ಪಂಜಾಬ್ ಸರ್ಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಸರ್ಕಾರ ಅಧಿಕಾರಿಗಳು ಮತ್ತು ಕೆಲವು ರೈತ ಮುಖಂಡರು ಮಾಧ್ಯಮಗಳಲ್ಲಿ ತಪ್ಪು ಅಭಿಪ್ರಾಯವನ್ನು ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದೆ. ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸವನ್ನು ಮುರಿಯಲು ಸುಪ್ರೀಂಕೋರ್ಟ್ ಪ್ರಯತ್ನಿಸುತ್ತಿದೆ ಎಂಬಂತೆ ಬಿಂಬಿಸಲಾಗುತ್ತಿದೆ ಅದು ಹೇಳಿದೆ. ದಲ್ಲೆವಾಲ್ ಪ್ರತಿಭಟನೆ
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ದಲ್ಲೆವಾಲ್ ಅವರ ಪ್ರತಿಭಟನೆಯನ್ನು ಮುರಿಯಲು ನ್ಯಾಯಾಲಯವು ಎಂದಿಗೂ ನಿರ್ದೇಶಿಸಿಲ್ಲ, ನ್ಯಾಯಾಲಯವು ಅವರ ಆರೋಗ್ಯದ ಬಗ್ಗೆ ಮಾತ್ರ ಕೋರ್ಟ್ ಕಾಳಜಿ ವಹಿಸುತ್ತದೆ ಮತ್ತು ಅವರಿಗೆ ತುರ್ತು ವೈದ್ಯಕೀಯ ನೆರವು ನೀಡಬೇಕು ಎಂದು ಸ್ಪಷ್ಟಪಡಿಸಬೇಕಾಗಿದೆ ಎಂದು ಹೇಳಿದೆ. ದಲ್ಲೆವಾಲ್ ಪ್ರತಿಭಟನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ನ್ಯಾಯಾಲಯವು ಹೆಚ್ಚು ಹೇಳಲು ಬಯಸುವುದಿಲ್ಲ ಆದರೆ ಪಂಜಾಬ್ ಸರ್ಕಾರದ ಅಧಿಕಾರಿಗಳು ಮತ್ತು ಕೆಲವು ರೈತ ಮುಖಂಡರು ಮಾಧ್ಯಮಗಳಲ್ಲಿ ಬೇಜವಾಬ್ದಾರಿ ಹೇಳಿಕೆಗಳು ಸ್ಥಳದ ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸುವಂತೆ ತೋರುತ್ತಿದೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ. ಅಷ್ಟೆ ಅಲ್ಲದೆ, “ದಲ್ಲೆವಾಲ್ ಬಗ್ಗೆ ಕೆಲವು ರೈತ ಮುಖಂಡರ ವಿಶ್ವಾಸವನ್ನು ನಾವು ಪರಿಶೀಲಿಸಬೇಕಾಗಿದೆ” ಎಂದು ಪೀಠವು ಹೇಳಿದೆ.
ಅದಾಗ್ಯೂ, ಪಂಜಾಬ್ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಅವರು ಪರಿಸ್ಥಿತಿಯನ್ನು ಬಿಗಡಾಯಿಸುವ ಯಾವುದೇ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ ಎಂದು ಹೇಳಿದ್ದು, ದಲ್ಲೆವಾಲ್ ಅವರ ಉಪವಾಸವನ್ನು ಮುರಿಯದೆ ವೈದ್ಯಕೀಯ ನೆರವು ಪಡೆಯಲು ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ದಲ್ಲೆವಾಲ್ ಅವರನ್ನು ಸರ್ಕಾರದ ವೈದ್ಯಕೀಯ ಸೌಲಭ್ಯಗಳಿಗೆ ವರ್ಗಾಯಿಸಲು ಪಂಜಾಬ್ ಸರ್ಕಾರಕ್ಕೆ ನ್ಯಾಯಾಲಯವು ಡಿಸೆಂಬರ್ 20 ರಂದು ಆದೇಶ ನೀಡಿತ್ತು. ಈ ಆದೇಶದ ಅನುಸರಣೆಯ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸುವಂತೆ ಅದು ಪಂಜಾಬ್‌ನ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ)ಗೆ ಕೇಳಿದೆ. ಜನವರಿ 6 ರಂದು ಮುಂದಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ಈ ವಿಷಯವನ್ನು ಪಟ್ಟಿ ಮಾಡಿದೆ.
ಈ ನಡುವೆ, 2021ರ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ರೈತರ ಬೆಳೆಗಳ ಮೇಲೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಅಂದು ನೀಡಿದ್ದ ಭರವಸೆಗಳನ್ನು ಪಾಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದಲ್ಲೆವಾಲ್ ಪರವಾಗಿ ಸಲ್ಲಿಸಲಾದ ಹೊಸ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ: ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು
ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು


