Homeಮುಖಪುಟಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು - ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ...

ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

- Advertisement -
- Advertisement -

ಮಧ್ಯಪ್ರದೇಶದ ದೇವಾಸ್‌ನಲ್ಲಿ ಪೊಲೀಸ್ ಠಾಣೆಯಲ್ಲಿ ಸಾವಿಗೀಡಾದ ದಲಿತ ಯುವಕನ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಸರ್ಕಾರದ ಬೆಂಬಲವಿಲ್ಲದೆ ಇದು ಸಾಧ್ಯವಿಲ್ಲ ಎಂದು ಹೇಳಿದೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, “ಇದು ನಾಚಿಕೆಗೇಡಿನ ಮತ್ತು ಅತ್ಯಂತ ಖಂಡನೀಯವಾಗಿದ್ದು ಇಂತಹ ಘಟನೆಗಳನ್ನು ಕಾಂಗ್ರೆಸ್ ಸಹಿಸುವುದಿಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ ಪೊಲೀಸ್

ಕಾಂಗ್ರೆಸ್ ಪಕ್ಷವು “ಬಹುಜನರ” ಹಕ್ಕುಗಳಿಗಾಗಿ ಅವರು ನ್ಯಾಯ ಪಡೆಯುವವರೆಗೆ ಹೋರಾಟವನ್ನು ಮುಂದುವರೆಸಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಒಂದೆಡೆ, ಮಧ್ಯಪ್ರದೇಶದ ದೇವಾಸ್‌ನಲ್ಲಿ ದಲಿತ ಯುವಕನನ್ನು ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲಾಯಿತು. ಮತ್ತೊಂದೆಡೆ, ಒಡಿಶಾದ ಬಾಲಸೋರ್‌ನಲ್ಲಿ ಬುಡಕಟ್ಟು ಮಹಿಳೆಯರನ್ನು ಮರಗಳಿಗೆ ಕಟ್ಟಿ ಥಳಿಸಲಾಗಿದೆ. ಈ ಎರಡೂ ಘಟನೆಗಳು ದುಃಖಕರ, ನಾಚಿಕೆಗೇಡಿನ ಮತ್ತು ಅತ್ಯಂತ ಖಂಡನೀಯ,” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿಯ ಮನುವಾದಿ ಚಿಂತನೆಯಿಂದಾಗಿ, ಅವರ ಆಡಳಿತದ ರಾಜ್ಯಗಳಲ್ಲಿ ಇಂತಹ ಘಟನೆಗಳು ಒಂದರ ಹಿಂದೆ ಒಂದರಂತೆ ನಡೆಯುತ್ತಿವೆ. ಇವೆಲ್ಲಾ ಸರ್ಕಾರದ ಬೆಂಬಲವಿಲ್ಲದೆ ಇದು ಸಾಧ್ಯವಿಲ್ಲ. ದೇಶದ ಬಹುಜನರ ವಿರುದ್ಧದ ಇಂತಹ ಅನಾಗರಿಕತೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ. ಮಧ್ಯಪ್ರದೇಶ ಪೊಲೀಸ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಘಟನೆಯನ್ನು ಖಂಡಿಸಿದ್ದು, “ಬಾಬಾಸಾಹೇಬ್ ಅಂಬೇಡ್ಕರ್ ಅವರ ಅವಮಾನ ಮತ್ತು ದುರ್ಬಲ ವರ್ಗಗಳ ಮೇಲಿನ ದಬ್ಬಾಳಿಕೆಯು ಬಿಜೆಪಿಯ ಆಡಳಿತದ ಮೂಲ ಮಂತ್ರ” ಎಂದು ಆರೋಪಿಸಿದ್ದಾರೆ. ದೇವಾಸ್‌ನಲ್ಲಿ ಪೊಲೀಸ್ ಕಸ್ಟಡಿ ವೇಳೆ ದಲಿತ ಯುವಕನ ಸಾವು ಅತ್ಯಂತ ಗಂಭೀರವಾಗಿದೆ ಎಂದು ಅವರು ಹೇಳಿದರು.

ಪೊಲೀಸರ ದೌರ್ಜನ್ಯದಿಂದ ಯುವಕ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಈ ಹಿಂದೆ, ಪರ್ಭಾನಿ (ಮಹಾರಾಷ್ಟ್ರ)ಯ ದಲಿತ ಕುಟುಂಬಗಳ ಮೇಲೆ ದೌರ್ಜನ್ಯ ಎಸಗಿ ಪೊಲೀಸ್ ಕಸ್ಟಡಿಯಲ್ಲಿ ದಲಿತ ಯುವಕನ ಸಾವಿಗೀಡಾಗಿದ್ದರು. ಬಿಜೆಪಿ ಆಡಳಿತದಲ್ಲಿ ದಲಿತರು, ಆದಿವಾಸಿಗಳು ಮತ್ತು ಶೋಷಿತರಂತಹ ದುರ್ಬಲ ವರ್ಗಗಳನ್ನು ದಮನ ಮಾಡಲು ಪೊಲೀಸರಿಗೆ ಮುಕ್ತ ಹಸ್ತ ದೊರೆತಂತಿದೆ ಎಂದು ಪ್ರಿಯಾಂಕ ಹೇಳಿದ್ದಾರೆ.

ದೇವಾಸ್‌ ಘಟನೆಯ ಕೆಲವೇ ಗಂಟೆಗಳ ನಂತರ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ಮತ್ತು ಮಾಜಿ ಸಚಿವ ಸಜ್ಜನ್ ಸಿಂಗ್ ವರ್ಮಾ ನೇತೃತ್ವದಲ್ಲಿ ಪಕ್ಷದ ನಾಯಕರು ಘಟನೆಯ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ: ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ ನಡುವೆ ಪ್ರತಿಭಟನೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...