Homeಮುಖಪುಟಬಿಜೆಪಿ ನಾಯಕನ 'ಕೇರಳ ಮಿನಿ ಪಾಕಿಸ್ತಾನ' ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

- Advertisement -
- Advertisement -

ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಅವರು, ದಕ್ಷಿಣದ ರಾಜ್ಯದ ಕುರಿತಾದ ‘ಮಿನಿ ಪಾಕಿಸ್ತಾನ’ ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಿಸಿದ್ದಾರೆ. “ಈ ಹೇಳಿಕೆಗಳು ದುರುದ್ದೇಶಪೂರಿತ, ಸಂಪೂರ್ಣವಾಗಿ ಖಂಡನೀಯ, ಇದು ಕೇರಳದ ವಿರುದ್ಧ ದ್ವೇಷದ ಅಭಿಯಾನಗಳನ್ನು ಪ್ರತಿಬಿಂಬಿಸುತ್ತದೆ’ ಎಂದು ಹೇಳಿದರು.

“ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರು ಕೇರಳವನ್ನು ‘ಮಿನಿ-ಪಾಕಿಸ್ತಾನ’ ಎಂದು ಲೇಬಲ್ ಮಾಡುವ ಅವಹೇಳನಕಾರಿ ಹೇಳಿಕೆಯು ತೀವ್ರ ದುರುದ್ದೇಶಪೂರಿತ; ಸಂಪೂರ್ಣವಾಗಿ ಖಂಡನೀಯವಾಗಿದೆ. ಇಂತಹ ಹೇಳಿಕೆಗಳು ಜಾತ್ಯತೀತತೆ ಮತ್ತು ಕೋಮು ಸೌಹಾರ್ದತೆಯ ಭದ್ರಕೋಟೆಯಾಗಿರುವ ಕೇರಳದ ವಿರುದ್ಧ ಸಂಘ ಪರಿವಾರ ನಡೆಸುತ್ತಿರುವ ದ್ವೇಷದ ಅಭಿಯಾನಗಳನ್ನು ಪ್ರತಿಬಿಂಬಿಸುತ್ತದೆ. ಕೇರಳದ ಮೇಲಿನ ಈ ಹೀನ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಸಂಘಪರಿವಾರದ ದ್ವೇಷಪೂರಿತ ಪ್ರಚಾರದ ವಿರುದ್ಧ ಎಲ್ಲ ಪ್ರಜಾಸತ್ತಾತ್ಮಕ ಮತ್ತು ಸೆಕ್ಯುಲರ್ ಶಕ್ತಿಗಳು ಒಂದಾಗಬೇಕು” ಎಂದು ವಿಜಯನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ನಾರಾಯಣ ರಾಣೆ ಅವರ ಪುತ್ರ, 42 ವರ್ಷದ ನಿತೇಶ್ ರಾಣೆ ಅವರು ದೇವೇಂದ್ರ ಫಡ್ನವಿಸ್ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರುಗಳ ಅಭಿವೃದ್ಧಿ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕ ಸಭೆಯೊಂದರಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಗುರಿಯಾಗಿಸಿದ ರಾಣೆ, ಕೇರಳದ ವಯನಾಡಿನಿಂದ ಅವರನ್ನು ಆಯ್ಕೆ ಮಾಡಲಾಗಿದೆ. ಏಕೆಂದರೆ, ಕೇರಳ ಮಿನಿ ಪಾಕಿಸ್ತಾನ ಆಗಿದೆ ಎಂದು ಹೇಳಿದ್ದರು.

“ಕೇರಳವು ಮಿನಿ ಪಾಕಿಸ್ತಾನವಾಗಿದೆ, ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಅಲ್ಲಿಂದ ಆಯ್ಕೆಯಾಗಿದ್ದಾರೆ. ಎಲ್ಲ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ, ಅವರು ತಮ್ಮೊಂದಿಗೆ ಭಯೋತ್ಪಾದಕರನ್ನು ಕರೆದೊಯ್ದ ನಂತರ ಸಂಸದರಾಗಿದ್ದಾರೆ” ರಾಣೆ ಹೇಳಿದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....