Homeಮುಖಪುಟಸಿಎಂ ಆದಿತ್ಯನಾಥ್ ಮನೆಯ ಅಡಿಯಲ್ಲಿ ಶಿವಲಿಂಗ - ಅಖಿಲೇಶ್ ಯಾದವ್

ಸಿಎಂ ಆದಿತ್ಯನಾಥ್ ಮನೆಯ ಅಡಿಯಲ್ಲಿ ಶಿವಲಿಂಗ – ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಲಕ್ನೋದ ಅಧಿಕೃತ ನಿವಾಸದ ಅಡಿಯಲ್ಲಿ ಶಿವಲಿಂಗವಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಹೇಳಿದ್ದು, ”ಅಲ್ಲಿಯೂ ಅಗೆಯಿರಿ” ಎಂದು ತಿಳಿಸಿದ್ದಾರೆ. ಸಿಎಂ ಆದಿತ್ಯನಾಥ್

ಸಂಭಾಲ್ ಸೇರಿದಂತೆ ಹಲವೆಡೆ ನಡೆಸಲಾಗಿರುವ ಸಮೀಕ್ಷೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ಬಿಜೆಪಿ ಸರ್ಕಾರವು ತನ್ನ ವೈಫಲ್ಯವನ್ನು ಮರೆಮಾಚಲು ಮತ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ವಿವಿಧ ಸ್ಥಳಗಳಲ್ಲಿ ಭೂಮಿಯನ್ನು ಅಗೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಸಿಎಂ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮುಖ್ಯಮಂತ್ರಿಯವರ ನಿವಾಸದ ಕೆಳಗೆ ಶಿವಲಿಂಗವಿದೆ ಎಂದು ನಾವು ನಂಬುತ್ತೇವೆ. ಅಲ್ಲಿಯ ಭೂಮಿಯನ್ನು ಅಗೆಯಿರಿ” ಎಂದು ಎಂದು ಅಖಿಲೇಶ್ ಯಾದವ್ ಹೇಳಿದ್ದು, “ಬುಲ್ಡೋಜರ್‌ಗಳಿಂದ ಅಮಾಯಕರ ಮನೆಗಳನ್ನು ಅಕ್ರಮವಾಗಿ ಕೆಡವಲಾಗುತ್ತಿದೆ. ಹಾಗೆಯೇ, ಇದು ವಿನಾಶವಾಗಿದ್ದು, ಅಭಿವೃದ್ಧಿಯಲ್ಲ. ಮುಖ್ಯಮಂತ್ರಿಯ ಕೈಯಲ್ಲಿ ಅಭಿವೃದ್ಧಿಯ ರೇಖೆಯಿಲ್ಲ, ವಿನಾಶದ ರೇಖೆ ಇದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಖಿಲೇಶ್ ಯಾದವ್‌ ಅವರ ಹೇಳಿಕೆಯಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ , “ಸಂಭಾಲ್‌ನಲ್ಲಿ ಭೂಶೋಧನೆ ಮಾಡುವುದಿಂದ ಅವರಿಗೆ ಏನು ಸಮಸ್ಯೆ ಇದೆ” ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿ, ಅಖಿಲೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಓಟ್‌ಬ್ಯಾಂಕ್‌ಗಾಗಿ ಶಿವಲಿಂಗದ ಅಪಹಾಸ್ಯ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....