ್ನು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಖಂಡಿಸಿದ್ದಾರೆ.

ಬಿಕ್ಕಟ್ಟನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಒತ್ತಿ ಹೇಳಿರುವ ಮುಖ್ಯಮಂತ್ರಿ, ಶಾಂತಿ ಕಾಪಾಡಲು ಮತ್ತು ಏಕತೆಗಾಗಿ ಕರೆ ನೀಡಿದ್ದಾರೆ. ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಗಾಯಾಳುಗಳಿಗೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಕ್ಸ್‌ನಲ್ಲಿ ಬರೆದಿರುವ ಎನ್.ಬಿರೇನ್ ಸಿಂಗ್, “ಇಂಫಾಲ್ ಪೂರ್ವದ ಸನಾಸಾಬಿ ಮತ್ತು ಥಮ್ನಾಪೊಕ್ಪಿಯಲ್ಲಿ ಕುಕಿ ಉಗ್ರಗಾಮಿಗಳು ನಡೆಸಿದ ವಿವೇಚನಾರಹಿತ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ದಾಳಿಯಿಂದಾಗಿ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅಮಾಯಕರ ಜೀವಗಳ ಮೇಲಿನ ಈ ಹೇಡಿತನ ಮತ್ತು ಅಪ್ರಚೋದಿತ ದಾಳಿಯು ಶಾಂತಿ ಮತ್ತು ಸಾಮರಸ್ಯದ ಮೇಲಿನ ದಾಳಿಯಾಗಿದೆ” ಎಂದು ಅವರು ಹೇಳಿದ್ದಾರೆ. ಮಣಿಪುರ

“ಪೀಡಿತ ಪ್ರದೇಶಗಳಿಗೆ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ನೀಡಲಾಗುತ್ತಿದೆ. ಇಂತಹ ಸವಾಲುಗಳನ್ನು ಎದುರಿಸಲು ಸರ್ಕಾರವು ಶಾಂತಿ ಮತ್ತು ಏಕತೆಗಾಗಿ ಕರೆ ನೀಡುತ್ತದೆ. ಕೇಂದ್ರ ಪಡೆಗಳು ಮತ್ತು ರಾಜ್ಯ ಪೊಲೀಸರು ಅಂತಹ ಸನ್ನಿವೇಶಗಳೊಂದಿಗೆ ವ್ಯವಹರಿಸುವಾಗ ಸರಿಯಾದ ಸಮನ್ವಯ ಮತ್ತು ತಿಳುವಳಿಕೆಯನ್ನು ಹೊಂದಿರಬೇಕು.” ಎಂದು ಅವರು ಹೇಳಿದ್ದಾರೆ.

ಶುಕ್ರವಾರದಂದು ಮಣಿಪುರ ಪೊಲೀಸರು, ಅಸ್ಸಾಂ ರೈಫಲ್ಸ್, ಅರಣ್ಯ ಇಲಾಖೆ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಒಳಗೊಂಡ ಜಂಟಿ ತಂಡವು ಚುರಾಚಂದ್‌ಪುರ ಜಿಲ್ಲೆಯ ಟಿ.ಲಂಘೋಯಿಮೋಲ್ ಪ್ರದೇಶದಲ್ಲಿ ಅಫೀಮ್ ಬೆಳೆಯನ್ನು ನಾಶ ಕಾರ್ಯಾಚರಣೆ ನಡೆಸಿದೆ. ಅಲ್ಲಿ ಅವರು ಏಳು ಎಕರೆ ಅಫೀಮ್ ತೋಟಗಳನ್ನು ನಾಶಪಡಿಸಿದ್ದಾರೆ ಎಂದು ವರದಿಯಾಗಿದೆ. ಅಫೀಮ್ ಬೆಳೆದವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಧಿಕಾರಿಗಳು ಅವರನ್ನು ಗುರುತಿಸಿ ಬಂಧಿಸುವ ಕೆಲಸ ಮಾಡುತ್ತಿದ್ದಾರೆ.

ಹೆಚ್ಚುವರಿಯಾಗಿ, ಭದ್ರತಾ ಪಡೆಗಳು ಬೆಟ್ಟ ಮತ್ತು ಕಣಿವೆ ಜಿಲ್ಲೆಗಳ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಸಿದೆ. NH-37 ಮತ್ತು NH-2 ರ ಉದ್ದಕ್ಕೂ ಅಗತ್ಯ ಸಾಮಗ್ರಿಗಳನ್ನು ಸಾಗಿಸುವ 115 ಮತ್ತು 326 ವಾಹನಗಳ ಸಂಚಾರವನ್ನು ಸಹ ಖಾತ್ರಿಪಡಿಸಲಾಗಿದೆ. “ಎಲ್ಲಾ ಹಿಂಸಾಚಾರ ಪೀಡಿತ ಸ್ಥಳಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಾಹನಗಳ ಮುಕ್ತ ಮತ್ತು ಸುರಕ್ಷಿತ ಚಲನೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಬೆಂಗಾವಲು ಒದಗಿಸಲಾಗಿದೆ” ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ. ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಬೆಟ್ಟ ಮತ್ತು ಕಣಿವೆಯಲ್ಲಿ ಒಟ್ಟು 108 ನಾಕಾ/ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...