Homeದಲಿತ್ ಫೈಲ್ಸ್ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

- Advertisement -
- Advertisement -

ಕಾಲೇಜು ವಿದ್ಯಾರ್ಥಿನಿಯಾಗಿದ್ದ ದಲಿತ ಯುವತಿಯೊಬ್ಬಳು ತಾನು ಓದಿದ ಸಂಸ್ಥೆಯಲ್ಲಿ ಶುಲ್ಕ ಪಾವತಿಸದ ಕಾರಣಕ್ಕೆ ಎದುರಿಸಿದ ಮಾನಸಿಕ ತೊಂದರೆ ಮತ್ತು ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

22ರ ಹರೆಯದ ಯುವತಿಯು ಬಾಕಿ ಶುಲ್ಕವನ್ನು ಪಾವತಿಸುವಂತೆ ಒತ್ತಡದಿಂದ ಬಳಲುತ್ತಿದ್ದಳು. ಕಾಲೇಜು ಆಡಳಿತ ಆಕೆಗೆ ಕಿರುಕುಳ ನೀಡಿದೆ ಎಂದು ಕುಟುಂಬ ಆರೋಪಿಸಿದೆ. ಆಕೆ ಭಿವಾನಿ ಜಿಲ್ಲೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದರು.

ಡಿಸೆಂಬರ್ 24ರ ರಾತ್ರಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮಗಳು ಈ ತಿಂಗಳು ಐದನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಬೇಕಾಗಿತ್ತು. ಆದರೆ, ಶುಲ್ಕ ಬಾಕಿ ಇರುವ ಕಾರಣ ಕಾಲೇಜು ಆಡಳಿತ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಆಕೆಯ ತಂದೆ ಜಗದೀಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೆಲವು ಆರ್ಥಿಕ ಅಡಚಣೆಗಳಿಂದಾಗಿ ಸಮಯಕ್ಕೆ ಸರಿಯಾಗಿ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಕಾಲೇಜು ಪ್ರಾಂಶುಪಾಲರು ಮತ್ತು ಕೆಲವರು ಆಕೆಗೆ ಕಿರುಕುಳ ನೀಡಿದ್ದಾರೆ. ನನ್ನ ಮಗಳಿಗೆ ನ್ಯಾಯ ಬೇಕು ಎಂದರು.

ಲೋಹರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಿತೇಂದರ್, “ತನಿಖೆಯ ಸಮಯದಲ್ಲಿ ಹಲವು ಕೋನಗಳು ಬೆಳಕಿಗೆ ಬಂದಿವೆ. ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ನಾವು ತನಿಖೆ ನಡೆಸುತ್ತಿದ್ದೇವೆ. ಯಾವುದೇ ಡೆತ್ ನೋಟ್ ಕಂಡುಬಂದಿಲ್ಲ, ಪೋಸ್ಟ್‌ಮಾರ್ಟಂ ವರದಿಯೂ ಬಾಕಿ ಇದೆ” ಎಂದು ಹೇಳಿದರು.

ಆಕೆಯ ಕುಟುಂಬದ ದೂರಿನ ಮೇರೆಗೆ, ಬಿಎನ್‌ಎಸ್‌ ಸೆಕ್ಷನ್ 108 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಯಾಣದಲ್ಲಿ ದಲಿತ ಬಾಲಕಿಯೊಬ್ಬಳು ಪರೀಕ್ಷಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೇಸರದ ಸಂಗತಿ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

“ಈ ಘಟನೆಯು ದುಃಖ ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಮತ್ತು ಈ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ಮಾಡಬೇಕು” ಎಂದು ಸುರ್ಜೆವಾಲಾ ಮಂಗಳವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಯುವತಿಯ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹರಿಯಾಣದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಕ್ರಿಶನ್ ಕುಮಾರ್ ಬೇಡಿ ಮಂಗಳವಾರ ಹೇಳಿದ್ದಾರೆ. ಎಫ್‌ಐಆರ್‌ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದರು. ಸಂತ್ರಸ್ತೆ ಕುಟುಂಬದೊಂದಿಗೆ ಸರ್ಕಾರ ನಿಂತಿದೆ ಎಂದು ಬೇಡಿ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಈ ವಿಚಾರದಲ್ಲಿ ರಾಜಕೀಯ ಮಾಡದಂತೆ ಕಾಂಗ್ರೆಸ್‌ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...