Homeಮುಖಪುಟನ್ಯಾಯಮೂರ್ತಿಗಳ ಸಂಬಂಧಿಕರಿಗೆ ಹುದ್ದೆ ನೀಡುವ ಕ್ರಮ ಪರಿಶೀಲನೆ : ಕೊಲಿಜಿಯಂ ನಿರ್ಧಾರ ಸ್ವಾಗತಿಸಿದ ಅಭಿಷೇಕ್ ಮನು...

ನ್ಯಾಯಮೂರ್ತಿಗಳ ಸಂಬಂಧಿಕರಿಗೆ ಹುದ್ದೆ ನೀಡುವ ಕ್ರಮ ಪರಿಶೀಲನೆ : ಕೊಲಿಜಿಯಂ ನಿರ್ಧಾರ ಸ್ವಾಗತಿಸಿದ ಅಭಿಷೇಕ್ ಮನು ಸಿಂಘ್ವಿ

- Advertisement -
- Advertisement -

ನ್ಯಾಯಮೂರ್ತಿಗಳ ಸಂಬಂಧಿಕರಿಗೇ ಹುದ್ದೆ ನೀಡುವ ಕ್ರಮ ಪರಿಶೀಲಿಸಲು ಮುಂದಾಗಿರುವ ಸುಪ್ರೀಂ ಕೋರ್ಟ್ ಕೊಲಿಜಿಯಂನ ನಿರ್ಧಾರವನ್ನು ಹಿರಿಯ ವಕೀಲ ಹಾಗೂ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರು ಸ್ವಾಗತಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ಮಾಜಿ ನ್ಯಾಯಮೂರ್ತಿಗಳ ನಿಕಟ ಸಂಬಂಧಿಗಳನ್ನು ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡುವ ಸಂಪ್ರಾಯದ ಪರಿಶೀಲನೆಗೆ ಮುಂದಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರೊಬ್ಬರ ಪ್ರಸ್ತಾವನೆ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಪದೋನ್ನತಿ ಸಂಬಂಧ ವಿವಿಧ ಹೈಕೋರ್ಟ್‌ಗಳು ಶಿಫಾರಸು ಮಾಡಿದ ಅಭ್ಯರ್ಥಿಗಳೊಂದಿಗೆ ಕೊಲಿಜಿಯಂ ಸಂವಹನ ನಡೆಸಲೂ ಮುಂದಾಗಿದೆ. ಈ ಎರಡೂ ನಿರ್ಧಾರಗಳು ಅತ್ಯುತ್ತಮವಾಗಿವೆ. ಇವುಗಳನ್ನು ಅತಿ ಬೇಗನೆ ಕಾರ್ಯಗತಗೊಳಿಸಬೇಕು ಎಂದು ಸಿಂಘ್ವಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಾಚೀನ ಕಾಲದಲ್ಲಿ ಕೆಲವು ಸುಲ್ತಾನರು ನಿಜವಾದ ಸಮಸ್ಯೆಗಳನ್ನು ಅರಿಯಲು ಮಾಡುತ್ತಿದ್ದಂತೆ, ಕೊಲಿಜಿಯಂ ನ್ಯಾಯಮೂರ್ತಿಗಳು ವೇಷ ಮರೆಸಿಕೊಂಡು ನ್ಯಾಯಮೂರ್ತಿ ಹುದ್ದೆಯ ಅಭ್ಯರ್ಥಿಗಳು ವಿಚಾರಣೆ ನಡೆಸುವ ನ್ಯಾಯಾಲಯದ ಕೊಠಡಿಗಳಲ್ಲಿ ಕೂತು ಮೌಲ್ಯಮಾಪನ ಮಾಡಬೇಕು. ಈ ಬಗ್ಗೆ ನಾನು ದಶಕದ ಹಿಂದೆಯೇ ಬರೆದಿದ್ದೆ ಎಂದು ಸಿಂಘ್ವಿ ಹೇಳಿದ್ದಾರೆ.

ಅಭ್ಯರ್ಥಿಗಳ ಸಿವಿಗೂ ವಾಸ್ತವಿಕತೆಗೂ, ಕಾಗದದ ಮೇಲಿನ ಮೌಲ್ಯಮಾಪನಕ್ಕೂ ಅಭ್ಯರ್ಥಿಗಳ ನ್ಯಾಯಾಲಯ ಕ್ಷಮತೆಗೂ ಇರುವ ವ್ಯತ್ಯಾಸ ಕಂಡು ಆಶ್ಚರ್ಯವಾಗಿದೆ. ಅಭ್ಯರ್ಥಿಗಳ ಬಗ್ಗೆ ನಡೆಸುತ್ತಿರುವ ಸಂದರ್ಶನಗಳು ಉತ್ತಮವಾಗಿಲ್ಲ. ಆದರೆ, ಮಾರುವೇಷದಲ್ಲಿ ದಿಢೀರನೆ ನಡೆಸುವ ಮೌಲ್ಯಮಾಪನ ಸಂಪೂರ್ಣ ಅವಾಸ್ತವಿಕವಲ್ಲ ಎಂದಿದ್ದಾರೆ.

ನ್ಯಾಯಾಂಗ ನೇಮಕಾತಿ ಮೂಲತಃ ಭಾವಿಸಿದ್ದಕ್ಕಿಂತ ಹೆಚ್ಚು ಅಸ್ಪಷ್ಟವಾಗಿದ್ದು, ಅಷ್ಟೇನೂ ವಸ್ತುನಿಷ್ಠವಾಗಿಲ್ಲ. ಸ್ವಜನ ಪಕ್ಷಪಾತ, ವಂಶಪಾರಂಪರ್ಯತೆ ಇತ್ಯಾದಿಗಳು ನ್ಯಾಯಾಧೀಶರಾಗಲು ಬಯಸುವ ಉಳಿದವರನ್ನು ನಿರಾಶೆಗೊಳಿಸುತ್ತಿವೆ. ಇಂತಹ ನೇಮಕಾತಿ ನ್ಯಾಯಾಂಗಕ್ಕೆ ಅಪಖ್ಯಾತಿ ತರುತ್ತಿದೆ. ನ್ಯಾಯಮೂರ್ತಿಗಳ ಸಂಬಂಧಿಕರು ಅದೇ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್‌ ಮಾಡುವಂತಹ ಚಟುವಟಿಕೆಗಳನ್ನು ನಿರ್ಬಂಧಿಸಲು ಸಾಧ್ಯವಾಗುತ್ತಿಲ್ಲ ಎಂದು ಸಿಂಘ್ವಿ ಹೇಳಿದ್ದಾರೆ.

ಪ್ರಸ್ತುತ ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ಸಿಜೆಐ ಸಂಜೀವ್ ಖನ್ನಾ ಅವರು ಮಾತ್ರವಲ್ಲದೆ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಸೂರ್ಯ ಕಾಂತ್, ಹೃಷಿಕೇಶ್ ರಾಯ್ ಹಾಗೂ ಎ.ಎಸ್‌ ಓಕಾ ಸದಸ್ಯರಾಗಿದ್ದಾರೆ.

ಇದನ್ನೂ ಓದಿ : ಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...