Homeಕರ್ನಾಟಕಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಿಎಂ...

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು (ಜ.1) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್‌ನ ಗುತ್ತಿಗೆದಾರನ ಡೆತ್‌ನೋಟ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಆದಾಗ್ಯೂ, ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಆದರೆ ಇಂತಹದೇ ಪ್ರಕರಣದಲ್ಲಿ ಈ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಹೇಳಿದರು.

‘ಬಿಜೆಪಿ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ’

ಬಿಜೆಪಿಯವರು ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ, ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿ.ಟಿ ರವಿ ಪ್ರಕರಣದ ಸಿಐಡಿ ತನಿಖೆ

ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸಿ.ಟಿ ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿರುವ ಬಗ್ಗೆ ಎಫ್‌ಎಸ್‌ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ ರವಿಯವರ ಮೇಲೆ ದೂರು ದಾಖಲಾಗಿದೆ ಎಂದರು.

ಹೊಸ ವರ್ಷದ ಸಂದರ್ಭದಲ್ಲಿ ವಿರೋಧ ಪಕ್ಷದವರಿಗೆ ಭಗವಂತ ಸದ್ಭುದ್ಧಿಯನ್ನು ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ : ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...