Homeಮುಖಪುಟಸೆಂಟ್ರಲ್ ಕೈವ್ ಮೇಲೆ ರಷ್ಯಾ ಡ್ರೋನ್‌ ದಾಳಿಯಿಂದ ಇಬ್ಬರು ಸಾವು; ಹಲವರಿಗೆ ಗಾಯ

ಸೆಂಟ್ರಲ್ ಕೈವ್ ಮೇಲೆ ರಷ್ಯಾ ಡ್ರೋನ್‌ ದಾಳಿಯಿಂದ ಇಬ್ಬರು ಸಾವು; ಹಲವರಿಗೆ ಗಾಯ

- Advertisement -
- Advertisement -

ರಷ್ಯಾ 2025 ರ ಮೊದಲ ದಿನ ಉಕ್ರೇನ್‌ನ ಕೈವ್ ಕೇಂದ್ರದ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಾಳಾಗಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೊಸ ವರ್ಷದ ಸಂದೇಶದಲ್ಲಿ, ‘ಮುಂದಿನ 12 ತಿಂಗಳುಗಳಲ್ಲಿ ಯುದ್ಧವನ್ನು ಅಂತ್ಯಗೊಳಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುವುದಾಗಿ’ ಪ್ರತಿಜ್ಞೆ ಮಾಡಿದ ಕೆಲವೇ ಗಂಟೆಗಳ ನಂತರ ಈ ದಾಳಿ ಸಂಭವಿಸಿದೆ.

ರಷ್ಯಾದ ಡ್ರೋನ್‌ಗಳನ್ನು ರಾಜಧಾನಿಯತ್ತ ಹಾರಿಸಿದ ನಂತರ ಇಬ್ಬರು ಸತ್ತರು, ಆರು ಮಂದಿ ಗಾಯಗೊಂಡರು ಮತ್ತು ನಾಲ್ವರು ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ಉಕ್ರೇನ್‌ನ ರಾಜ್ಯ ತುರ್ತು ಸೇವೆಗಳು ತಿಳಿಸಿವೆ.

ನಗರದಲ್ಲಿ ಎಎಫ್‌ಪಿ ಪತ್ರಕರ್ತರು ಬುಧವಾರ ಮುಂಜಾನೆ ಬಹು ಶಕ್ತಿಯುತ ಸ್ಫೋಟಗಳನ್ನು ಕೇಳಿದ್ದಾಗಿ ವರದಿ ಮಾಡಿದ್ದಾರೆ.

ರಷ್ಯಾದ ಡ್ರೋನ್‌ಗಳು ರಾಜಧಾನಿಯ ಪೆಚೆರ್ಸ್ಕಿ ಜಿಲ್ಲೆಯನ್ನು ಗುರಿಯಾಗಿಸಿಕೊಂಡಿವೆ ಎಂದು ಉಕ್ರೇನಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ಇವು ಅಧ್ಯಕ್ಷರ ಅರಮನೆ ಮತ್ತು ಸರ್ಕಾರಿ ಕ್ವಾರ್ಟರ್‌ನ ನೆಲೆಯಾಗಿದೆ.

ದಾಳಿಯಿಂದ ಅಪಾರ್ಟ್‌ಮೆಂಟ್ ಬ್ಲಾಕ್‌ಗಳು ಹಾಣಿಯಾಗಿವೆ. ಉಕ್ರೇನ್‌ನ ಸೆಂಟ್ರಲ್ ಬ್ಯಾಂಕ್ ಸಿಟಿ ಸೆಂಟರ್‌ನಲ್ಲಿರುವ ಅದರ ಒಂದು ಕಟ್ಟಡವು ದಾಳಿಯಲ್ಲಿ ಜಖಂಗೊಂಡಿದೆ ಎಂದು ಹೇಳಿದರು.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇತ್ತೀಚಿನ ವಾರಗಳಲ್ಲಿ ಕೈವ್‌ನ ಹೃದಯಭಾಗದಲ್ಲಿ ಹೊಡೆಯುವುದಾಗಿ ಪದೇಪದೆ ಬೆದರಿಕೆ ಹಾಕಿದ್ದಾರೆ. ರಷ್ಯಾದ ಭೂಪ್ರದೇಶದ ಮೇಲೆ ಉಕ್ರೇನ್ ಯುಎಸ್ ಸರಬರಾಜು ಮಾಡಿದ ಶಸ್ತ್ರಾಸ್ತ್ರಗಳನ್ನು ಹಾರಿಸುವುದಕ್ಕೆ ಪ್ರತಿಕ್ರಿಯೆಯಾಗಿದೆ ಎಂದು ಅವರು ಹೇಳಿದರು.

“ಹೊಸ ವರ್ಷದ ರಾತ್ರಿಯೂ ಸಹ, ರಷ್ಯಾ ಉಕ್ರೇನ್‌ಗೆ ಹಾನಿ ಮಾಡುವ ಬಗ್ಗೆ ಮಾತ್ರ ಕಾಳಜಿ ವಹಿಸುತ್ತದೆ” ಎಂದು ಅವರು ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಟ್ಟು 111 ರಷ್ಯಾದ ಡ್ರೋನ್‌ಗಳನ್ನು ರಾತ್ರಿಯಿಡೀ ಉಕ್ರೇನ್‌ನಲ್ಲಿ ಹಾರಿಸಲಾಯಿತು, 109 ಉಕ್ರೇನ್‌ನ ವಾಯು ರಕ್ಷಣಾ ವ್ಯವಸ್ಥೆಗಳಿಂದ ಹೊಡೆದುರುಳಿಸಲಾಗಿದೆ ಅಥವಾ ನಿಷ್ಕ್ರಿಯಗೊಳಿಸಲಾಗಿದೆ ಎಂದು ಉಕ್ರೇನಿಯನ್ ವಾಯುಪಡೆ ತಿಳಿಸಿದೆ.

ಕಳೆದ ಎರಡು ತಿಂಗಳುಗಳಲ್ಲಿ ಎರಡೂ ಕಡೆಯವರು ತಮ್ಮ ವೈಮಾನಿಕ ದಾಳಿಯನ್ನು ಹೆಚ್ಚಿಸಿದ್ದಾರೆ. ಜನವರಿಯಲ್ಲಿ ನಂತರ ಅಧಿಕಾರಕ್ಕೆ ಬರಲಿರುವ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೆ ಸಂಘರ್ಷದಲ್ಲಿ ಮೇಲುಗೈ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ; ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...