Homeಕರ್ನಾಟಕಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

- Advertisement -
- Advertisement -

ಕರ್ನಾಟಕ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಹಿರಿಯ ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಮಂಗಳವಾರ ಆಯ್ಕೆಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ 24 ನೇ ರಾಜ್ಯ ಸಮ್ಮೇಳನದಲ್ಲಿ 35 ಜನರ ನೂತನ ರಾಜ್ಯ ಸಮಿತಿಯನ್ನು ಚುನಾಯಿಸಲಾಗಿದ್ದು, ಈ ಸಮಿತಿಯು 12 ಜನರ ಕಾರ್ಯದರ್ಶಿ ಮಂಡಳಿಯನ್ನು ಆಯ್ಕೆ ಮಾಡಿದೆ.

ನೂತನ ರಾಜ್ಯ ಕಾರ್ಯದರ್ಶಿ ಡಾ.ಕೆ. ಪ್ರಕಾಶ್ ಅವರು ಈ ಹಿಂದೆ ಕೆಎಸ್ಆರ್‌ಟಿಸಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ಹೋರಾಟಗಳನ್ನು ಸಂಘಟಿಸಿದ್ದರು. ನೂತನ ಕಾರ್ಯದರ್ಶಿ ಮಂಡಳಿಯಲ್ಲಿ ಡಾ.ಕೆ.ಪ್ರಕಾಶ್‌ ಅವರ ಜೊತೆಗೆ, ಯು. ಬಸವರಾಜ್‌, ಜಿ.ಸಿ. ಬಯ್ಯಾರೆಡ್ಡಿ,  ಮೀನಾಕ್ಷಿ ಸುಂದರಂ, ಎಸ್.‌ ವರಲಕ್ಷ್ಮಿ, ಕೆ. ನೀಲಾ, ಎಂ.ಪಿ ಮುನಿವೆಂಕಟಪ್ಪ, ಗೋಪಾಲಕೃಷ್ಣ ಹರಳಹಳ್ಳಿ, ಸೈಯದ್‌ ಮುಜೀಬ್‌, ಯಾದವ ಶೆಟ್ಟಿ, ಕೆ. ಮಹಾಂತೇಶ್‌, ಚಂದ್ರಪ್ಪ ಹೊಸ್ಕೇರಾ ಆಯ್ಕೆಯಾಗಿದ್ದಾರೆ. ಕಾರ್ಮಿಕ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

24 ನೇ ರಾಜ್ಯ ಸಮ್ಮಳೇನದ ಪ್ರತಿನಿಧಿ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದ್ದ ಸಿಪಿಐ(ಎಂ) ಪೊಲೀಟ್‌ ಬ್ಯೋರೋ ಸದಸ್ಯ ಬಿ.ವಿ ರಾಘವಲು, “ಸಂಸತ್ತಿನಲ್ಲಿ ಸಂವಿಧಾನದ 75 ವರ್ಷದ ಸಂದರ್ಭದಲ್ಲಿ ವಿಶೇಷ ಚರ್ಚೆ ನಡೆಯುತ್ತಿದೆ. ಸಂವಿಧಾನದ ಮಹತ್ವವನ್ನು ಅರಿಯದ ಕಾಂಗ್ರೆಸ್‌ ಮತ್ತು ಬಿಜೆಪಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದನ್ನು ದೇಶದ ಜನ ಗಮನಿಸಿದ್ದಾರೆ. ಸಂವಿಧಾನವನ್ನು ಅರ್ಥ ಮಾಡಿಕೊಂಡು, ಮೂಲಭೂತ ತತ್ವಗಳನ್ನು ಅರಿಯಬೇಕಿದೆ” ಎಂದು ಹೇಳಿದ್ದಾರೆ.

ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತು ಸಂವಿಧಾನದ ನಿರ್ಮಾತ್ರುಗಳು ಪ್ರತಿಪಾದಿಸಿದ ಆಧಾರದಲ್ಲಿ 5 ಮೂಲಭೂತ ತತ್ವಗಳನ್ನು ಸಂವಿಧಾನವು ನಿರೂಪಿಸಿದೆ. ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ ಮತ್ತು ಸಮಾಜವಾದ ಇವುಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ದಾಳಿಯನ್ನು ನಾವು ತಡೆಗಟ್ಟಬೇಕಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾಪ್ರಭುತ್ವ ನಾಶವಾದರೆ ಅದರ ಮೊದಲ ದಾಳಿ ಬಡವರು, ದುರ್ಬಲರು, ಕಾರ್ಮಿಕರು, ದಲಿತರ ಮೇಲೆ ನಡೆಯುತ್ತದೆ. ಉದಾಹರಣೆಗೆ ಕಾರ್ಮಿಕ ಸಂಹಿತೆಗಳನ್ನು ಬಿಜೆಪಿ ತಂದಿದೆ. ಈ ಹಿಂದೆ ಕಾಂಗ್ರೆಸ್‌ ಕೂಡಾ ಜಾರಿಗೆ ಪ್ರಯತ್ನಿಸಿತ್ತು. ಈ ನೀತಿಗಳು ಸಂಘ ಕಟ್ಟುವ ಹಕ್ಕು, ಕೆಲಸದ ಅವಧಿ, ಗುತ್ತಿಗೆ ಪದ್ದತಿ, ಬೇಕೆಂದಾಗ ಕೆಲಸಕ್ಕೆ ತೆಗೆದುಕೊಳ್ಳುವುದು, ತೆಗೆದು ಹಾಕುವುದನ್ನು ಬೆಂಬಲಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಹಿತೆಗಳು ಹೇಳುತ್ತಿವೆ. ಇದ್ದಕ್ಕೆ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇವೆಲ್ಲವೂ ಪ್ರಜಾಪ್ರಬುತ್ಬದ ಮೌಲ್ಯಗಳಾಗಿವೆ, ಇವೆಲ್ಲ ನಾಶವಾದರೆ ಪ್ರಜಾಪ್ರಭುತ್ವದಕ್ಕೆ ದಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವ ನಾಶಮಾಡಿ ಫ್ಯಾಸಿಸಂ ಜಾರಿ ಮಾಡುವ ಹುನ್ನಾರವಾಗಿದೆ. ಇದು ಏಕ ವ್ಯಕ್ತಿಯ ಆಡಳಿತ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ. ಆರ್‌ಎಸ್‌ಎಸ್‌ ಫ್ಯಾಸಿಸಂನ್ನು ಬೆಂಬಲಿಸುತ್ತಿರುವ ಕಾರಣ ಈ ದಾಳಿ ನಡೆಸುತ್ತಿದೆ. ಇಂತಹ ದಾಳಿಗಳ ವಿರುದ್ದ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಜಾತ್ಯಾತೀತಯನ್ನು ನಾಶ ಮಾಡುವುದಕ್ಕಾಗಿ ಬಿಜೆಪಿ ಮತೀಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ 1991ರ ಪೂಜಾ ಸಂರಕ್ಷಣಾ ಕಾಯ್ದೆಯು ದೇಶದಲ್ಲಿರುವ ಎಲ್ಲಾ ಪೂಜಾ ಸ್ಥಳಗಳನ್ನು 1947ರ ಆಗಸ್ಟ್‌ 15ರ ಸ್ಥಿತಿಯಲ್ಲಿ ಕಾಪಾಡಬೇಕೆಂದುನ್ನು ಎತ್ತಿ ಹಿಡಿದಿದೆ. ಆರ್‌ಎಸ್‌ಎಸ್‌ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ನೆಪದಲ್ಲಿ ಮಸೀದಿಗಳ ಕೆಳಗ ದೇವಸ್ಥಾನ ಇದೆ ಎಂದು ಗುಲ್ಲೆಬ್ಬಿಸಿ ಪೂಜಾಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದೇ ವಾದವನ್ನು ದಲಿತ ವಿಭಾಗಗಳು ಪ್ರತಿಪಾದಿಸಿದರೆ 3 ಸಾವಿರ ವರ್ಷಗಳಿಂದ ಅಸ್ಪೃಶ್ಯತೆ, ಜಾತಿ ತಾರತಮ್ಯವನ್ನು ಅನುಸರಿಸಿರುವ ಜಾತಿಗಳ ವಿರುದ್ಧ ಅಂತಹದ್ದೇ ದೌರ್ಜನ್ಯಗಳನ್ನು ನಡೆಸುವಂತಾಗಬಹುದು” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ಬದಲಿಗೆ ಅದರಿಂದ ಪಾಠಗಳನ್ನು ಕಲಿತು ಸಮಾನತೆಯ ಆಧಾರದಲ್ಲಿ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಳ್ಳುವುದನ್ನು ಸಂವಿಧಾನ ಪ್ರತಿಪಾದಿಸುತ್ತದೆ. ಇದಕ್ಕಾಗಿ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...