Homeಮುಖಪುಟ15 ಅಡಿ ಎತ್ತರದ ವೇದಿಕೆಯಿಂದ ಬಿದ್ದ ಕಾಂಗ್ರೆಸ್‌ ಶಾಸಕಿ : ಗಂಭೀರ ಗಾಯ

15 ಅಡಿ ಎತ್ತರದ ವೇದಿಕೆಯಿಂದ ಬಿದ್ದ ಕಾಂಗ್ರೆಸ್‌ ಶಾಸಕಿ : ಗಂಭೀರ ಗಾಯ

- Advertisement -
- Advertisement -

ಕೇರಳದ ತೃಕ್ಕಾಕರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಅವರು ಸುಮಾರು 15 ಅಡಿ ಎತ್ತರದ ವೇದಿಕೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕೊಚ್ಚಿಯ ಕಲೂರ್‌ನಲ್ಲಿರುವ ಜವಹರಲಾಲ್ ನೆಹರೂ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ (ಡಿ.29) ಸಂಜೆ ನಡೆದಿದೆ.

ವರದಿಗಳ ಪ್ರಕಾರ, ಶಾಸಕಿ ಉಮಾ ಥಾಮಸ್ ಅವರು ಆಯತಪ್ಪಿ ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಅವರಿಗೆ ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಶಾಸಕಿಯನ್ನು ಸ್ವಯಂ ಸೇವಕರು ಮತ್ತು ಇತರರು ಕ್ರೀಡಾಂಗಣದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆ ಮತ್ತು ಬೆನ್ನುಮೂಳೆಗೆ ಗಂಭೀರ ಗಾಯಗಳಾಗಿರುವ ಹಿನ್ನೆಲೆ ಶಾಸಕಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆ ಬಿಡುಗಡೆ ಮಾಡಿದ ವೈದ್ಯಕೀಯ ಬುಲೆಟಿನ್ ಪ್ರಕಾರ, ಶಾಸಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಲೆ ಬೆನ್ನಿನ ಭಾಗ ಮತ್ತು ಮುಖಕ್ಕೆ ಗಾಯಗಳಾಗಿದ್ದು, ಪಕ್ಕೆಲುಬುಗಳಲ್ಲೂ ಫ್ರಾಕ್ಚರ್‌ ಆಗಿದೆ. ಶ್ವಾಸಕೋಶದಲ್ಲಿ ಆಂತರಿಕ ರಕ್ತಸ್ರಾವ ಉಂಟಾಗಿದೆ. ಹೀಗಾಗಿ ವೆಂಟಿಲೇಟರ್ ಬೆಂಬಲದೊಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಹೇಳಿದೆ.

ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮತ್ತು ಕೈಗಾರಿಕಾ ಸಚಿವ ಪಿ.ರಾಜೀವ್ ಶಾಸಕಿಯ ಆರೋಗ್ಯ ಸ್ಥಿತಿಯ ಮಾಹಿತಿ ಪಡೆದಿದ್ದಾರೆ. ಸೂಕ್ತ ಚಿಕಿತ್ಸೆ ಒದಗಿಸಲು ವೈದ್ಯರಿಗೆ ನಿರ್ದೇಶನ ನೀಡಿದ್ದಾರೆ.

ಕೊಚ್ಚಿಯ ಜವಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ‘ಮೃದಂಗ ನಾದಂ’ ಎಂಬ ಹೆಸರಿನಲ್ಲಿ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೇರಳ ಸರ್ಕಾರದ ಸಂಸ್ಕೃತಿ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಟಿ, ನೃತ್ಯಗಾರ್ತಿ ದಿವ್ಯಾ ಉನ್ನಿ ಸೇರಿದಂತೆ ಸುಮಾರು 12,000 ಸಾವಿರ ನೃತ್ಯಗಾರರು ಈ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಗಿನ್ನೆಸ್ ದಾಖಲೆಗೆ ಸಜ್ಜಾಗಿದ್ದರು. ಆದರೆ, ಕಾರ್ಯಕ್ರಮ ಉದ್ಘಾಟನೆಗೂ ಮುನ್ನವೇ ಶಾಸಕಿ ವೇದಿಕೆಯಿಂದ ಬಿದ್ದು ಅವಘಡ ಸಂಭವಿಸಿದೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....