Homeಚಳವಳಿಉಪವಾಸ ನಿರತ ರೈತ ನಾಯಕ ದಲ್ಲೆವಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ - ಪಂಜಾಬ್ ಸರ್ಕಾರಕ್ಕೆ ಸುಪ್ರೀಂಕೋರ್ಟ್...

ಉಪವಾಸ ನಿರತ ರೈತ ನಾಯಕ ದಲ್ಲೆವಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ – ಪಂಜಾಬ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗಡುವು

- Advertisement -
- Advertisement -

ಒಂದು ತಿಂಗಳಿನಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮನವೊಲಿಸಲು ಸುಪ್ರೀಂ ಕೋರ್ಟ್ ಶನಿವಾರ ಪಂಜಾಬ್ ಸರ್ಕಾರಕ್ಕೆ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ರಜಾಕಾಲದ ಪೀಠವು ಪರಿಸ್ಥಿತಿ ಉಲ್ಬಣಗೊಳ್ಳಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮತ್ತು ದಲ್ಲೆವಾಲ್‌ಗೆ ವೈದ್ಯಕೀಯ ನೆರವು ನೀಡಲು ಕೋರ್ಟ್‌ ನೀಡಿದ್ದ ಈ ಹಿಂದಿನ ನಿರ್ದೇಶನಗಳನ್ನು ಅನುಸರಿಸದಿದ್ದಕ್ಕಾಗಿ ಪಂಜಾಬ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಉಪವಾಸ ನಿರತ ರೈತ ನಾಯಕ

ಈ ವೇಳೆ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದ ಪಂಜಾಬ್ ಸರ್ಕಾರ, ದಲ್ಲೆವಾಲ್ ಅವರನ್ನು ಸುತ್ತುವರಿದು ಅವರನ್ನು ಆಸ್ಪತ್ರೆಗೆ ಕರೆದೊಯ್ಯದಂತೆ ತಡೆದು ಪ್ರತಿಭಟನಾಕಾರು ಭಾರಿ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದೆ. ಅಷ್ಟೆ ಅಲ್ಲದೆ, ತಜ್ಞರ ತಂಡವು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮನವೊಲಿಸಲು ಪ್ರಯತ್ನಿಸಿದೆ ಎಂದು ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸುವ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಸುಪ್ರೀಂಕೋರ್ಟ್‌ನ ಪೀಠಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅವರು (ದಲ್ಲೆವಾಲ್) ಡ್ರಿಪ್ಸ್ ಸೇರಿದಂತೆ ಯಾವುದೇ ರೀತಿಯ ವೈದ್ಯಕೀಯ ಸಹಾಯವನ್ನು ನಿರಾಕರಿಸಿದ್ದಾರೆ. ಇದು ಚಳುವಳಿಯ ಕಾರಣವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ” ಎಂದು ಅವರು ತಿಳಿಸಿದರು. ಅಡ್ವೊಕೇಟ್ ಜನರಲ್ ಅವರ ಈ ಉತ್ತರಕ್ಕೆ ಕೆರಳಿದ ಕೋರ್ಟ್, ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪಂಜಾಬ್ ಸರ್ಕಾರವು ಸಾಕಷ್ಟು ಪ್ರಯತ್ನ ಮಾಡಿಲ್ಲ ಎಂದು ದೂಷಿಸಿತು. ಉಪವಾಸ ನಿರತ ರೈತ ನಾಯಕ

ಅಷ್ಟೆ ಅಲ್ಲದೆ, ಮತ್ತು ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಬಿಡದ ರೈತ ಮುಖಂಡರು ಆತ್ಮಹತ್ಯೆಗೆ ಪ್ರಚೋದನೆಯ ಕ್ರಿಮಿನಲ್ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಕೋರ್ಟ್ ಹೇಳಿದೆ.

ಪರಿಸ್ಥಿತಿಯನ್ನು ಖಾತರಿಪಡಿಸಿದರೆ ಕೇಂದ್ರದಿಂದ ಯಾವುದೇ ರೀತಿಯ ಲಾಜಿಸ್ಟಿಕ್ಸ್ ಬೆಂಬಲವನ್ನು ಪಡೆಯಲು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಜೊತೆಗೆ, ದಲ್ಲೆವಾಲ್ ಅನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ನಿರ್ದೇಶನವನ್ನು ರಾಜ್ಯ ಸರ್ಕಾರವು ಅನುಸರಿಸಲಿದೆ ಎಂದು ಆಶಿಸುವುದಾಗಿ ಹೇಳಿದೆ.

ದಲ್ಲೆವಾಲ್ ಅವರು ಕೆಲವು ರೀತಿಯ “ಗುಂಪು ಒತ್ತಡ”ದಲ್ಲಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿಸದ ರೈತ ಮುಖಂಡರು ಅವರ ಹಿತೈಷಿಗಳಾಗಿ ಕಾಣುತ್ತಿಲ್ಲ ಎಂದು ಪೀಠ ಹೇಳಿದೆ. ಈ ರೈತರು ಅವರ ಜೀವದ ಬಗ್ಗೆ ಕಾಳಜಿ ಹೊಂದಿದ್ದಾರೆಯೇ ಅಥವಾ ಬೇರೆ ಏನನ್ನಾದರೂ ಬಯಸುತ್ತಿದ್ದಾರೆಯೆ? ಎಂದು ಕೇಳಿರುವ ಕೋರ್ಟ್, ಈ ಬಗ್ಗೆ ನಾವು ಹೆಚ್ಚು ಹೇಳಲು ಬಯಸುವುದಿಲ್ಲ, ಆದರೆ ಪಂಜಾಬ್ ಸರ್ಕಾರವು ನಮ್ಮ ನಿರ್ದೇಶನಗಳನ್ನು ಅನುಸರಿಸುತ್ತದೆ ಎಂದು ಭಾವಿಸುತ್ತೇವೆ ಎಂದು ಹೇಳಿದೆ.

ಶುಕ್ರವಾರ, ದಲ್ಲೆವಾಲ್ ಅವರ ಸ್ಥಿತಿಯ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತು ಮತ್ತು ಅವರಿಗೆ ವೈದ್ಯಕೀಯ ನೆರವು ನೀಡುವುದನ್ನು ಖಚಿತಪಡಿಸಿಕೊಳ್ಳಲು ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ದಲ್ಲೆವಾಲ್‌ಗೆ ವೈದ್ಯಕೀಯ ನೆರವು ನೀಡುವಂತೆ ನಿರ್ದೇಶಿಸಿದ ಆದೇಶವನ್ನು ಪಾಲಿಸದಿದ್ದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ಮೇಲೆ ಪಂಜಾಬ್ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತರಿ ಸೇರಿದಂತೆ ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದಲ್ಲೆವಾಲ್ ಅವರು ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...