ಬಿಹಾರದ ಎಲ್ಲಾ 912 ಕೇಂದ್ರಗಳಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ನಡೆಸಿದ ಪ್ರಾಥಮಿಕ ಪರೀಕ್ಷೆಯನ್ನು ಮರುಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಬಿಪಿಎಸ್‌ಸಿ ಅಭ್ಯರ್ಥಿಗಳ ನಿಯೋಗವು ಸೋಮವಾರ ಬಿಹಾರದ ಮುಖ್ಯ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ ಅವರನ್ನು ಭೇಟಿ ಮಾಡಿದೆ. ಆದರೆ ಸಭೆಯು ಫಲಪ್ರದವಾಗಿಲ್ಲ ಎಂದು ವರದಿಯಾಗಿದೆ.
ಡಿಸೆಂಬರ್ 18 ರಿಂದ ನೂರಾರು ಅಭ್ಯರ್ಥಿಗಳು ತಮ್ಮ ಬೇಡಿಕೆಯನ್ನು ಮುಂದಿಟ್ಟು ಆಂದೋಲನ ನಡೆಸುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿ ಮೀನಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿದ್ಯಾರ್ಥಿಗಳು, ತಮ್ಮ ಬೇಡಿಕೆಗಳನ್ನು ಪರಿಹರಿಸಲು ಸರ್ಕಾರ ಯಾವುದೇ ದೃಢವಾದ ಭರವಸೆ ಅಥವಾ ಕಾಲವಕಾಶವನ್ನು ನೀಡಿಲ್ಲ ಎಂದು ಹೇಳಿದ್ದಾರೆ. ಬಿಹಾರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರತಿಭಟನಾ ನಿರತ ವಿದ್ಯಾರ್ಥಿಗಳು, ಮರು ಪರೀಕ್ಷೆ ನಡೆಸುವಂತೆ, ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಆದೇಶಿಸುವಂತೆ ಮತ್ತು ಹನ್ನೆರಡು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಆಗ್ರಹಿಸುತ್ತಿದ್ದಾರೆ.
ಈ ನಡುವೆ, ಜನ್ ಸ್ವಾರಾಜ್ ಪಾರ್ಟಿ (ಜೆಎಸ್‌ಪಿ) ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರಕ್ಕೆ 48 ಗಂಟೆಗಳ ಸಮಯಾವಕಾಶ ನೀಡಿದ್ದು, ಇಲ್ಲದಿದ್ದರೆ ವಿದ್ಯಾರ್ಥಿಗಳು ಹೆಚ್ಚಿನ ತೀವ್ರತೆಯೊಂದಿಗೆ ಪ್ರತಿಭಟನೆಯನ್ನು ಪುನರಾರಂಭಿಸುತ್ತಾರೆ ಎಂದು ಹೇಳಿದ್ದಾರೆ.
ಖಾಲಿ ಇರುವ ಹುದ್ದೆಗಳಿಗೆ ಬಿಪಿಎಸ್‌ಸಿ ನಡೆಸುವ ಪರೀಕ್ಷೆಯ ಮೂಲಕ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿರುವುದು ಗೊತ್ತಾಗಿದೆ ಎಂದು ಕಿಶೋರ್ ಬೆಳಗ್ಗೆ ಆರೋಪಿಸಿದ್ದಾರೆ. ಜಲಫಿರಂಗಿಗಳು, ಪೊಲೀಸರು ಮತ್ತು ಲಾಠಿ ಪ್ರಹಾರವನ್ನು ಎದುರಿಸಿ ವಿದ್ಯಾರ್ಥಿಗಳು ಕೊರೆಯುವ ಚಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇನ್ನೂ ಮೌನ ವಹಿಸಿರುವ ಬಗ್ಗೆ ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ ಅವರನ್ನು ಭೇಟಿ ಮಾಡಿದ ನಿಯೋಗದ ಭಾಗವಾಗಿದ್ದ ವಿದ್ಯಾರ್ಥಿ ಮುಖಂಡರೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯ ಕಾರ್ಯದರ್ಶಿ ತಮ್ಮ ಬೇಡಿಕೆಗಳನ್ನು ಆಲಿಸಿದರು ಆದರೆ ಯಾವುದೇ ಖಚಿತ ಭರವಸೆ ನೀಡಲಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು
https://naanugauri.com/travel-agency-fraud-medina-paradadu-coast-umrah-pilgrim/


