Homeಮುಖಪುಟಬಜೆಟ್ 2025 ಹಿನ್ನೆಲೆ | ಸರಣಿ ಸಭೆಗಳನ್ನು ನಡೆಸುತ್ತಿರುವ ವಿತ್ತಸಚಿವೆ ನಿರ್ಮಲಾ ಸೀತಾರಾಮನ್!

ಬಜೆಟ್ 2025 ಹಿನ್ನೆಲೆ | ಸರಣಿ ಸಭೆಗಳನ್ನು ನಡೆಸುತ್ತಿರುವ ವಿತ್ತಸಚಿವೆ ನಿರ್ಮಲಾ ಸೀತಾರಾಮನ್!

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪೂರ್ವ ಸರಣಿ ಸಮಾಲೋಚನೆಗಳ ಭಾಗವಾಗಿ ಹಣಕಾಸು ವಲಯ ಮತ್ತು ಬಂಡವಾಳ ಮಾರುಕಟ್ಟೆಗಳ ಮಧ್ಯಸ್ಥಗಾರರನ್ನು ಗುರುವಾರ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಬಜೆಟ್ 2025 ಹಿನ್ನೆಲೆ

ಸಭೆಯಲ್ಲಿ ಹಣಕಾಸು ಕಾರ್ಯದರ್ಶಿ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ, ಮತ್ತು ಆರ್ಥಿಕ ವ್ಯವಹಾರಗಳ ಇಲಾಖೆ – ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಗಳು ಮತ್ತು ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರು ಭಾಗವಹಿಸಿದ್ದರು ಎಂದು ಇಕನಾಮಿಕ್ಸ್‌ ಟೈಮ್ಸ್ ವರದಿ ಹೇಳಿದೆ.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಡೆಸಿದ ಬಜೆಟ್ ಪೂರ್ವ ಸರಣಿ ಸಭೆಗಳಲ್ಲಿ ಏಳನೇ ಸಭೆ ಇದಾಗಿದೆ ಎಂದು ವರದಿ ಉಲ್ಲೇಖಿಸಿದೆ. ಹಣಕಾಸು ಸಚಿವಾಲಯವು ತಜ್ಞರು, ಉದ್ಯಮದ ಮುಖಂಡರು, ಅರ್ಥಶಾಸ್ತ್ರಜ್ಞರು ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ವಾರ್ಷಿಕವಾಗಿ ಹಲವಾರು ಬಜೆಟ್ ಪೂರ್ವ ಸಮಾಲೋಚನಾ ಸಭೆಗಳನ್ನು ನಡೆಸುತ್ತದೆ. ಮುಂದಿನ ಹಣಕಾಸು ವರ್ಷಕ್ಕೆ ವಾರ್ಷಿಕ ಬಜೆಟ್ ಸಿದ್ಧಪಡಿಸುವ ಔಪಚಾರಿಕ ಕಸರತ್ತು ಈಗಾಗಲೇ ಆರಂಭವಾಗಿದೆ. ಬಜೆಟ್ 2025 ಹಿನ್ನೆಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಿರ್ಮಲಾ ಸೀತಾರಾಮನ್ ಇದುವರೆಗೆ ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ)ಗಳು, ರೈತರ ಸಂಘಗಳು ಮತ್ತು ಅರ್ಥಶಾಸ್ತ್ರಜ್ಞರು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ಇಕನಾಮಿಕ್ಸ್‌ ಟೈಮ್ಸ್ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವಾರ ನೀತಿ ಆಯೋಗ ಆವರಣದಲ್ಲಿ ಕೇಂದ್ರ ಬಜೆಟ್ 2025-26 ರ ತಯಾರಿಯಲ್ಲಿ ಖ್ಯಾತ ಅರ್ಥಶಾಸ್ತ್ರಜ್ಞರು ಮತ್ತು ಚಿಂತಕರ ಗುಂಪಿನೊಂದಿಗೆ ಸಂವಾದ ನಡೆಸಿದ್ದರು. ವರದಿಯಂತೆ 2025-26ರ ಬಜೆಟ್ ಅನ್ನು ಫೆಬ್ರವರಿ 1, 2025 ರಂದು ಮಂಡಿಸಲಾಗುತ್ತದೆ.

2025-26ರ ಬಜೆಟ್ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಎಂಟನೇ ಬಜೆಟ್ ಆಗಲಿದ್ದು, ಮೋದಿ 3.0 ಸರ್ಕಾರದ ಪ್ರಮುಖ ಘೋಷಣೆಗಳು ಮತ್ತು ಸರ್ಕಾರದ ಮುಂದಿನ ನಡೆಗಳ ಬಗ್ಗೆ ಎಲ್ಲರ ಕಣ್ಣುಗಳು ನಟ್ಟಿವೆ. ಅಲ್ಲದೆ, ದುರ್ಬಲ ಜಿಡಿಪಿ ಬೆಳವಣಿಗೆ ಮತ್ತು ಸಂಕಷ್ಟದ ಆರ್ಥಿಕತೆಯ ನಡುವೆ ಈ ಬಜೆಟ್‌ಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ 2024-25 ರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯ ವಾಸ್ತವ ಬೆಳವಣಿಗೆ 5.4% ಆಗಿದೆ.  ರಿಸರ್ವ್ ಬ್ಯಾಂಕ್ ತನ್ನ ಇತ್ತೀಚಿನ ಹಣಕಾಸು ನೀತಿಯಲ್ಲಿ 2024-25 ರ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು 7.2% ರಿಂದ 6.6% ಕ್ಕೆ ಕಡಿತಗೊಳಿಸಿದೆ.

ಇದನ್ನೂ ಓದಿ: ಮನು ಭಾಕರ್-ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ; ಜನವರಿ 17 ರಂದು ಪ್ರಶಸ್ತಿ ಪ್ರದಾನ

ಮನು ಭಾಕರ್-ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ; ಜನವರಿ 17 ರಂದು ಪ್ರಶಸ್ತಿ ಪ್ರದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...