Homeಮುಖಪುಟಮನಮೋಹನ್ ಸಿಂಗ್ ಅಂತ್ಯಕ್ರಿಯೆ, ಸ್ಮಾರಕದ ಬಗ್ಗೆ ಕೇಂದ್ರ ಸರ್ಕಾರದಿಂದ ಅನಗತ್ಯ ವಿವಾದ: ಅಶೋಕ್ ಗೆಹ್ಲೋಟ್ ಆಕ್ರೋಶ

ಮನಮೋಹನ್ ಸಿಂಗ್ ಅಂತ್ಯಕ್ರಿಯೆ, ಸ್ಮಾರಕದ ಬಗ್ಗೆ ಕೇಂದ್ರ ಸರ್ಕಾರದಿಂದ ಅನಗತ್ಯ ವಿವಾದ: ಅಶೋಕ್ ಗೆಹ್ಲೋಟ್ ಆಕ್ರೋಶ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕದ ಕುರಿತು ಎನ್‌ಡಿಎ ಸರ್ಕಾರ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಆರೋಪಿಸಿದ್ದಾರೆ. ಸಾರ್ವಜನಿಕ ಒತ್ತಡದ ಮೇರೆಗೆ ಬಿಜೆಪಿ ಸರ್ಕಾರವು ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ಭವಿಷ್ಯದ ದಿನಗಳಲ್ಲಿ ನಿರ್ಮಿಸುವ ಯೋಜನೆಯನ್ನು ಘೋಷಿಸಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಅಂತ್ಯಕ್ರಿಯೆಗೆ

ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದು ಪರಿಗಣಿಸಲ್ಪಟ್ಟಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್‌)ಯಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಡಾ. ಮನಮೋಹನ್ ಸಿಂಗ್ ಅವರಂತಹ ಮಹಾನ್ ವ್ಯಕ್ತಿಯ ಅಂತ್ಯಕ್ರಿಯೆ ಮತ್ತು ಸ್ಮಾರಕದ ಬಗ್ಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಅನಗತ್ಯ ವಿವಾದವನ್ನು ಸೃಷ್ಟಿಸಿದೆ” ಎಂದು ಗೆಹ್ಲೋಟ್ ಎಕ್ಸ್‌ನಲ್ಲಿ ಹೇಳಿದ್ದಾರೆ. ಸರ್ಕಾರದ ಈ ಕ್ರಮದ ಬಗ್ಗೆ ದೇಶದ ಜನರು ಅಸಮಾಧಾನ ವ್ಯಕ್ತಪಡಿಸಿದ ನಂತರ, ಜನರ ಒತ್ತಡದ ಹಿನ್ನಲೆ ಬಿಜೆಪಿ ಸರ್ಕಾರವು ಭವಿಷ್ಯದ ದಿನಗಳಲ್ಲಿ ಸ್ಮಾರಕವನ್ನು ನಿರ್ಮಿಸಲು ಘೋಷಿಸಿತು ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅವರು ಹೇಳಿದ್ದಾರೆ.

“ಭಾರತ ಸರ್ಕಾರವು ಯಾವುದೇ ವಿಶೇಷ ಸ್ಥಳದ ಬದಲು ನಿಗಮ ಬೋಧ ಘಾಟ್‌ನಲ್ಲಿ ಗೌರವಾನ್ವಿತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸುತ್ತಿದೆ. 2010 ರಲ್ಲಿ ಮಾಜಿ ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ಅವರ ನಿಧನದ ನಂತರ ಬಿಜೆಪಿಯಿಂದ ಯಾವುದೇ ಬೇಡಿಕೆಯಿಲ್ಲದೆ, ಕಾಂಗ್ರೆಸ್ ಸರ್ಕಾರವು ಅವರ ಕುಟುಂಬದ ಜೊತೆ ಮಾತನಾಡಿತ್ತು. ಮತ್ತು ತಕ್ಷಣವೇ ಜೈಪುರದಲ್ಲಿ ಅವರ ಅಂತಿಮ ವಿಧಿಗಳಿಗೆ ವಿಶೇಷ ಸ್ಥಳವನ್ನು ಮಂಜೂರು ಮಾಡಿದರು ಮತ್ತು ಅಲ್ಲಿ ಸ್ಮಾರಕವನ್ನು ನಿರ್ಮಿಸಲಾಯಿತು,” ಗೆಹ್ಲೋಟ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಅಂತ್ಯಕ್ರಿಯೆಗೆ

2012 ರಲ್ಲಿ ಮಹಾರಾಷ್ಟ್ರದಲ್ಲಿ ಬಾಳ್ ಠಾಕ್ರೆ ನಿಧನದ ನಂತರ, ಕಾಂಗ್ರೆಸ್ ಸರ್ಕಾರವು ಅವರ ಅಂತ್ಯಕ್ರಿಯೆಗಾಗಿ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ವಿಶೇಷ ಸ್ಥಳವನ್ನು ನೀಡಿತು ಎಂದು ಅವರು ನೆನಪಿಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ಎಲ್ಲಾ ಪಕ್ಷಗಳ ನಾಯಕರಿಗೆ ಗೌರವಯುತ ವಿದಾಯವನ್ನು ನೀಡುತ್ತಿದೆ, ಆದರೆ ಮನಮೋಹನ್ ಸಿಂಗ್ ಅವರ ಬಗ್ಗೆ ಬಿಜೆಪಿಯ ಇಂತಹ ವರ್ತನೆ “ದುರದೃಷ್ಟಕರ” ಎಂದು ಮಾಜಿ ಸಿಎಂ ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು

‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...