Homeಕರ್ನಾಟಕಬಿಜೆಪಿಯವರು ಎಷ್ಟೇ ಚೀರಾಡಿ ಬಟ್ಟೆ ಹರಿದರೂ ರಾಜೀನಾಮೆ ನೀಡಲ್ಲ - ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಎಷ್ಟೇ ಚೀರಾಡಿ ಬಟ್ಟೆ ಹರಿದರೂ ರಾಜೀನಾಮೆ ನೀಡಲ್ಲ – ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ, ನಾನು ಮಾತ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿರುವ ಹಿನ್ನಲೆ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ಬಿಜೆಪಿ ಆಗ್ರಹಿಸಿತ್ತು.

ಈ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಪ್ರಿಯಾಂಕ್ ಖರ್ಗೆ, “ಎಷ್ಟೇ ಚೀರಾಡಿಕೊಳ್ಳಲಿ, ಬಟ್ಟೆ ಹರಿದುಕೊಳ್ಳಲಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಾನು ಈ ಹಿಂದೆಯೂ ಹೇಳಿದ್ದೇನೆ. ಮೊದಲು ಸಾಕ್ಷಿ ತೋರಿಸಿ ನಂತರ ಮಾತನಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸಿದಂತೆ ಮಾತನಾಡುವುದಲ್ಲ” ಎಂದು ಹೇಳಿದ್ದಾರೆ. ಬಿಜೆಪಿಯವರು ಎಷ್ಟೇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಡಿಸೆಂಬರ್ 27ರಂದೇ ಗೃಹ ಸಚಿವರು, ಸಿಎಂಗೆ ಮನವಿ ಮಾಡಿದ್ದೇನೆ. ಈ ಪ್ರಕರಣದಲ್ಲಿ ಸ್ವತಂತ್ರ ತನಿಖೆ ಆಗಲಿ ಎಂದು ಹೇಳಿದ್ದೆ. ಸಿಎಂ ಭೇಟಿ ಮಾಡಿ ಮಾಹಿತಿ ನೀಡಿದ್ದೇನೆ, ಗೃಹ ಸಚಿವರನ್ನೂ ಕೂಡ ಭೇಟಿ ಮಾಡಿದ್ದೇನೆ. ರಾಜು ಕಪನೂರ್ ನನ್ನ ಆಪ್ತನಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ಬಿಜೆಪಿ ನಾರ್ತ್ ಅಭ್ಯರ್ಥಿ ಚಂದು ಪಾಟೀಲ್ ಜೊತೆಗೆ ರಾಜು ಕಪನೂರ್ ಇರುವ ಫೋಟೋ ನಮ್ಮ ಬಳಿಯೂ ಇದೆ. ಯಾಕೆಂದರೆ ಅವರು ಕಾಂಗ್ರೆಸ್‌ಗೆ ಬರುವ ಮುನ್ನ ಬಿಜೆಪಿಯಲ್ಲಿದ್ದರು. ರಾಜು ಕಪನೂರ್ ಬಿಜೆಪಿ ಎಸ್​ಸಿ ಮೋರ್ಚಾ ಅಧ್ಯಕ್ಷರಾಗಿದ್ದರು” ಎಂದು ಅವರು ಹೇಳಿದ್ದಾರೆ.

“ನಾವು ಲಾಜಿಕ್ ಆಗಿಯೇ ಮಾತನಾಡುತ್ತಿದ್ದೇವೆ. ವಿಜಯೇಂದ್ರ ವಿರುದ್ದ ಮನಿ ಲಾಂಡರಿಂಗ್ ಪ್ರಕರಣ ಆಗಿದೆಯಲ್ಲ. ಹಾಗಿದ್ದರೆ ಅವರು ಯಾಕೆ ರಾಜೀನಾಮೆ ನೀಡುತ್ತಿಲ್ಲ” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಜೊತೆಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂಬುದು ವಿಪಕ್ಷಗಳು ಆಗ್ರಹಿಸಿತ್ತು.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...