ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 35 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ನೀಡಿರುವ ಆದೇಶವನ್ನು ಅನುಸರಿಸುವಂತೆ ಪಂಜಾಬ್ ಸರ್ಕಾರಕ್ಕೆ ಹೇಳಿರುವ ಸುಪ್ರೀಂ ಕೋರ್ಟ್ ಮಂಗಳವಾರದ ವಿಚಾರಣೆಯನ್ನು ಜನವರಿ 2 ಕ್ಕೆ ಮುಂದೂಡಿದೆ. ರೈತ ಮುಖಂಡ ದಲ್ಲೆವಾಲ್‌ರನ್ನು
ಪಂಜಾಬ್ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಅವರು ನ್ಯಾಯಾಲಯದ ಡಿಸೆಂಬರ್ 20 ರ ಆದೇಶದ ಅನುಸರಣೆಗೆ ಮೂರು ದಿನಗಳ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದ್ದು, ಇದರ ನಂತರ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಸುಧಾಂಶು ಧುಲಿಯಾ ಅವರ ರಜಾಕಾಲದ ಪೀಠವು ಜನವರಿ 2 ರಂದು ಹೆಚ್ಚಿನ ವಿಚಾರಣೆಗೆ ವಿಷಯವನ್ನು ಪಟ್ಟಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಂಧಾನಕಾರರ ತಂಡವು ಪ್ರತಿಭಟನಾ ಸ್ಥಳದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸುತ್ತಿದೆ ಮತ್ತು ದಲ್ಲೆವಾಲ್ ಅನ್ನು ಖಾನೌರಿ ಗಡಿಯ ಪಂಜಾಬ್ ಭಾಗದಲ್ಲಿರುವ ಹತ್ತಿರದ ತಾತ್ಕಾಲಿಕ ಆಸ್ಪತ್ರೆಗೆ ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗುರ್ಮಿಂದರ್ ಸಿಂಗ್ ಹೇಳಿದ್ದಾರೆ.
ಪ್ರತಿಭಟನಾನಿರತ ರೈತರೊಂದಿಗಿನ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಮತ್ತು ಹಿಂದಿನ ಆದೇಶಗಳ ಅನುಸರಣೆಯನ್ನು ಮಾತ್ರ ಬಯಸುತ್ತಿದ್ದೇವೆ ಎಂದು ಪೀಠವು ಹೇಳಿದ್ದು, ಗುರ್ಮಿಂದರ್ ಸಿಂಗ್ ಸಲ್ಲಿಸಿದ್ದ ಅಹವಾಲುಗಳನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಮುಂದೂಡಿದೆ. ಡಿಸೆಂಬರ್ 28 ರಂದು, ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸದ ಪಂಜಾಬ್ ಸರ್ಕಾರವನ್ನು ಸುಪ್ರಿಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ರೈತ ಮುಖಂಡ ದಲ್ಲೆವಾಲ್‌ರನ್ನು
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತರಿ ಸೇರಿದಂತೆ ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ದಲ್ಲೆವಾಲ್ ಅವರು ನವೆಂಬರ್ 26 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಅಡಿಯಲ್ಲಿ ರೈತರು ನಡೆಸುತ್ತಿದ್ದ ದೆಹಲಿ ಚಲೋ ರ್ಯಾಲಿಯನ್ನು ಭದ್ರತಾ ಪಡೆಗಳು ತಡೆದಿದ್ದರು. ಇದರ ನಂತರ ಫೆಬ್ರವರಿ 13 ರಿಂದ ರೈತರು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.
ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು
https://naanugauri.com/travel-agency-fraud-medina-paradadu-coast-umrah-pilgrim/


