Homeಮುಖಪುಟದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

- Advertisement -
- Advertisement -

“ತಮ್ಮ ಮೇಲಿನ ಉಡುಪನ್ನು ತೆಗೆದುಹಾಕಿದ ನಂತರ ದೇವಾಲಯಗಳಿಗೆ ಪ್ರವೇಶಿಸುವ ಅಭ್ಯಾಸವು ಕೆಟ್ಟದ್ದು, ಅದನ್ನು ತ್ಯಜಿಸಬೇಕು” ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥರಾಗಿರುವ ಪ್ರಮುಖ ಹಿಂದೂ ಸನ್ಯಾಸಿಯೊಬ್ಬರು ಹೇಳಿದ್ದಾರೆ.

ಈ ಸಲಹೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದು, ಇದು ಸಾಮಾಜಿಕ ಕ್ರಾಂತಿಯಾಗಿ ಬದಲಾಗಬಹುದು ಎಂದು ಹೇಳಿದ್ದಾರೆ.

ವಿಷಯ ಪ್ರಸ್ತಾಪಿಸಿದ ಸ್ವಾಮಿ ಸಚ್ಚಿದಾನಂದ, ಸಮಾಜ ಸುಧಾರಕ ಶ್ರೀನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ಅಧ್ಯಕ್ಷರು. ಇದು ಶ್ರೀ ನಾರಾಯಣ ಧರ್ಮ ಸಂಘದ ಪ್ರಧಾನ ಕಛೇರಿಯಾಗಿದೆ, ಗುರುಗಳು ತಮ್ಮ ಒಂದು ಜಾತಿ, ಒಂದು ಧರ್ಮ, ಒಂದೇ ದೇವರು ಎಂಬ ಪರಿಕಲ್ಪನೆಯನ್ನು ಪ್ರಚಾರ ಮಾಡಲು ಸ್ಥಾಪಿಸಿದ ಸಂಸ್ಥೆಯಾಗಿದೆ.

ಮಠವು ಕೇರಳದ ಹಿಂದುಳಿದ ಈಜವ ಹಿಂದೂ ಸಮುದಾಯದ ಪ್ರಮುಖ ಯಾತ್ರಾ ಕೇಂದ್ರವಾಗಿದೆ. ಸಮಾಜ ಸುಧಾರಕರಾಗಿ, ಗುರು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಕೆಳವರ್ಗದವರಿಗೆ ದೇವಾಲಯಗಳಿಗೆ ಪ್ರವೇಶಿಸುವ ಮತ್ತು ಪೂಜಿಸುವ ಹಕ್ಕನ್ನು ಪ್ರತಿಪಾದಿಸಿದರು.

ಮಠದಲ್ಲಿ ವಾರ್ಷಿಕ ಶಿವಗಿರಿ ಯಾತ್ರೆಯ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಸತ್ಚಿಂದನಾದನವರು, “ಇದು ಅನಿಷ್ಟ ಪದ್ಧತಿ. ಹಿಂದೆ, ಪುಣೂಲ್ (ಮೇಲ್ವರ್ಗದವರು ಧರಿಸುವ ಪವಿತ್ರ ದಾರ) ನೋಡಬಹುದೆಂದು ಖಚಿತಪಡಿಸಿಕೊಳ್ಳಲು ಈ ಅಭ್ಯಾಸವನ್ನು (ಮೇಲಿನ ಉಡುಪನ್ನು ತೆಗೆಯುವುದು) ಪ್ರಾರಂಭಿಸಲಾಯಿತು. ಆ ಪದ್ಧತಿ ಇಂದಿಗೂ ದೇವಸ್ಥಾನಗಳಲ್ಲಿ ಮುಂದುವರಿದಿದೆ. ಆ ಪದ್ಧತಿ ಬದಲಾಗಬೇಕು ಎಂದು ಶ್ರೀನಾರಾಯಣ ಸಮಾಜ ಬಯಸುತ್ತದೆ. ಇದೊಂದು ಅನಿಷ್ಟ ಪದ್ಧತಿ ಎಂಬುದರಲ್ಲಿ ಎರಡು ಮಾತಿಲ್ಲ. ಶ್ರೀನಾರಾಯಣ ದೇವಸ್ಥಾನಗಳಲ್ಲಿ ಈ ಪದ್ಧತಿ ಇಲ್ಲ. ಈ ನಿಟ್ಟಿನಲ್ಲಿ ಸಮಯೋಚಿತ ಬದಲಾವಣೆ ಅಗತ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನ್, ಶ್ರೀಗಳ ಅಭಿಪ್ರಾಯವನ್ನು ಬೆಂಬಲಿಸಿದರು. “ಸ್ವಾಮಿ ಅವರು ಒಂದು ಸಂದೇಶವನ್ನು ಉಲ್ಲೇಖಿಸಿದ್ದಾರೆ, ಅದು ಪ್ರಮುಖ ಸಾಮಾಜಿಕ ಹಸ್ತಕ್ಷೇಪವಾಗಿ ಬದಲಾಗಬಹುದು. ಗುರುವಿನ ಉದಾತ್ತ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಅನೇಕ ಪೂಜಾ ಸ್ಥಳಗಳು ಇದನ್ನು ಅನುಸರಿಸುತ್ತವೆ ಎಂದು ನನಗೆ ಖಾತ್ರಿಯಿದೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಹಲವು ಆಚರಣೆಗಳು ಬದಲಾಗಿರುವುದು ಸತ್ಯ. ಶ್ರೀ ನಾರಾಯಣ ಚಳವಳಿಗೆ ಸಂಬಂಧಿಸಿದ ದೇವಾಲಯಗಳು ಆ ಬದಲಾವಣೆಯನ್ನು ಅಳವಡಿಸಿಕೊಂಡಿವೆ. ಆ ಬದಲಾವಣೆಯನ್ನು ಇತರ ಪೂಜಾ ಸ್ಥಳಗಳು (ದೇವಾಲಯಗಳು) ಅನುಸರಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಕೇರಳದಲ್ಲಿ, ಅನೇಕ ಪ್ರಮುಖ ದೇವಾಲಯಗಳು ಇಂದಿಗೂ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಹೊಂದಿವೆ.

ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಡ್ರೆಸ್ ಕೋಡ್ ಬಗ್ಗೆ ಕೇರಳದಲ್ಲಿ ಈ ಹಿಂದೆಯೂ ಚರ್ಚೆಯಾಗಿತ್ತು. ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಮಹಿಳಾ ಭಕ್ತರು ಸಲ್ವಾರ್ ಕಮೀಜ್ ಅಥವಾ ಚೂಡಿದಾರ್ ಧರಿಸಲು ಅವಕಾಶ ನೀಡಬಾರದು ಎಂದು ಕೇರಳ ಹೈಕೋರ್ಟ್ 2016 ರಲ್ಲಿ ಹೇಳಿತ್ತು; ಬದಲಾಗಿ, ಅವರು ಪ್ರವೇಶಿಸಲು ತಮ್ಮ ಉಡುಪಿನ ಮೇಲೆ (ಚೂಡಿದಾರ್ ಅಥವಾ ಸಲ್ವಾರ್ ಕಮೀಜ್) ಧೋತಿಯನ್ನು ಧರಿಸಬೇಕು.

ಇದನ್ನೂ ಓದಿ; ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...