Homeಮುಖಪುಟಕೇರಳದ ನರ್ಸ್‌ ಮರಣದಂಡನೆಗೆ ಯೆಮನ್‌ ಅಧ್ಯಕ್ಷ ಒಪ್ಪಿಗೆ : ಕೇಂದ್ರ ಸರ್ಕಾರ ಹೇಳಿದ್ದೇನು?

ಕೇರಳದ ನರ್ಸ್‌ ಮರಣದಂಡನೆಗೆ ಯೆಮನ್‌ ಅಧ್ಯಕ್ಷ ಒಪ್ಪಿಗೆ : ಕೇಂದ್ರ ಸರ್ಕಾರ ಹೇಳಿದ್ದೇನು?

- Advertisement -
- Advertisement -

ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣದಲ್ಲಿ ಮುಂದಿನ ಆಯ್ಕೆಗಳನ್ನು ಪರಿಶೀಲಿಸಲು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಡಿ.31) ಭರವಸೆ ನೀಡಿದೆ.

ಯೆಮನ್‌ ಪ್ರಜೆಯನ್ನು ಕೊಲೆ ಮಾಡಿದ ಅಪರಾಧದಲ್ಲಿ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಅವರು ಅನುಮೋದನೆ ನೀಡಿದ್ದಾರೆ. ಈ ಬೆನ್ನಲ್ಲೆ ಕೇಂದ್ರ ವಿದೇಶಾಂಗ ಸಚಿವಾಲಯ (ಎಂಇಎ) ಪ್ರತಿಕ್ರಿಯೆ ಕೊಟ್ಟಿದೆ.

ವರದಿಗಳ ಪ್ರಕಾರ, ನಿಮಿಷಾ ಪ್ರಿಯಾ ಅವರಿಗೆ ಒಂದು ತಿಂಗಳೊಳಗೆ ಮರಣದಂಡನೆ ಜಾರಿಯಾಗುವ ಸಾಧ್ಯತೆಯಿದೆ.

“ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಅವರು ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಮಾಹಿತಿ ನಮಗೆ ಗೊತ್ತಿದೆ. ಆಕೆಯ ಕುಟುಂಬ ಮುಂದಿನ ಆಯ್ಕೆಗಳನ್ನು ಪರಿಶೀಲಿಸುತ್ತಿದೆ ಎಂಬುವುದೂ ನಮ್ಮ ಗಮನಕ್ಕೆ ಬಂದಿದೆ. ಅವರಿಗೆ ಸರ್ಕಾರದ ಕಡೆಯಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲಾಗುವುದು” ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲಂಗೋಡ್‌ನ ನರ್ಸ್ ನಿಮಿಷಾ ಪ್ರಿಯಾ ಅವರು 2008ರಲ್ಲಿ ಯೆಮೆನ್‌ಗೆ ತೆರಳಿದವರು. ಅಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಲವಾರು ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದಾರೆ. ನಂತರ ತಮ್ಮದೇ ಸ್ವಂತ ಕ್ಲಿನಿಕ್ ಸ್ಥಾಪಿಸಲು ಯೋಜಿಸಿದ್ದರು.

2017ರಲ್ಲಿ, ಅವರು ತಮ್ಮ ಸ್ಥಳೀಯ ಪಾಲುದಾರ ತಲಾಲ್ ಅಬ್ದೋ ಮಹದಿ ಅವರೊಂದಿಗೆ ಹಣದ ವಿಚಾರಕ್ಕೆ ಜಗಳವಾಡಿಕೊಂಡಿದ್ದರು. ನಿಮಿಷಾ ಅವರ ಕುಟುಂಬದ ಪ್ರಕಾರ, ಮಹದಿ ಹಣ ದುರುಪಯೋಗಪಡಿಸಿಕೊಳ್ಳುವುದನ್ನು ನಿಮಷಾ ವಿರೋಧಿಸಿದ್ದರು.

ಜಗಳದ ಮುಂದುವರಿದ ಭಾಗವಾಗಿ, ಮಹದಿ ವಶಪಡಿಸಿಕೊಂಡಿದ್ದ ತನ್ನ ಪಾಸ್‌ಪೋರ್ಟ್ ಅನ್ನು ವಾಪಸ್ ಪಡೆಯಲು ನಿಮಿಷಾ ಅವರು ಮಹದಿಗೆ ನಿದ್ರೆಯ ಇಂಜೆಕ್ಷನ್ ಚುಚ್ಚಿದ್ದರು. ಅದು ಓವರ್‌ ಡೋಸ್ ಆಗಿ ಯೆಮನ್ ಪ್ರಜೆ ಮಹದಿ ಸಾವನ್ನಪ್ಪಿದ್ದರು.

ಆ ಬಳಿಕ ಯೆಮೆನ್‌ನಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ನಿಮಿಷ ಅವರನ್ನು ಬಂಧಿಸಲಾಗಿತ್ತು. 2018ರಲ್ಲಿ ಅವರನ್ನು ಅಪರಾಧಿ ಎಂದು ನ್ಯಾಯಾಲಯ ಘೋಷಿಸಿತ್ತು. 2020ರಲ್ಲಿ, ಸನಾದ ವಿಚಾರಣಾ ನ್ಯಾಯಾಲಯ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿತು.

ದ.ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನಕ್ಕೆ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...