Homeಮುಖಪುಟಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

- Advertisement -
- Advertisement -

ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆ (Occupied West Bank)ಯ ತನ್ನ ಪ್ರದೇಶದಲ್ಲಿ ಕತಾರ್ ಮೂಲದ ಪ್ರಸಿದ್ದ ಸುದ್ದಿ ಸಂಸ್ಥೆ ಅಲ್‌-ಜಝೀರಾದ ಪ್ರಸಾರ ಮತ್ತು ಕಾರ್ಯಾಚರಣೆಯನ್ನು ಪ್ಯಾಲೆಸ್ತೀನ್ ಪ್ರಾಧಿಕಾರ (ಪಿಎ) ನಿಷೇಧಿಸಿದೆ.

ಒಂದು ಕಾಲದಲ್ಲಿ  ಪ್ಯಾಲೆಸ್ತೀನ್ ದೇಶದ ಭಾಗವಾಗಿದ್ದ ಪಶ್ಚಿಮ ದಂಡೆಯ ಬಹುತೇಕ ಪ್ರದೇಶಗಳನ್ನು ಪ್ರಸ್ತುತ ಇಸ್ರೇಲ್ ಆಕ್ರಮಿಸಿಕೊಂಡಿದೆ. ಅಳಿದುಳಿದ ಕೆಲ ಪ್ರದೇಶಗಳು ಈಗಲೂ ಕೂಡ ಪ್ಯಾಲೆಸ್ತೀನ್ ಭಾಗವಾಗಿದೆ. ಅದರ ನಿಯಂತ್ರಣ ಪ್ಯಾಲೆಸ್ತೀನ್‌ ಸರ್ಕಾರದ ಅಧೀನದಲ್ಲಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ಕೈಯಲ್ಲಿದೆ.

ಅದೇ ಪ್ಯಾಲೆಸ್ತೀನ್ ಪ್ರಾಧಿಕಾರ ಈಗ ಅಲ್‌-ಜಝೀರಾ ಸುದ್ದಿ ಸಂಸ್ಥೆಯ ಕಾರ್ಯಾಚರಣೆಗೆ ತಡೆ ಒಡ್ಡಿದೆ.

ಅಲ್‌ ಜಝೀರಾ ಪ್ರಸಾರ ಮಾಡುವ ಸುದ್ದಿಗಳು ಪ್ರಚೋದನಕಾರಿಯಾಗಿವೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ ಹಾಗೂ ದೇಶದ್ರೋಹ ಎಸಗಿದ್ದಕ್ಕಾಗಿ ಮತ್ತು ಪ್ಯಾಲೆಸ್ತೀನ್‌ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸಿದ್ದಕ್ಕಾಗಿ ಅಲ್‌- ಜಝೀರಾದ ಪ್ರಸಾರವನ್ನು ಅಮಾನತಿನಲ್ಲಿರಿಸಲಾಗಿದೆ ಎಂದು ಪ್ಯಾಲೆಸ್ತೀನ್‌ನ ಅಧಿಕೃತ ಸುದ್ದಿ ಸಂಸ್ಥೆ ವಾಫಾ ಬುಧವಾರ (ಜ.1) ಸಂಜೆ ವರದಿ ಮಾಡಿದೆ.

2023ರ ಅಕ್ಟೋಬರ್ 7ರಿಂದ ಹಮಾಸ್ ನಿಯಂತ್ರಣದ ಪ್ಯಾಲೆಸ್ತೀನ್‌ನ ಭಾಗವಾಗಿರುವ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ಕುರಿತು ಅಲ್‌-ಜಝೀರಾ ನಿರಂತರ ಸುದ್ದಿ ಪ್ರಕಟಿಸುತ್ತಿದೆ. ಯುದ್ಧದಿಂದ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜೀವಗಳ ಪರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ವರದಿಗಳು, ಸಾಕ್ಷ್ಯ ಚಿತ್ರಗಳ ಮೂಲ ಗಾಝಾದ ನೈಜ ಚಿತ್ರಣವನ್ನು ಜಗತ್ತಿನ ಮುಂದೆ ತೆರೆದಿಡುವ ಕೆಲಸ ಮಾಡುತ್ತಿದೆ. ಈ ಪ್ರಯತ್ನದಲ್ಲಿ ಹಲವು ಸಿಬ್ಬಂದಿಯನ್ನು ಅಲ್‌-ಜಝೀರಾ ಕಳೆದುಕೊಂಡಿದೆ.

ಅಲ್‌-ಜಝೀರಾ ತಮ್ಮ ವಿರುದ್ದ ಸುದ್ದಿ ಪ್ರಕಟಿಸುವುದನ್ನು ಸಹಿಸದ ಇಸ್ರೇಲ್ ಸರ್ಕಾರ 2024ರ ಮೇ ತಿಂಗಳಲ್ಲಿ ಸಂಪೂರ್ಣ ಇಸ್ರೇಲ್‌ ಪ್ರದೇಶದಲ್ಲಿ ಅಲ್‌-ಜಝೀರಾವನ್ನು ನಿಷೇಧಿಸಿತ್ತು. ಆ ಬಳಿಕ ಆಕ್ರಮಿತ ಪಶ್ಚಿಮ ದಂಡೆಯ ರಾಮಲ್ಲಾಹ್‌ನಲ್ಲಿ ಅಲ್‌-ಜಝೀರಾದ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿದೆ.

‘ಇಸ್ರೇಲ್ ರೀತಿಯ ನಡೆ’

ಪಶ್ಚಿಮ ದಂಡೆಯಲ್ಲಿ ತಮ್ಮ ಕಾರ್ಯಾಚರಣೆ ಮತ್ತು ಪ್ರಸಾರವನ್ನು ನಿಷೇಧಿಸಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ಅಲ್‌-ಜಝೀರಾ ತೀವ್ರವಾಗಿ ಖಂಡಿಸಿದೆ. ಇದು ಇಸ್ರೇಲ್‌ ರೀತಿಯ ನಡೆಯಾಗಿದೆ. ನಾವು ಸದಾ ಪ್ಯಾಲೆಸ್ತೀನ್ ಜನತೆಯ ಧ್ವನಿಯಾಗಿದ್ದೆವು ಎಂದು ಹೇಳಿದೆ.

‘ಪತ್ರಿಕೋದ್ಯಮದ ವಿರುದ್ಧದ ಅಪರಾಧ’

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವುದನ್ನು ಗಾಝಾದ ಪತ್ರಕರ್ತರು ಖಂಡಿಸಿದ್ದಾರೆ. ಗುರುವಾರ (ಜ.2) ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಬಳಿ ಜಮಾಯಿಸಿದ ಪತ್ರಕರ್ತರು, ಇದು ‘ಪತ್ರಿಕೋದ್ಯಮದ ವಿರುದ್ದದ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಷೇಧ ಹಿಂಪಡೆಯಲು ಆಗ್ರಹ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ವಿಶ್ವ ಸಂಸ್ಥೆ ಖಂಡಿಸಿದೆ. ತಕ್ಷಣ ನಿಷೇಧ ಹಿಂಪಡೆಯುವಂತೆ ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯದ ದಮನದ ಕುರಿತು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು-ಪುಣೆಗೆ ಅಗ್ರ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...