Homeಕರ್ನಾಟಕಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು-ಪುಣೆಗೆ ಅಗ್ರ ಸ್ಥಾನ

ಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು-ಪುಣೆಗೆ ಅಗ್ರ ಸ್ಥಾನ

- Advertisement -
- Advertisement -

ಭಾರತದ ಅನೇಕ ನಗರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರಿಗೆ ಟ್ರಾಫಿಕ್ ಜಾಮ್ ಒಂದು ಪ್ರಮುಖ ಸಮಸ್ಯೆಯಾಗಿ ಮುಂದುವರಿದಿದೆ. 2024 ರ ‘ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್‌’ನ ಇತ್ತೀಚಿನ ವರದಿಯು, 6 ಖಂಡಗಳ 55 ದೇಶಗಳ 387 ನಗರಗಳಲ್ಲಿ ಟ್ರಾಫಿಕ್ ಸಮಸ್ಯೆಯ ಕುರಿತು ಅಧ್ಯಯನ ನಡೆಸಿದೆ. ದಟ್ಟಣೆಯ ದೃಷ್ಟಿಯಿಂದ ಏಷ್ಯಾದ ಅತ್ಯಂತ ಕೆಟ್ಟ ನಗರಗಳಲ್ಲಿ ಎರಡು ಭಾರತೀಯ ನಗರಗಳು ಸ್ಥಾನ ಪಡೆದುಕೊಂಡಿವೆ.

ವರದಿಯ ಪ್ರಕಾರ, ಜಾಗತಿಕ ಪಟ್ಟಿಯಲ್ಲಿ ಲಂಡನ್ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರು 6ನೇ ಸ್ಥಾನದಲ್ಲಿದ್ದು, ವಾರ್ಷಿಕವಾಗಿ ಪ್ರಯಾಣಿಕರು 132 ಗಂಟೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನ ನಂತರ, ಪುಣೆ ಏಳನೇ ಸ್ಥಾನವನ್ನು ಪಡೆದುಕೊಂಡಿದೆ, ಅಲ್ಲಿ ಜನರು ಸರಾಸರಿ 27 ನಿಮಿಷ ಮತ್ತು 10 ಸೆಕೆಂಡುಗಳನ್ನು ಟ್ರಾಫಿಕ್‌ನಲ್ಲಿ ಕಳೆಯುತ್ತಾರೆ. ಅಂದರೆ, 128 ಹೆಚ್ಚುವರಿ ಗಂಟೆಗಳು. ಅಲ್ಲದೆ, ಭಾರತದ ನಗರಗಳಾದ ನವದೆಹಲಿ ಮತ್ತು ಮುಂಬೈ ಕೂಡ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು, ಕ್ರಮವಾಗಿ 44 ಮತ್ತು 54 ಸ್ಥಾನಗಳನ್ನು ಪಡೆದಿವೆ.

“ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ 2023 ರ ಪ್ರಕಾರ, ಬೆಂಗಳೂರಿನಲ್ಲಿ ಚಾಲಕರು ಪ್ರತಿ 10 ಕಿಮೀಗೆ ಸರಾಸರಿ 28 ನಿಮಿಷಗಳು ಮತ್ತು 10 ಸೆಕೆಂಡುಗಳನ್ನು ಟ್ರಾಫಿಕ್‌ನಲ್ಲಿ ಕಳೆಯುತ್ತಾರೆ. ಒಟ್ಟು 132 ಹೆಚ್ಚುವರಿ ಗಂಟೆಗಳ ಪೀಕ್ ಅವರ್‌ನಲ್ಲಿ ವಾರ್ಷಿಕವಾಗಿ ಕಳೆಯುತ್ತಾರೆ. ಪುಣೆ, ಮನಿಲಾ ಮತ್ತು ತೈಚುಂಗ್ ಸಹ ನಿಧಾನವಾದ ನಗರ ಕೇಂದ್ರಗಳಲ್ಲಿ ಸ್ಥಾನ ಪಡೆದಿವೆ. ಏಷ್ಯಾದಲ್ಲಿ, ಲಂಡನ್ ಅತಿ ಉದ್ದದ ಪ್ರಯಾಣದ ಸಮಯವನ್ನು ಹೊಂದಿರುವ ಜಾಗತಿಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ” ಎಂದು ಸಂಸ್ಥೆ ಹೇಳಿದೆ.

ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ ಪ್ರಪಂಚದಾದ್ಯಂತದ ನಗರಗಳನ್ನು ಅವುಗಳ ಸರಾಸರಿ ಪ್ರಯಾಣದ ಸಮಯ, ಇಂಧನ ವೆಚ್ಚಗಳು ಮತ್ತು ಸಿಒ2 ಹೊರಸೂಸುವಿಕೆಯಿಂದ ಮೌಲ್ಯಮಾಪನ ಮಾಡುತ್ತದೆ, ಉತ್ತಮ ಗುಣಮಟ್ಟದ ಮತ್ತು ಉಪಯುಕ್ತ ಮಾಹಿತಿಗೆ ಉಚಿತ ಪ್ರವೇಶವನ್ನು ಒದಗಿಸುತ್ತದೆ.

ಇದನ್ನೂ ಓದಿ; ಬಿಹಾರ ಸಿವಿಲ್ ಸರ್ವೀಸ್ ಪರೀಕ್ಷೆ ವಿವಾದ; ಉಪವಾಸ ಸತ್ಯಾಗ್ರಹ ಆರಂಭಿಸಿದ ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...