Homeಮುಖಪುಟತೀವ್ರಗೊಂಡ ರೈತ ಹೋರಾಟ : ಇಂದು 'ಪಂಜಾಬ್ ಬಂದ್'

ತೀವ್ರಗೊಂಡ ರೈತ ಹೋರಾಟ : ಇಂದು ‘ಪಂಜಾಬ್ ಬಂದ್’

- Advertisement -
- Advertisement -

ಕೇಂದ್ರ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಹಿಂದೇಟು ಹಾಕುತ್ತಿರುವ ಹಿನ್ನೆಲೆ, ರೈತ ಸಂಘಟನೆಗಳು ಇಂದು (ಡಿ.30) ‘ಪಂಜಾಬ್ ಬಂದ್‌’ಗೆ ಕರೆಕೊಟ್ಟಿದ್ದು, ಬೆಳಿಗ್ಗೆಯೇ ಹಲವೆಡೆ ರಸ್ತೆಗಳನ್ನು ಮುಚ್ಚಿ ಪ್ರತಿಭಟಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು.

ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 4ರವರೆಗೆ ಬಂದ್ ಮಾಡಲು ರೈತರು ತೀರ್ಮಾನಿಸಿದ್ದಾರೆ. ಇಂದು ಬೆಳಿಗ್ಗೆ ಧರೇರಿ ಜತ್ತನ್ ಟೋಲ್ ಪ್ಲಾಝಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.

ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ದ್ವಾರದ ಬಳಿ ಜಮಾಯಿಸಲು ಪ್ರಾರಂಭಿಸಿದ್ದು, ಬಟಿಂಡಾದ ರಾಂಪುರ ಫುಲ್‌ನಲ್ಲಿ ರಸ್ತೆ ತಡೆ ನಡೆಸಿದ್ದಾರೆ.

ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ. ಆಸ್ಪತ್ರೆ, ವಿಮಾನ ನಿಲ್ದಾಣ, ಮದುವೆ, ಸಂದರ್ಶನ ಇತ್ಯಾದಿಗಳಿಗೆ ತೆರಳುವವರಿಗೆ ಓಡಾಡಲು ಅವಕಾಶ ನೀಡಲಾಗುವುದು. ಶಾಂತಿಯುತವಾಗಿ ಬಂದ್ ನಡೆಯಲಿದೆ ಎಂದು ಸರ್ವಾನ್ ಸಿಂಗ್ ತಿಳಿಸಿದ್ದಾರೆ.

ಈ ನಡುವೆ 70 ವರ್ಷ ವಯಸ್ಸಿನ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ ಇಂದಿಗೆ (ಡಿ.30) 35ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಇಲ್ಲಿಯವರೆಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ. ನ್ಯಾಯಾಲಯ, ಸರ್ಕಾರ ಸೇರಿದಂತೆ ಯಾರ ಮನವೊಲಿಕೆಯೂ ಫಲ ಕೊಟ್ಟಿಲ್ಲ.

ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಸಲುವಾಗಿ ಮನವೊಲಿಸಲು ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರಕ್ಕೆ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ. ಅಗತ್ಯವಿದ್ದರೆ ಕೇಂದ್ರದಿಂದ ಲಾಜಿಸ್ಟಿಕ್ ಬೆಂಬಲವನ್ನು ಪಡೆಯಲು ಸೂಚಿಸಿದೆ.

ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡುವವರೆಗೂ ಉಪವಾಸ ಮುರಿಯುವುದಿಲ್ಲ ಎಂದು ದಲ್ಲೆವಾಲ್ ಅವರು ಪಟ್ಟು ಹಿಡಿದಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸಂಪೂರ್ಣ ಕ್ಷೀಣಿಸಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ, ರೈತರ ಸಾಲ ಮನ್ನಾ, ಪಿಂಚಣಿ, ವಿದ್ಯುತ್ ದರಗಳಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂದು ಆಗ್ರಹಿಸಿ ಈ ವರ್ಷದ ಆರಂಭದಿಂದ ರೈತರು ಪಂಜಾಬ್ -ಹರಿಯಾಣ ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.

ರೈತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ವರ್ಷದ ಫೆಬ್ರವರಿ 13ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಆದರೆ, ಅವರು ದೆಹಲಿ ಪ್ರವೇಶಿಸದಂತೆ ಹರಿಯಾಣ ಸರ್ಕಾರ ಶಂಭು, ಖನೌರಿ ಗಡಿಯಲ್ಲಿ ತಡೆದಿತ್ತು. ಹಾಗಾಗಿ, ರೈತರು ಗಡಿಯಲ್ಲೇ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ಎರಡ್ಮೂರು ಬಾರಿ ಪ್ರತಿಭಟನಾ ಸ್ಥಳದಿಂದ ದೆಹಲಿಗೆ ಮೆರವಣಿಗೆ ಪುನರಾರಂಭಿಸಲು ಪ್ರಯತ್ನಿಸಿದರೂ, ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ಅಶ್ರುವಾಯು, ಜಲಫಿರಂಗಿ, ಲಾಠಿ ಏಟಿನ ಮೂಲಕ ರೈತರನ್ನು ತಡೆದಿದ್ದಾರೆ.

ಕಳೆದ ಡಿಸೆಂಬರ್ 6 ಮತ್ತು 14 ರ ನಡುವೆ ಮೂರು ಬಾರಿ ಕಾಲ್ನಡಿಗೆಯ ಮೂಲಕ ದೆಹಲಿಗೆ ಮೆರವಣಿಗೆ ಮಾಡಲು 101 ರೈತರ ತಂಡ ಪ್ರಯತ್ನಿಸಿತ್ತು. ಆದರೆ, ಹರಿಯಾಣದ ಪೊಲೀಸರು ಅದಕ್ಕೆ ಅವಕಾಶ ನೀಡಿಲ್ಲ.

ಜನವರಿ 4ರಂದು ಖನೌರಿಯಲ್ಲಿ ಕಿಸಾನ್ ಮಹಾಪಂಚಾಯತ್

ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಂಜಾಬ್-ಹರಿಯಾಣದ ಖನೌರಿ ಗಡಿಯಲ್ಲಿ ಜನವರಿ 4ರಂದು ‘ಕಿಸಾನ್ ಮಹಾಪಂಚಾಯತ್‌’ ನಡೆಸಲಾಗುವುದು ಎಂದು ರೈತ ನಾಯಕರು ಘೋಷಿಸಿದ್ದಾರೆ.

ಖನೌರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ನಾಯಕ ಅಭಿಮನ್ಯು ಕೋಹರ್ ಅವರು, ಸುಮಾರು ನಾಲ್ಕು ದಶಕಗಳಿಂದ ರೈತಪರ ಹೋರಾಟ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ರೈತರನ್ನು ಭೇಟಿಯಾಗಲು ಇಚ್ಚಿಸಿದ್ದಾರೆ. ಅವರ ಆಕಾಂಕ್ಷೆಯನ್ನು ರೈತ ಸಂಘಟನೆಗಳು ಗೌರವಿಸಿದ್ದು, ಜನವರಿ 4ರಂದು ಮಹಾಪಂಚಾಯತ್ ನಡೆಸುವುದಾಗಿ ಘೋಷಿಸಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....